ಹರಿಹರದಲ್ಲಿ ರೀಚ್ ಸಂಸ್ಥೆಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ.

ಬಾಲ್ಯವಿವಾಹ ಮತ್ತು ಬಾಲಕಾರ್ಮಿಕ ಪದ್ಧತಿ ತಡೆಗೆ ರೀಚ್ ಸಂಸ್ಥೆಯ ಜಾಗೃತಿ

ಹರಿಹರ, ಅ. 27:

ವರದಿ ಮತ್ತು ಫೋಟೋ ಕೃಪೆ, ಕುಮಾರ್

ನಗರದ ಶ್ರೀ ಹರಿಹರೇಶ್ವರ ಸ್ವಾಮಿ ದೇವಾಲಯದಿಂದ ಆರಂಭವಾದ ಮಹರ್ಷಿ ವಾಲ್ಮೀಕಿ ಜಯಂತಿಯ ಮೆರವಣಿಗೆಯನ್ನು ಗಾಂಧಿ ವೃತ್ತದಲ್ಲಿ ನಾಯಕ ಸಮಾಜದ ಮುಖಂಡರು ಪಟಾಕಿ ಸಿಡಿಸಿ ಸಂಭ್ರಮದಿಂದ ಸ್ವಾಗತಿಸಿದರು.

ಮೆರವಣಿಗೆಯು ರಾಣಿಚನ್ನಮ್ಮ ವೃತ್ತದ ಮೂಲಕ ಸಾಗಿ ಗಾಂಧಿ ವೃತ್ತಕ್ಕೆ ಆಗಮಿಸಿತು. ಈ ಸಂದರ್ಭದಲ್ಲಿ ರೀಚ್ ಸಂಸ್ಥೆಯ ವತಿಯಿಂದ ಮಕ್ಕಳ ಹಕ್ಕುಗಳ ರಕ್ಷಣೆ, ಬಾಲ್ಯವಿವಾಹ ನಿರ್ಮೂಲನೆ ಹಾಗೂ ಬಾಲಕಾರ್ಮಿಕ ಪದ್ಧತಿ ತಡೆಗಟ್ಟುವ ಕುರಿತು ಜಾಗೃತಿ ಮೂಡಿಸಲಾಯಿತು.

ಈ ವೇಳೆ ಮಾತನಾಡಿದ ಶಾಸಕ ಬಿ.ಪಿ. ಹರೀಶ್, ರೀಚ್ ಸಂಸ್ಥೆಯು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ. ಬಾಲ್ಯವಿವಾಹವನ್ನು ತಡೆಗಟ್ಟುವುದು, ಬಾಲಕಾರ್ಮಿಕರನ್ನು ಗುರುತಿಸಿ ಅವರಿಗೆ ಶಿಕ್ಷಣದ ಅವಕಾಶ ಕಲ್ಪಿಸುವ ಮೂಲಕ ಮಕ್ಕಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಸಂಸ್ಥೆ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು. ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಹಾಗೂ ಮಕ್ಕಳ ಹಕ್ಕುಗಳು ರಕ್ಷಿಸಲ್ಪಡಬೇಕು ಎಂಬ ಉದ್ದೇಶದಿಂದ ಸಂಸ್ಥೆ ಶ್ರಮಿಸುತ್ತಿದೆ ಎಂದರು.

ನಂತರ ಮಾತನಾಡಿದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಎನ್.ಎಚ್. ಶ್ರೀನಿವಾಸ್ ನಂದಿಗಾವಿ, ಸಮಾಜದಲ್ಲಿ ಸಮಾನತೆ, ಶಿಕ್ಷಣದ ಮಹತ್ವ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಯ ಸಂದೇಶವನ್ನು ಸಾರುವ ಮೂಲಕ ರೀಚ್ ಸಂಸ್ಥೆಯು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುತ್ತಿರುವುದು ಸಂತಸದ ವಿಷಯವಾಗಿದೆ. ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಸ್ಥೆ ಕೈಗೊಳ್ಳುವ ಕಾರ್ಯಗಳಿಗೆ ತಾವು ಸಹಕಾರ ನೀಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ಮಂಜಣ್ಣ ಕಳ್ಳೇರ್, ಜಿಗಳಿ ಆನಂದಪ್ಪ, ದೀನೇಶ್ ಬಾಬು, ನಾಗಣ್ಣ, ಹನುಮಂತಪ್ಪ ಕಲ್ಲೇದೇವರ ಹಾಗೂ ರೀಚ್ ಸಂಸ್ಥೆಯ ಸಿಬ್ಬಂದಿಗಳಾದ ಶೋಭಾ, ಶಿವಕುಮಾರ್, ಪ್ರವೀಣ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.

🟢 WhatsApp Group

Join WhatsApp Group

🔵 Facebook Page

Follow Facebook Page

⚫ Twitter / X

Follow on X (Twitter)

🟣 Threads

Follow on Threads

🟠 Instagram

Follow on Instagram

🔵 Telegram

Join Telegram Channel

🟢 WhatsApp Channel

Follow WhatsApp Channel

📰 ಸಮಗ್ರ ಸುದ್ದಿ

ನಿಖರತೆಗೆ ಮತ್ತೊಂದು ಹೆಸರು

📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು

Leave a Reply

Your email address will not be published. Required fields are marked *