ಚಿತ್ರದುರ್ಗದಲ್ಲಿ ‘ಕಪ್ಪು ಬಿಳುಪಿನ ಭಾವ ಸಂಗಮ’: 484 ವಿದ್ಯಾರ್ಥಿಗಳಿಂದ ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗಿ.
ಚಿತ್ರದುರ್ಗ, ಅ. 31:
ವಿದ್ಯಾರ್ಥಿಗಳಲ್ಲಿರುವ ಸೃಜನಶೀಲತೆ ಮತ್ತು ಕಲಾತ್ಮಕ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ನಗರದ ವಿದ್ಯಾ ವಿಕಾಸ ವಿದ್ಯಾಸಂಸ್ಥೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ‘ಕಪ್ಪು ಬಿಳುಪಿನ ಭಾವ ಸಂಗಮ’ ಶೀರ್ಷಿಕೆಯಡಿ ಚಾರ್ಕೋಲ್ ಆರ್ಟ್ ಚಿತ್ರಕಲಾ ಸ್ಪರ್ಧೆ ಹಾಗೂ ಕಲಾಪ್ರದರ್ಶನವನ್ನು ಆಯೋಜಿಸಲಾಯಿತು.
ಅಕ್ಟೋಬರ್ 30ರಂದು ವಿವಿಧ ಶಾಲೆಗಳ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ ಏರ್ಪಡಿಸಲಾಗಿದ್ದು, ಸುಮಾರು 484 ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡಿದ್ದರು. ಸ್ಪರ್ಧೆಯ ಫಲಿತಾಂಶವನ್ನು ಅಕ್ಟೋಬರ್ 31ರಂದು ಪ್ರಕಟಿಸಿ, ವಿಜೇತರಿಗೆ ಆಕರ್ಷಕ ನಗದು ಬಹುಮಾನಗಳನ್ನು ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಕಲಾವಿದ ವೀರೇಶ್ ಎಲ್. ಸಜ್ಜನ್ ಅವರು ರಚಿಸಿದ ಚಾರ್ಕೋಲ್ ಕಲಾಕೃತಿಗಳ ಏಕವ್ಯಕ್ತಿ ಪ್ರದರ್ಶನವೂ ಗಮನ ಸೆಳೆಯಿತು.
ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ತೀರ್ಥಹಳ್ಳಿಯ ಡಾ. ಯು.ಆರ್. ಅನಂತಮೂರ್ತಿ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕ ಮಂಜಣ್ಣ ನಾಯಕ್ ಎನ್.ಟಿ. ಮಾತನಾಡಿ, ವೀರೇಶ್ ಅವರಿಗೆ ಚಿತ್ರಕಲೆಯ ಆರಂಭಿಕ ಹಂತದಲ್ಲಿ ಒಂದು ಗೆರೆ ಎಳೆಯುವುದನ್ನು ಕಲಿಸಿದ್ದೆ. ಇಂದು ಅವರು ಉತ್ತಮ ಕಲಾವಿದರಾಗಿ ಬೆಳೆದಿರುವುದು ಸಂತೋಷದ ಸಂಗತಿ. ಅವರ ಕಲೆಗೆ ಪ್ರೋತ್ಸಾಹ ನೀಡುತ್ತಿರುವ ವಿದ್ಯಾ ವಿಕಾಸ ವಿದ್ಯಾಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಶಾಲೆಗಳಲ್ಲಿ ಇಂತಹ ಕಲಾ ಚಟುವಟಿಕೆಗಳನ್ನು ಆಯೋಜಿಸುವುದರಿಂದ ಮಕ್ಕಳಲ್ಲಿ ಚಿತ್ರಕಲೆಯ ಮೇಲಿನ ಆಸಕ್ತಿ ಹೆಚ್ಚುವುದರ ಜೊತೆಗೆ ಅವರ ಸೃಜನಶೀಲತೆ, ಕಲ್ಪನಾಶಕ್ತಿ ಮತ್ತು ಸೂಕ್ಷ್ಮವಾಗಿ ಗಮನಿಸುವ ಸಾಮರ್ಥ್ಯವೂ ವೃದ್ಧಿಯಾಗುತ್ತದೆ ಎಂದು ಹೇಳಿದರು.


ಶಾಲೆಯ ಮುಖ್ಯೋಪಾಧ್ಯಾಯ ಎನ್.ಜಿ. ತಿಪ್ಪೇಸ್ವಾಮಿ ಮಾತನಾಡಿ, ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಗುರುತಿಸಿ ಅವುಗಳಿಗೆ ಸೂಕ್ತ ವೇದಿಕೆ ಕಲ್ಪಿಸುವುದು ಶಿಕ್ಷಣ ಸಂಸ್ಥೆಗಳ ಜವಾಬ್ದಾರಿಯಾಗಿದೆ. ಈ ಚಿತ್ರಕಲಾ ಸ್ಪರ್ಧೆ ಮತ್ತು ಪ್ರದರ್ಶನವು ಮಕ್ಕಳ ಪ್ರತಿಭೆ ಅನಾವರಣಗೊಳ್ಳಲು ಸಹಕಾರಿಯಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಕಾರ್ಯದರ್ಶಿ ಬಿ. ವಿಜಯಕುಮಾರ್ ಮಾತನಾಡಿ, ಚಿತ್ರಕಲೆ ಎನ್ನುವುದು ಕೇವಲ ಬಣ್ಣಗಳನ್ನು ತುಂಬುವ ಕಲೆಯಲ್ಲ; ಮನಸ್ಸಿನ ಭಾವನೆಗಳನ್ನು ಚಿತ್ರಗಳ ಮೂಲಕ ಅಭಿವ್ಯಕ್ತಿಸುವ ಶಕ್ತಿಯುತ ಮಾಧ್ಯಮವಾಗಿದೆ. ವೀರೇಶ್ ಎಲ್. ಸಜ್ಜನ್ ಅವರ ಏಕವ್ಯಕ್ತಿ ಚಾರ್ಕೋಲ್ ಕಲಾಪ್ರದರ್ಶನ ವಿದ್ಯಾರ್ಥಿಗಳಿಗೆ ಕಲೆಯ ಸೂಕ್ಷ್ಮತೆ, ಸೃಜನಶೀಲತೆ ಮತ್ತು ಅಭಿವ್ಯಕ್ತಿಯ ಹೊಸ ಆಯಾಮಗಳನ್ನು ಪರಿಚಯಿಸುತ್ತದೆ. ಮುಂದಿನ ದಿನಗಳಲ್ಲಿ ಅವರ ಕಲಾಕೃತಿಗಳ ಪ್ರದರ್ಶನವನ್ನು ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲಿ ಆಯೋಜಿಸಲು ಸಂಸ್ಥೆ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದರು.
ಸ್ಪರ್ಧೆಯ ತೀರ್ಪುಗಾರರಾಗಿ ನಿವೃತ್ತ ಚಿತ್ರಕಲಾ ಶಿಕ್ಷಕಿ ಸುವರ್ಣಮ್ಮ ಹಾಗೂ ಡಾನ್ ಬಾಸ್ಕೋ ಸಂಸ್ಥೆಯ ಚಿತ್ರಕಲಾ ಶಿಕ್ಷಕ ಶಿವು ಭಾಗವಹಿಸಿದ್ದರು. ಕಾರ್ಯಕ್ರಮಕ್ಕೆ ಆಗಮಿಸಿದ್ದ ಗಣ್ಯರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಗುರುನಾಥ್ ಟಿ.ಎಂ., ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು, ಶಾಲೆಯ ಹೆಡ್ ಕೋ-ಆರ್ಡಿನೇಟರ್ ಕಾವ್ಯ ಯದುವಂಶ್, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಅನರ್ಘ್ಯ ಪ್ರಾರ್ಥಿಸಿದರು. ಚಿತ್ರಕಲಾ ಶಿಕ್ಷಕ ವೀರೇಶ್ ಎಲ್. ಸಜ್ಜನ್ ಸ್ವಾಗತಿಸಿದರು. ಶಿಕ್ಷಕಿ ಸುಚಿತಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.
🟢 WhatsApp Group
Join WhatsApp Group
🔵 Facebook Page
Follow Facebook Page
⚫ Twitter / X
Follow on X (Twitter)
🟣 Threads
Follow on Threads
Follow on Instagram
🔵 Telegram
Join Telegram Channel
🟢 WhatsApp Channel
Follow WhatsApp Channel
📰 ಸಮಗ್ರ ಸುದ್ದಿ
ನಿಖರತೆಗೆ ಮತ್ತೊಂದು ಹೆಸರು
📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು