ಚಿತ್ರದುರ್ಗ ನ. 06
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಹಾಲು ಮೊಸರಿನ ಬೆಲೆ ಹೆಚ್ಚಿಸಿರುವ ಬೆನ್ನ ಹಿಂದೆಯೇ ರಾಜ್ಯ ಸರ್ಕಾರ ಬಿಎಂಟಿಸಿ. ಹಾಗೂ ಕೆ.ಎಸ್.ಆರ್.ಟಿ.ಸಿ. ಬಸ್ಗಳ ದರವನ್ನು ಏರಿಸಿ ಬಡವರು, ಮಧ್ಯಮ ವರ್ಗ ಹಾಗೂ ಜನಸಾಮಾನ್ಯರ ತಲೆ ಮೇಲೆ ಆರ್ಥಿಕ ಭಾರ ಹೊರಿಸಿದೆ ಎಂದು ಬಿಜೆಪಿ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಯಾದವ್ ದೂರಿದ್ದಾರೆ.
ಚಿತ್ರದುರ್ಗ ನಗರದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಸರ್ಕಾರಿ ಬಸ್ಗಳ ದರವನ್ನು ಏಕಾಏಕಿ ಹೆಚ್ಚಿಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ.ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ರೈತರಿಗೆ ಸರ್ಕಾರದಿಂದಲೆ ಪ್ರೋತ್ಸಾಹ ಧನ ನೀಡುವುದಾಗಿ ಹೇಳಿದ್ದ ಮುಖ್ಯಮಂತ್ರಿ ಒಮ್ಮೆಲೆ ಬಸ್ ದರ ಹೆಚ್ಚಳ ಮಾಡಿ ಗ್ರಾಹಕರಿಗೆ ಬರೆ ಎಳೆದಿದ್ದಾರೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಭಾಗ್ಯ ಕೊಟ್ಟಾಗ ನಾವುಗಳು ಖುಷಿ ಪಟ್ಟಿದ್ದೆವು. ಈಗ ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕೈಯಲ್ಲಿ ಕಸಿದುಕೊಳ್ಳುತ್ತಿದ್ದಾರೆ. ಪ್ರಧಾನಿ ನರೇಂದ್ರಮೋದಿ ಶೌಚಾಲಯಗಳನ್ನು ಕೊಟ್ಟಿರುವುದನ್ನು ಬಿಟ್ಟರೆ ರಾಜ್ಯ ಸರ್ಕಾರದಿಂದ ಜನಸಾಮಾನ್ಯರಿಗೆ ಯಾವ ಉಪಯೋಗವೂ ಇಲ್ಲ. ಗೃಹಲಕ್ಷ್ಮಿ ಹಣ ಇನ್ನು ಮಹಿಳೆಯರು ಬ್ಯಾಂಕ್ ಖಾತೆಗಳಿಗೆ ಜಮಾ ಆಗಿಲ್ಲ. ಸಚಿವ ಸಂಪುಟದ ಸಭೆ ಕರೆದು ಮುಖ್ಯಮಂತ್ರಿಗಳು ಚರ್ಚಿಸಿ ಕೂಡಲೆ ದರ ಏರಿಕೆಯನ್ನು ಇಳಿಸದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.
ಬಿಜೆಪಿ.ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡುತ್ತ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ರಾಜ್ಯದ ಜನರನ್ನು ವಂಚಿಸುತ್ತಲೆ ಬರುತ್ತಿದೆ. ಹಾಲು ಮೊಸರಿನ ಬೆಲೆ ಹೆಚ್ಚಳ ಮಾಡಿರುವ ರಾಜ್ಯದ ಮುಖ್ಯಮಂತ್ರಿ ಯಾವ ಪುರುಷಾರ್ಥಕ್ಕಾಗಿ ಬಸ್ ಪ್ರಯಾಣ ದರವನ್ನು ಹೆಚ್ಚಿಸಿದ್ದಾರೆ. ಬಿಟ್ಟಿ ಭಾಗ್ಯಗಳನ್ನು ರಾಜ್ಯದ ಜನರಿಗೆ ನೀಡುವುದಕ್ಕಾಗಿ ಬಡವರು, ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುವುದು ಯಾವ ನ್ಯಾಯ.? ಕೂಡಲೆ ಬೆಲೆ ಏರಿಕೆಯನ್ನು ಹಿಂದಕ್ಕೆ ಪಡೆಯಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದೆಂದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಧುರಿ ಗಿರೀಶ್ ಮಾತನಾಡಿ ಬಡವರ ಕೈಗೆಟುಕದ ರೀತಿಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಅಗತ್ಯ ವಸ್ತುಗಳ ಬೆಲೆಯನ್ನು ಹೆಚ್ಚಿಸಿದೆ.ಬಸ್ ಪ್ರಯಾಣ ದರ ಏರಿಸಿಯೂ ಸಂಸ್ಥೆಯನ್ನು ಮುನ್ನಡೆಸಲು ಆಗುತ್ತಿಲ್ಲ. ಅದೋತಿಗೆ ಹೋಗುತ್ತಿದೆ. ಬಿಟ್ಟಿ ಭಾಗ್ಯಗಳನ್ನು ಕೊಡುವ ಅವಶ್ಯಕತೆ ಏನಿತ್ತು? ಬೆಳಕಿನ ಹಬ್ಬ ದೀಪಾವಳಿಗೆ ಬೆಲೆ ಏರಿಕೆಯೇ ಜನರಿಗೆ ಕಾಂಗ್ರೆಸ್ ನೀಡುತ್ತಿರುವ ಕೊಡುಗೆ ಎಂದು ಟೀಕಿಸಿದರು.
ಇದಕ್ಕೂ ಮುನ್ನಾ ಕೆ.ಎಸ್.ಆರ್.ಟಿ.ಸಿ. ಬಸ್ನಿಲ್ದಾಣದ ಮುಂಭಾಗವೇ ಬ್ಯಾರಿಕೇಡ್ಗಳನ್ನು ಅಡ್ಡ ಇಟ್ಟು ಬಿಜೆಪಿ ಕಾರ್ಯಕರ್ತರು ಒಳಗೆ ಹೋಗದಂತೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದ ಪರಿಣಾಮ ಸಿಟ್ಟಿಗೆದ್ದ ಕಾರ್ಯಕರ್ತರು ಪೊಲೀಸ್ರೊಡನೆ ಕೆಲ ಕಾಲ ಮಾತಿನ ಜಟಾಪಟಿ ನಡೆಸಿದ್ದರಿಂದ ಪೊಲೀಸರು ಹಾಗು ಬಿಜೆಪಿ.ಕಾರ್ಯಕರ್ತರ ನಡುವೆ ತಳ್ಳಾಟ ನಡೆಯಿತು. ಕೊನೆಗೆ ನಿಲ್ದಾಣಕ್ಕೆ ನುಗ್ಗಿದ ಕಾರ್ಯಕರ್ತರು ಬಸ್ನ ಮುಂಭಾಗ ಕುಳಿತು ಒಂದು ಗಂಟೆಗಳವರೆಗೆ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿಗಳಾದ ಜಿ.ಹೆಚ್.ಮೋಹನ್, ಡಾ.ಮಂಜು, ಉಪಾಧ್ಯಕ್ಷ ಲಿಂಗರಾಜ್, ಗ್ರಾಮಾಂತರ ಅಧ್ಯಕ್ಷ ನಾಗರಾಜ್, ದಗ್ಗೆಶಿವಪ್ರಕಾಶ್, ಶೈಲೇಶ್ಕುಮಾರ್ ಅರುಣ್ಕುಮಾರ್, ಪರಶುರಾಂ, ಬಾಂಡ್ ರವಿ, ಬೋಸೆ ರಂಗಪ್ಪ, ನಾಗರಾಜ್, ಬಿ.ತಿಪ್ಪೇಸ್ವಾಮಿ, ಚಲವಾದಿ ಮೋಹನ್ಆದರ್ಶ, ಮಲ್ಲಿಕಾರ್ಜುನ್, ವಸಂತಚಾರ್ ಬಸಮ್ಮ, ಚಂದ್ರಿಕಾ ಲೋಕನಾಥ್, ಅರುಣಕುಮಾರಿ, ಸುಮ, ಗಿರೀಶ್, ವೀಣ, ರೋಹಿತ್, ಬಸವೇಶ್, ಸಿದ್ದೇಶ್, ಲೀಲಾವತಿ, ಸಂಜಯ, ಚೇತನ್, ಚಿರಾಗ್, ಮಂಜು ಹಾಗೂ ವಿವಿಧ ಮೋರ್ಚಾ ಪದಾಧಿಕಾರಿಗಳು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.
🟢 WhatsApp Group
Join WhatsApp Group
🔵 Facebook Page
Follow Facebook Page
⚫ Twitter / X
Follow on X (Twitter)
🟣 Threads
Follow on Threads
Follow on Instagram
🔵 Telegram
Join Telegram Channel
🟢 WhatsApp Channel
Follow WhatsApp Channel
📰 ಸಮಗ್ರ ಸುದ್ದಿ
ನಿಖರತೆಗೆ ಮತ್ತೊಂದು ಹೆಸರು 📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು