ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಸಮರ: 2028ಕ್ಕೆ ಮತ್ತೆ ಅಧಿಕಾರಕ್ಕೆ ತರಲು ಹರೀಶ್ ಚಂದ್ರ ದ್ವಿವೇದಿ ಕರೆ.

ಚಿತ್ರದುರ್ಗ ನ. 04

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳು, ದೈನಂದಿನ ಬೆಲೆ ಏರಿಕೆ ಹಾಗೂ ಸಂವಿಧಾನ ವಿರೋಧಿ ಧೋರಣೆಗಳನ್ನು ಜನರಿಗೆ ಮುಟ್ಟಿಸಲು ಈ ಪಾದಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಮುಂಬರುವ 2028ರ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಎಲ್ಲರೂ ಸಜ್ಜಾಗಬೇಕು ಎಂದು ಪಕ್ಷ ಮುಖಂಡರಿಗೆ ಕಾರ್ಯಕರ್ತರಿಗೆ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ರಾಜ್ಯದ ಉಸ್ತುವಾರಿಗಳಾದ ಹರೀಶ್ ಚಂದ್ರ ದ್ವಿವೇದಿ ಕರೆ ನೀಡಿದರು.

ಜಿಲ್ಲೆಯ ಭಾರತೀಯ ಜನತಾ ಪಾರ್ಟಿವತಿಯಿಂದ ಹೊಳಲ್ಕರೆ ರಸ್ತೆಯ ಜ್ಞಾನ ಭಾರತಿ ವಿದ್ಯಾ ಮಂದಿರದ ಬಸವೇಶ್ವರ ವೃತ್ತದ ಬಳಿ ಆಯೋಜನೆ ಮಾಡಲಾಗಿದ್ದ ಪ್ರಜಾಪ್ರಭುತ್ವ ಉಳಿಸಿ ಅರಾಜಕತೆ ಅಳಿಸಿ! ಬೃಹತ್ ಜನಜಾಗೃತಿ ಪಾದಯಾತ್ರೆಯ ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳು ಹಾಗೂ ಸಂವಿಧಾನ ವಿರೋಧಿ ಧೋರಣೆಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿವತಿಯಿಂದ ರಾಜ್ಯಾದ್ಯಂತ ‘ಲೋಕತಂತ್ರವೋ’ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ದೇಶದ ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಸಾಂವಿಧಾನಿಕ ಸಂಸ್ಥೆಗಳನ್ನು ರಕ್ಷಿಸುವ ಉದ್ದೇಶದಿಂದ ಬಿಜೆಪಿ ಮುಖಂಡರು ಕಾರ್ಯಕರ್ತರು ಬೀದಿಗಿಳಿದು ಹೋರಾಟ ನಡೆಸಲಿದ್ದಾರೆ ಕಾಂಗ್ರೆಸ್ ಪಕ್ಷವು ಸದಾಕಾಲ ಸಂವಿಧಾನದ ಸಂಸ್ಥೆಗಳನ್ನು ಹಾಗೂ ಸುಪ್ರೀಂ ಕೋರ್ಟ್‍ನ ತೀರ್ಪುಗಳನ್ನು ವಿರೋಧಿಸುತ್ತ ಬಂದಿದೆ ಚುನಾವಣೆಗಳಲ್ಲಿ ಸೋತಾಗ ಇವಿಎಂ ಹಾಗೂ ನ್ಯಾಯಾಲಯಗಳ ಮೇಲೆ ಗೂಬೆ ಕೂರಿಸುವುದು ಕಾಂಗ್ರೆಸ್ ಚಾಳಿಯಾಗಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸಂವಿಧಾನದ ಹೆಸರಿನಲ್ಲಿ ಬ್ಲಾಂಕ್ ಪುಸ್ತಕ ಹಿಡಿದುಕೊಂಡು ತಿರುಗುತ್ತಾ ಸಮಾಜವನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಟೀಕಿಸಿದರು.

ದೇಶದಲ್ಲಿ ಬಿಜೆಪಿ ಸರ್ಕಾರವಿದ್ದಾಗ ಪಾಕಿಸ್ತಾನದ ಮೇಲೆ ಏರ್‍ಸ್ಟ್ರೈಕ್ ಮತ್ತು ಸರ್ಜಿಕಲ್ ಸ್ಟ್ರೈಕ್ ನಡೆಸಲಾಗಿದೆ ಹಾಗೂ ಅರುಣಾಚಲ ಪ್ರದೇಶದಲ್ಲಿ ಚೀನಾ ಸೈನಿಕರನ್ನು ಹೊಡೆದುಹಾಕಲಾಗಿದೆ ಇಂತಹ ಸಂದರ್ಭಗಳಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಿಗೆ ನೋವಾಗುತ್ತದೆ ರಾಮಮಂದಿರ ನಿರ್ಮಾಣ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ಸ್ಮಾರಕ ನಿರ್ಮಾಣದ ಸಂದರ್ಭದಲ್ಲೂ ಕಾಂಗ್ರೆಸ್ ಪಕ್ಷವು ಮಹಾಪುರುಷರನ್ನು ಅವಮಾನಿಸಿದೆ ಎಂದು ತಿಳಿಸಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ಮಿತಿಮೀರಿದೆ

ಮುಂಬರುವ ದಿನಗಳಲ್ಲಿ ಸಾರಿಗೆ ಬಸ್ ಪ್ರಯಾಣ ದರಗಳನ್ನು ಹೆಚ್ಚಿಸಲು ಸರ್ಕಾರ ತಯಾರಿ ನಡೆಸಿದೆ ಇತ್ತೀಚೆಗೆ ನಡೆದ ವಿಧಾನ ಪರಿಷತ್ತು ಹಾಗೂ ಎಂ.ಎಲ್.ಸಿ ಚುನಾವಣೆಯಲ್ಲಿ ಪ್ರಬುದ್ಧ ಜನತೆ ಕಾಂಗ್ರೆಸ್‍ಗೆ ತಕ್ಕೇಟು ನೀಡಿ ಬಿಜೆಪಿಯನ್ನು ಗೆಲ್ಲಿಸಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು.

:ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ಚುನಾವಣಾ ಆಯೋಗ, ಇವಿಎಂ ಹಾಗೂ ಸುಪ್ರೀಂ ಕೋರ್ಟ್ ನಂಥ ಸಾಂವಿಧಾನಿಕ ಸಂಸ್ಥೆಗಳನ್ನು ಅಪಮಾನ ಮಾಡುತ್ತದೆ. ಕಾಂಗ್ರೆಸ್ ಪಕ್ಷ ಎಂದಿಗೂ ದೇಶದ ಸಾಂವಿಧಾನಿಕ ಸಂಸ್ಥೆಗಳನ್ನು ಗೌರವಿಸುವುದಿಲ್ಲ. ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳು, ದೈನಂದಿನ ಬೆಲೆ ಏರಿಕೆ ಹಾಗೂ ಸಂವಿಧಾನ ವಿರೋಧಿ ಧೋರಣೆಗಳನ್ನು ಜನರಿಗೆ ಮುಟ್ಟಿಸಲು ಈ ಪಾದಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಮುಂಬರುವ 2028ರ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಲು ಎಲ್ಲರೂ ಸಜ್ಜಾಗಬೇಕಿದೆ ಎಂದು ಕರೆ ನೀಡಿದರು.

ಕಾಂಗ್ರೆಸ್ ಪಕ್ಷ ದೇಶಹಿತದಿಂದ ಯಾವತ್ತೂ ಕೆಲಸ ಮಾಡಿಲ್ಲ ರಾಮಮಂದಿರ ನಿರ್ಮಾಣವನ್ನೂ ಅದು ವಿರೋಧಿಸಿತ್ತು. ದೇಶದ ಮಹಾಪುರುಷರನ್ನು ಕಾಂಗ್ರೆಸ್ ಪಕ್ಷ ಅಪಮಾನ ಮಾಡುತ್ತದೆ. ಕಾಂಗ್ರೆಸ್ ಪಕ್ಷದ ಕರ್ನಾಟಕದ ಸರಕಾರವು ಜನವಿರೋಧಿ ಎಂದು ತಿಳಿಸಿದರು.

ಬಿಜೆಪಿ ಕರ್ನಾಟಕದ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಮಾತನಾಡಿ ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಕಾಂಗ್ರೆಸ್ ಸರ್ಕಾರವು ರೈತ ವಿರೋಧಿ, ಬಡವರ ವಿರೋಧಿ, ಹಿಂದುಳಿದ ವರ್ಗಗಳ ವಿರೋಧಿ, ಯುವಕರ ವಿರೋಧಿ ಹಾಗೂ ಮಹಿಳಾ ವಿರೋಧಿಯಾಗಿದೆ. ಇತ್ತೀಚೆಗೆ ಹಾಲಿನ ದರವನ್ನು ಲೀಟರ್‍ಗೆ 10 ರಿಂದ 12 ರೂಪಾಯಿಗಳಷ್ಟು ಹಾಗೂ ಮೊಸರಿನ ದರವನ್ನು 14 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ. ಅಷ್ಟೇ ಅಲ್ಲದೆ, ಬಸ್ ಪ್ರಯಾಣ ದರವನ್ನು ಶೇಕಡಾ 30 ರಿಂದ 40 ರಷ್ಟು ಏರಿಕೆ ಮಾಡುವ ಮೂಲಕ ಬಡವರು, ರೈತರು ಹಾಗೂ ದಿನಗೂಲಿ ಕಾರ್ಮಿಕರಿಗೆ ಸರ್ಕಾರ ಹೊರೆ ಮಾಡಿದೆ ಎಂದು ಟೀಕಿಸಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಬೆಲೆ ಏರಿಕೆ ಮೂಲಕ ಬಡವರ ಮೇಲೆ ಬರೆ ಎಳೆಯುವ ಕೆಲಸ ಮಾಡುತ್ತಿದ್ದು, ಸರ್ಕಾರದ ಖಜಾನೆಯಲ್ಲಿ ಹಣವಿಲ್ಲದ ಕಾರಣ ಈ ರೀತಿ ಜನಸಾಮಾನ್ಯರ ಮೇಲೆ ತೆರಿಗೆ ಮತ್ತು ದರಗಳ ಹೊರೆ ಹಾಕಲಾಗುತ್ತಿದೆ ಎಂದರು.

ಬೆಳಗಾವಿಯಲ್ಲಿ ಕಪ್ಪು ಬೇಳೆಗಾರರು ಸಂಕಷ್ಟದಲ್ಲಿದ್ದು, ಅವರ ನೆರವಿಗೆ ಧಾವಿಸಬೇಕಿದ್ದ ಮುಖ್ಯಮಂತ್ರಿಗಳು ಕೇವಲ ಖಾಲಿ ಜೇಬಿನ ನೀಡಿ ಸುಮ್ಮನೆ ತೆರಳಿದ್ದಾರೆ ರಾಜ್ಯದಲ್ಲಿ 1975 ರ ತುರ್ತು ಪರಿಸ್ಥಿತಿಯಂತಹ ವಾತಾವರಣ ನಿರ್ಮಾಣವಾಗಿದ್ದು, ಸರ್ಕಾರದ ಜನವಿರೋಧಿ ಕ್ರಮಗಳನ್ನು ಪ್ರಶ್ನಿಸುವವರ ಧಮನ ಮಾಡಲಾಗುತ್ತಿದೆ. ಕರ್ನಾಟಕದಲ್ಲಿ ಜಾರಿಯಲ್ಲಿರುವ ಕಾಂಗ್ರೆಸ್ ಸರ್ಕಾರದ ರೈತ, ಬಡವ, ಯುವಕ ಹಾಗೂ ಮಹಿಳಾ ವಿರೋಧಿ ಧೋರಣೆಗಳನ್ನು ಖಂಡಿಸಿ ಹಾಗೂ ಸಾರ್ವಜನಿಕರಲ್ಲಿ ಜನಜಾಗೃತಿ ಮೂಡಿಸಲು ಬಿಜೆಪಿ

ವತಿಯಿಂದ ಪ್ರತಿಭಟನಾ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರದ ಬೆಲೆ ಏರಿಕೆ ಕ್ರಮಗಳು ಮತ್ತು ಜನವಿರೋಧಿ ಆಡಳಿತದ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಹಾಗೂ ಬೆಲೆ ಏರಿಕೆ ನೀತಿಗಳ ವಿರುದ್ಧ ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಭಾರತೀಯ ಜನತಾ ಪಾರ್ಟಿಯವತಿಯಿಂದ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.

