ಚುನಾವಣಾ ವ್ಯವಸ್ಥೆ ಮೇಲೆ ಜನರ ವಿಶ್ವಾಸ ಕುಸಿಯುತ್ತಿದೆ; ಮೌಲ್ಯಾಧಾರಿತ ರಾಜಕಾರಣಕ್ಕೆ ಆದ್ಯತೆ ನೀಡಿ: ಉಗ್ರಪ್ಪ.

ಚಿತ್ರದುರ್ಗ ಅ. 28

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಪ್ರಜಾಪ್ರಭುತ್ವ ವ್ಯವಸ್ಥೆಯ ಅಡಿಪಾಯವಾಗಿರುವ ಮತದಾರರ ವಿಶ್ವಾಸವನ್ನು ಮರಳಿ ಗಳಿಸುವುದು ಅತ್ಯಂತ ತುರ್ತಾಗಿದೆ. ರಾಜಕೀಯ ಪಕ್ಷಗಳು ವ್ಯಕ್ತಿಗತ ನಿಂದನೆಗಳನ್ನು ಬದಿಗೊತ್ತಿ, ಜನರ ಕಷ್ಟ-ದುಮ್ಮಾನಗಳಿಗೆ ಸ್ಪಂದಿಸುವ ಮೂಲಕ ಮೌಲ್ಯಾಧಾರಿತ ಹಾಗೂ ಜನಪರ ರಾಜಕಾರಣವನ್ನು ರೂಢಿಸಿಕೊಳ್ಳಬೇಕು ಎಂದು ಮಾಜಿ ಸಂಸದರಾದ ಉಗ್ರಪ್ಪ ಚುನಾಯಿತ ಪ್ರತಿನಿಧಿಗಳಿಗೆ ಕಿವಿ ಮಾತು ಹೇಳಿದರು.

ಚಿತ್ರದುರ್ಗ ನಗರದಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ನಾಯಕರ ನಡುವೆ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿರಬೇಕೇ ಹೊರತು, ವೈಯಕ್ತಿಕ ತೇಜೋವಧೆ ಅಥವಾ ಕೀಳುಮಟ್ಟದ ಟೀಕೆಗಳು ಸಲ್ಲದು. ಸಮಾಜವನ್ನು ಒಡೆಯುವ ಹಾಗೂ ಪರಸ್ಪರ ದ್ವೇಷ ಸಾಧಿಸುವ ಧೋರಣೆಯನ್ನು ಎಲ್ಲರೂ ಬಿಡಬೇಕು ಎಂದು ಮನವಿ ಮಾಡಿದರು.

ದೇಶದಲ್ಲಿ ಇತ್ತೀಚಿನ ಚುನಾವಣೆಗಳಲ್ಲಿ ಕಂಡುಬಂದಿರುವ ಫಲಿತಾಂಶಗಳು ಹಾಗೂ ವಿದ್ಯಮಾನಗಳ ಹಿನ್ನೆಲೆಯಲ್ಲಿ ಪ್ರಜಾಪ್ರಭುತ್ವ ಮತ್ತು ಚುನಾವಣಾ ವ್ಯವಸ್ಥೆಯ ಮೇಲಿನ ನಂಬಿಕೆ ಕುಸಿಯುತ್ತಿದ್ದು, ರಾಜಕೀಯ ಪಕ್ಷಗಳು ಮತ್ತು ನಾಯಕರು ಮೌಲ್ಯಯುತ ರಾಜಕಾರಣಕ್ಕೆ ಆದ್ಯತೆ ನೀಡಬೇಕು ಪ್ರಜಾಪ್ರಭುತ್ವದ ಉಳಿವಿಗಾಗಿ ಚುನಾವಣಾ ಆಯೋಗ ಹಾಗೂ ಕೇಂದ್ರ ಸರ್ಕಾರ ಗಂಭೀರ ಕ್ರಮಗಳನ್ನು ಕೈಗೊಳ್ಳುವ ಮೂಲಕ ಮತದಾರರಲ್ಲಿ ವಿಶ್ವಾಸ ಮೂಡಿಸಬೇಕು ಎಂದು ಆಗ್ರಹಿಸಿದರು.

ರಾಜಕೀಯ ವ್ಯವಸ್ಥೆಯಲ್ಲಿ ಸೋಲು-ಗೆಲುವು ಸಹಜವಾಗಿದ್ದರೂ, ಇತ್ತೀಚಿನ ಉಪಚುನಾವಣೆಗಳಲ್ಲಿ ಕೆಲವೇ ಕೆಲವು ಸ್ಥಾನಗಳನ್ನು ಹೊರತುಪಡಿಸಿ ಆಡಳಿತರೂಢ ಪಕ್ಷಗಳು ಹಿನ್ನಡೆ ಅನುಭವಿಸಿರುವುದನ್ನು ಗಮನಿಸಬೇಕು.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.

🟢 WhatsApp Group

Join WhatsApp Group

🔵 Facebook Page

Follow Facebook Page

⚫ Twitter / X

Follow on X (Twitter)

🟣 Threads

Follow on Threads

🟠 Instagram

Follow on Instagram

🔵 Telegram

Join Telegram Channel

🟢 WhatsApp Channel

Follow WhatsApp Channel

📰 ಸಮಗ್ರ ಸುದ್ದಿ

ನಿಖರತೆಗೆ ಮತ್ತೊಂದು ಹೆಸರು

📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು

Leave a Reply

Your email address will not be published. Required fields are marked *