ಬಾಲ್ಯ ವಿವಾಹ ಮುಕ್ತ ಸಮಾಜ ನಿರ್ಮಾಣ: ಹಳ್ಳಿಗಳಲ್ಲಿ ಜಾಗೃತಿ ಮೂಡಿಸುತ್ತಿರುವ ‘ರೀಚ್’ ಸಂಸ್ಥೆಯ ಕಾರ್ಯ ಶ್ಲಾಘನೀಯ

ನ,05: ಹರಿಹರ: ಸಮಾಜಕ್ಕೆ ಅಂಟಿಕೊಂಡಿರುವ ಬಹುದೊಡ್ಡ ಪಿಡುಗಾದ ಬಾಲ್ಯ ವಿವಾಹ ಮತ್ತು ಬಾಲ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ‘ರೀಚ್’ ಸಂಸ್ಥೆಯು ಹಳ್ಳಿ ಹಳ್ಳಿಗಳಲ್ಲಿ ಹಮ್ಮಿಕೊಳ್ಳುತ್ತಿರುವ ಜಾಗೃತಿ ಅಭಿಯಾನಗಳು ಅತ್ಯಂತ ಪ್ರಶಂಸನೀಯ ಎಂದು ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಪ್ರವೀಣ್ ಹನಗವಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ತಾಲೂಕಿನ ಹಣಗವಾಡಿ ಗ್ರಾಮದ ಸರ್ಕಾರಿ ಹಿರಿಯ ಪ್ರೌಢಶಾಲೆಯಲ್ಲಿ ರೀಚ್ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿದ್ದ ‘ಬಾಲ ಕಾರ್ಮಿಕ ಮತ್ತು ಬಾಲ್ಯ ವಿವಾಹ ಮುಕ್ತ ಭಾರತ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.

“ಮದುವೆ ಎಂಬುದು ಕೇವಲ ಎರಡು ಕುಟುಂಬಗಳನ್ನು ಬೆಸೆಯುವ ಸಂಪ್ರದಾಯ ಮಾತ್ರವಲ್ಲ, ಅದು ಬದುಕಿನ ಅತ್ಯಂತ ದೊಡ್ಡ ಜವಾಬ್ದಾರಿ. ಮಕ್ಕಳು ಶಿಕ್ಷಣ ಪಡೆದು, ತಮ್ಮ ಭವಿಷ್ಯವನ್ನು ಉಜ್ವಲವಾಗಿ ರೂಪಿಸಿಕೊಳ್ಳಬೇಕಾದ ಎಳೆಯ ವಯಸ್ಸಿನಲ್ಲಿಯೇ ಮದುವೆ ಮಾಡುವುದು ಅವರ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ. ಸರ್ಕಾರ ಎಷ್ಟೇ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡರೂ, ನಮ್ಮ ಸಮಾಜದಲ್ಲಿ ಇಂದಿಗೂ ಬಾಲ್ಯ ವಿವಾಹಗಳು ಹಾಗೂ ಬಾಲಕಾರ್ಮಿಕರು ಕಂಡುಬರುತ್ತಿರುವುದು ವಿಪರ್ಯಾಸ. ಇಂತಹ ಮಾರಕ ಪದ್ಧತಿಗಳ ವಿರುದ್ಧ ರೀಚ್ ಸಂಸ್ಥೆ ಸಮರ ಸಾರಿರುವುದು ಸಂತಸದ ವಿಚಾರ” ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶಾಲಾ ಮುಖ್ಯೋಪಾಧ್ಯಾಯರಾದ ಕುಬೇಂದ್ರಪ್ಪ ಅವರು ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಕಾನೂನಿನ ಅರಿವು ಮೂಡಿಸಿದರು. “ಕಾನೂನಿನ ಪ್ರಕಾರ 18 ವರ್ಷ ತುಂಬದ ಹೆಣ್ಣುಮಕ್ಕಳಿಗೆ ಹಾಗೂ ೨೧ ವರ್ಷ ತುಂಬದ ಗಂಡುಮಕ್ಕಳಿಗೆ ವಿವಾಹ ಮಾಡುವುದು ಅಪರಾಧವಾಗಿದೆ. ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ಈ ನಿಯಮ ಉಲ್ಲಂಘಿಸಿದವರಿಗೆ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸುವ ಅವಕಾಶವಿದೆ. ಹೀಗಾಗಿ, ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ವಿದ್ಯಾಭ್ಯಾಸವನ್ನು ಮೊಟಕುಗೊಳಿಸದೆ ಶಿಕ್ಷಣದತ್ತ ಹೆಚ್ಚು ಗಮನಹರಿಸಿ ಯಶಸ್ವಿ ಜೀವನ ಕಟ್ಟಿಕೊಳ್ಳಬೇಕು” ಎಂದು ಕಿವಿಮಾತು ಹೇಳಿದರು.

ಈ ಅರ್ಥಪೂರ್ಣ ಜಾಗೃತಿ ಕಾರ್ಯಕ್ರಮದಲ್ಲಿ ಎಸ್‌ಬಿಪಿಕೆ ಶಾಲೆಯ ಶಿಕ್ಷಕ ವೃಂದ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ರೀಚ್ ಸಂಸ್ಥೆಯ ಸಿಬ್ಬಂದಿಗಳು ಹಾಜರಿದ್ದರು.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.

🟢 WhatsApp Group

Join WhatsApp Group

🔵 Facebook Page

Follow Facebook Page

⚫ Twitter / X

Follow on X (Twitter)

🟣 Threads

Follow on Threads

🟠 Instagram

Follow on Instagram

🔵 Telegram

Join Telegram Channel

🟢 WhatsApp Channel

Follow WhatsApp Channel

📰 ಸಮಗ್ರ ಸುದ್ದಿ

ನಿಖರತೆಗೆ ಮತ್ತೊಂದು ಹೆಸರು

📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು

Leave a Reply

Your email address will not be published. Required fields are marked *