ಸಂಸದರಾದ ಗೋವಿಂದ ಕಾರಜೋಳ, ಶಾಸಕರಾದ ಡಾ.ಎಂ.ಚಂದ್ರಪ್ಪ, ಮಾಜಿ ಮಂತ್ರಿ ಶ್ರೀರಾಮುಲು ಜ್ಯೋತಿ ಗಣೇಶ್, ಸುರೇಶ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್, ಕೆ.ಎಂ ಸುರೇಶ್, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್,ಮಾಜಿ ಶಾಸಕರುಗಳಾದ ಜಿ.ಹೆಚ್. ತಿಪ್ಪಾರೆಡ್ಡಿ, ಎಸ್.ಕೆ.ಬಸವರಾಜನ್, ನೇರ್ಲಗುಂಟೆ ತಿಪ್ಪೇಸ್ವಾಮಿ ಮಾಜಿ ಸದಸ್ಯರಾದ ಚಿದಾನಂದ ಗೌಡ, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ಚಿತ್ರದುರ್ಗ ಜಿಲ್ಲಾ ಅಧ್ಯಕ್ಷ ಕೆ.ಟಿ. ಕುಮಾರಸ್ವಾಮಿ,ನಾಗರಾಜ್ ಮಳ್ಳೇಕಟ್ಟೆ, ರವಿ ಹೆಬ್ಬಾರ್ ಶಿವಯೋಗಿ ಸ್ವಾಮಿ, ರಾಮಚಂದ್ರಪ್ಪ, ಮಾಡಾಳ್ ಮಲ್ಲಿಕಾರ್ಜನ್, ಬಸವರಾಜ್ ನಾಯ್ಕ್,ಲಿಂಗಮೂರ್ತಿ, ಅನಿತ್ ಕುಮಾರ್, ರಾಜಣ್ಣ ಲಕ್ಷ್ಮೀಕಾಂತ, ಅನಿಲ್ ಕುಮಾರ್, ಎ.ಮುರಳಿ, ಡಾ,ಮಂಜುನಾಥ್, ಮೋಹನ್ ಕುಮಾರ್, ಸೇರಿದಂತೆ ಚಿತ್ರದುರ್ಗ ದಾವಣಗೆರೆ, ತುಮಕೂರು, ಮಧುಗಿರಿಯ ಮಂಡಲ ಮಟ್ಟದ ಪದಾಧಿಕಾರಿಗಳು, ಪಕ್ಷದ ಮುಖಂಡರು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಕಾರ್ಯಕರ್ತರು, ಹಿತೈಷಿಗಳು ಭಾಗವಹಿಸಿದ್ದರು.

ಪ್ರಧಾನ ಕಾರ್ಯದರ್ಶಿಗಳಾದ ವೆಂಕಟೇಶ್ ಯಾದವ್ ಕಾರ್ಯಕ್ರಮ ನಿರೂಪಿಸಿದರೆ, ಮಾಧುರಿ ಗೀರಿಶ್ ಸ್ವಾಗತಿಸಿದರು.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.

🟢 WhatsApp Group

Join WhatsApp Group

🔵 Facebook Page

Follow Facebook Page

⚫ Twitter / X

Follow on X (Twitter)

🟣 Threads

Follow on Threads

🟠 Instagram

Follow on Instagram

🔵 Telegram

Join Telegram Channel

🟢 WhatsApp Channel

Follow WhatsApp Channel

📰 ಸಮಗ್ರ ಸುದ್ದಿ

ನಿಖರತೆಗೆ ಮತ್ತೊಂದು ಹೆಸರು

📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು

Leave a Reply

Your email address will not be published. Required fields are marked *