ಚಿತ್ರದುರ್ಗ| ನ.4ರಂದು ಬಿಜೆಪಿ ಜನಜಾಗೃತಿ ಪಾದಯಾತ್ರೆ: ಬಿ.ವೈ. ವಿಜಯೇಂದ್ರ ಸೇರಿ ಹಲವು ನಾಯಕರು ಭಾಗಿ.

ಚಿತ್ರದುರ್ಗ ನ. 3

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಜಿಲ್ಲೆಯ ಭಾರತೀಯ ಜನತಾ ಪಾರ್ಟಿವತಿಯಿಂದ ಪ್ರಜಾಪ್ರಭುತ್ವ ಉಳಿಸಿ ಅರಾಜಕತೆ ಅಳಿಸಿ! ಬೃಹತ್ ಜನಜಾಗೃತಿ ಪಾದಯಾತ್ರೆಯ ವೇದಿಕೆ ಕಾರ್ಯಕ್ರಮವೂ ನ. 4ರ ಬುಧವಾರ ಬೆಳಿಗ್ಗೆ 11 ಗಂಟೆಗೆ ನಗರದ ಹೊಳಲ್ಕರೆ ರಸ್ತೆಯ ಜ್ಞಾನ ಭಾರತಿ ವಿದ್ಯಾ ಮಂದಿರದ ಬಸವೇಶ್ವರ ವೃತ್ತದ ಬಳಿ ಆಯೋಜನೆ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷರಾದ ಕೆ.ಟಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಪ್ರಜಾಪ್ರಭುತ್ವದ ಮೌಲ್ಯಗಳ ರಕ್ಷಣೆ, ಸಂವಿಧಾನಿಕ ಆಶಯಗಳ ಸಂರಕ್ಷಣೆ ಹಾಗೂ ಜನವಿರೋಧಿ ಆಡಳಿತದ ವಿರುದ್ಧ ಜನಜಾಗೃತಿ ಮೂಡಿಸುವ ಉದ್ದೇಶದಿಂದ ಭಾರತೀಯ ಜನತಾ ಪಾರ್ಟಿ ಚಿತ್ರದುರ್ಗ ಜಿಲ್ಲಾ ಘಟಕದ ವತಿಯಿಂದ ಬೃಹತ್ ಜನಜಾಗೃತಿ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ.

ಈ ಪಾದಯಾತ್ರೆಯಲ್ಲಿ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಹರೀಶ್ ದ್ವಿವೇದಿ, ಬಿಜೆಪಿ ಕರ್ನಾಟಕದ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ, ಸಂಸದರಾದ ಗೋವಿಂದ ಕಾರಜೋಳ, ಶಾಸಕರಾದ ಡಾ.ಎಂ.ಚಂದ್ರಪ್ಪ, ಜ್ಯೋತಿ ಗಣೇಶ್, ಸುರೇಶ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್, ಕೆ.ಎಂ ಸುರೇಶ್, ಕೇಂದ್ರದ ಮಾಜಿ ಸಚಿವರಾದ ಜಿ.ಎಂ.ಸಿದ್ದೇಶ್ವರ್, ಎ.ನಾರಾಯಣಸ್ವಾಮಿ, ಮಾಜಿ ಶಾಸಕರುಗಳಾದ ಜಿ.ಹೆಚ್. ತಿಪ್ಪಾರೆಡ್ಡಿ, ಎಸ್.ಕೆ.ಬಸವರಾಜನ್, ನೇರ್ಲಗುಂಟೆ ತಿಪ್ಪೇಸ್ವಾಮಿ ಮಾಜಿ ಸದಸ್ಯರಾದ ಚಿದಾನಂದ ಗೌಡ, ಹಾಗೂ ದಾವಣಗೆರೆ, ತುಮಕೂರು, ಮಧುಗಿರಿಯ ಶಾಸಕರು, ಮಾಜಿ ಶಾಸಕರು, ಜಿಲ್ಲೆಯ ಜಿಲ್ಲಾ ಹಾಗೂ ಮಂಡಲ ಮಟ್ಟದ ಪದಾಧಿಕಾರಿಗಳು, ಪಕ್ಷದ ಮುಖಂಡರು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಕಾರ್ಯಕರ್ತರು, ಹಿತೈಷಿಗಳು ಭಾಗವಹಿಸಲಿದ್ದಾರೆ.

ಪ್ರಜಾಪ್ರಭುತ್ವ ಉಳಿಸಿ ಅರಾಜಕತೆ ಅಳಿಸಿ: ಬೃಹತ್ ಜನಜಾಗೃತಿ ಪಾದಯಾತ್ರೆಯು ಜ್ಞಾನ ಭಾರತಿ ಮಂದಿರದ ಮೈದಾನದಿಂದ ಪ್ರಾರಂಭವಾಗಿ ಕನಕ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ಗಾಂಧಿ ವೃತ್ತ, ಡಾ.ಬಿ.ಆರ್.ಅಂಬೇಡ್ಕರ್ ವೃತ್ತ, ಮದಕರಿ ವೃತ್ತದ ಮೂಲಕ ಒನಕೆ ಓಬವ್ವ ವೃತ್ತದಲ್ಲಿ ಮುಕ್ತಾಯವಾಗಲಿದೆ ಎಂದು ತಿಳಿಸಿದ್ದಾರೆ.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.

🟢 WhatsApp Group

Join WhatsApp Group

🔵 Facebook Page

Follow Facebook Page

⚫ Twitter / X

Follow on X (Twitter)

🟣 Threads

Follow on Threads

🟠 Instagram

Follow on Instagram

🔵 Telegram

Join Telegram Channel

🟢 WhatsApp Channel

Follow WhatsApp Channel

📰 ಸಮಗ್ರ ಸುದ್ದಿ

ನಿಖರತೆಗೆ ಮತ್ತೊಂದು ಹೆಸರು

📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು

Leave a Reply

Your email address will not be published. Required fields are marked *