ವಿಪಕ್ಷಗಳ ಟೀಕೆಗಳಿಗೆ ತಲೆಕೆಡಿಸಿಕೊಳ್ಳುವುದಿಲ್ಲ, ಜನಪರ ಕೆಲಸವೇ ನಮ್ಮ ಆದ್ಯತೆ: ಸಚಿವ ಯು.ಟಿ. ಖಾದರ್.

ಚಿತ್ರದುರ್ಗ ನ. 06

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಸರ್ಕಾರದ ಅಧಿಕಾರಿಗಳು ಮತ್ತು ನಾಯಕರು ಜನಸಾಮಾನ್ಯರ ಪರವಾಗಿ ಕೆಲಸ ಮಾಡುತ್ತಿದ್ದಾರೆ ಹೊರತು, ವಿಪಕ್ಷಗಳ ಟೀಕೆಗಳನ್ನು ನೋಡಿ ರಾಜಕೀಯ ಮಾಡುವುದಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಹಾಗೂ ವಕ್ಸ್ ಮತ್ತು ಹಜ್ ಸಚಿವರಾದ ಯು.ಟಿ.ಖಾದರ್ ತಿಳಿಸಿದರು.

ಚಿತ್ರದುರ್ಗ ನಗರಕ್ಕೆ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಪಕ್ಷವು ಡಾ. ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನಕ್ಕೆ ಅನುಗುಣವಾಗಿ ಜನತೆಯ ಬದುಕನ್ನು ನೋಡಿಕೊಳ್ಳುತ್ತಾ ರಾಜಕೀಯ ಹಾಗೂ ಸಾಮಾಜಿಕ ಸೇವೆಯನ್ನು ಮಾಡುತ್ತಿದೆ. ಸರ್ಕಾರದ ಅಧಿಕಾರಿಗಳು ಮತ್ತು ನಾಯಕರು ಜನಸಾಮಾನ್ಯರ ಪರವಾಗಿ ಕೆಲಸ ಮಾಡುತ್ತಿದ್ದಾರೆ ಹೊರತು, ವಿಪಕ್ಷಗಳ ಟೀಕೆಗಳನ್ನು ನೋಡಿ ರಾಜಕೀಯ ಮಾಡುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿ ಸರ್ವಧರ್ಮ ಹಾಗೂ ಸರ್ವಜನರ ಪ್ರೀತಿ-ವಿಶ್ವಾಸದ ಸರ್ಕಾರವಿದ್ದು, ಕಳೆದ ಮೂರೂವರೆ ವರ್ಷಗಳಿಂದ ಯಾವುದೇ ಅಡೆತಡೆಯಿಲ್ಲದೆ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರು ತಿಂಗಳಿಗೊಮ್ಮೆ ಸರ್ಕಾರದ ಅಸ್ಥಿರತೆಯ ಸಮಸ್ಯೆ ಎದುರಾಗುತ್ತಿತ್ತು ಆದರೆ ಪ್ರಸ್ತುತ ಸರ್ಕಾರ ಸುಭದ್ರವಾಗಿದೆ ಎಂದು ಅವರು ಹಾಲಿನ ಬೆಲೆ ಜಾಸ್ತಿಯಾಗಿ ರೈತರಿಗೆ 7 ರಿಂದ 8 ರೂಪಾಯಿಗಳನ್ನು ನೀಡಲಾಗುತ್ತಿದ್ದು, ಇದು ರೈತರಿಗೆ ಮತ್ತು ಹೈನುಗಾರಿಕೆಗೆ ದೊಡ್ಡ ಮಟ್ಟದ ಉತ್ತೇಜನ ನೀಡಿದೆ. ಕೆಎಸ್‍ಆರ್‍ಟಿಸಿ ಸಂಸ್ಥೆಯಲ್ಲಿ ನಷ್ಟದ ಹೊರತಾಗಿಯೂ ಗ್ರಾಮೀಣ ಮಟ್ಟಕ್ಕೆ ಬಸ್ ಸೇವೆಗಳನ್ನು ವಿಸ್ತರಿಸಲಾಗುತ್ತಿದ್ದು, ಮಹಿಳೆಯರು, ಮಕ್ಕಳು ಮತ್ತು ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದ ಸೌಲಭ್ಯವನ್ನು ಯಶಸ್ವಿಯಾಗಿ ಕಲ್ಪಿಸಲಾಗಿದೆ. ವಿಪಕ್ಷಗಳು ಗ್ಯಾರಂಟಿ ಯೋಜನೆಗಳು ಮತ್ತು ಸರ್ಕಾರದ ಅಸ್ಥಿರತೆಯ ಕುರಿತು ಮಾಡುವ ಟೀಕೆಗಳಿಗೆ ಯಾವುದೇ ಆಧಾರವಿಲ್ಲ ಎಂದು ಅವರು ತಿರುಗೇಟು ನೀಡಿದ್ದಾರೆ.

ರಾಜ್ಯದ ಪ್ರಮುಖ ಜಿಲ್ಲೆಗಳಲ್ಲಿ ಒಂದಾದ ಚಿತ್ರದುರ್ಗ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ. ಜಿಲ್ಲೆಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಕ್ಷೇತ್ರಗಳಲ್ಲಿ ಹೆಚ್ಚಿನ ಕೊಡುಗೆಯನ್ನು ನೀಡುವ ಉದ್ದೇಶದಿಂದ ತಾವು ಆರೋಗ್ಯ, ಅಲ್ಪಸಂಖ್ಯಾತರ ಹಾಗೂ ವಕ್ಸ್ ಮತ್ತು ಹಜ್ ಸಚಿವರಾಗಿ ಜಿಲ್ಲೆಗೆ ಭೇಟಿ ನೀಡಿರುವುದಾಗಿ ಸ್ಪಷ್ಟಪಡಿಸಿ ಜಿಲ್ಲಾ ಆಸ್ಪತ್ರೆಯನ್ನು ಉನ್ನತೀಕರಿಸುವುದರ ಜೊತೆಗೆ, ವೈದ್ಯಕೀಯ ಶಿಕ್ಷಣ ಇಲಾಖೆಯ ವತಿಯಿಂದ ತಾಲೂಕು ಮಟ್ಟದ ಆಸ್ಪತ್ರೆಗಳನ್ನು ಅಭಿವೃದ್ಧಿಪಡಿಸಲು ಮತ್ತು ಅಲ್ಪಸಂಖ್ಯಾತ ಇಲಾಖೆಯ ಶಿಕ್ಷಣ ಸಂಸ್ಥೆಗಳಲ್ಲಿರುವ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ವಕ್ಫ್ ಆಸ್ತಿಗಳಲ್ಲಿರುವ ಸಮಸ್ಯೆಗಳ ಬಗ್ಗೆಯೂ ಪರಿಶೀಲನೆ ನಡೆಸುವುದಾಗಿ ಅವರು ಹೇಳಿದರು.

ರಾಜ್ಯದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ವಿರೋಧ ಪಕ್ಷಗಳ ಅಪಪ್ರಚಾರಗಳಿಗೆ ಜನತೆ ಕಿವಿಗೊಡುವುದಿಲ್ಲ. ಸರ್ಕಾರದ ಗ್ಯಾರಂಟಿ ಯೋಜನೆಗಳು ಮತ್ತು ಜನಪರ ಆಡಳಿತದ ಮೂಲಕ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯನ್ನು ಮುಂದುವರಿಸಲಾಗುವುದು ಎಂದು ಸಚಿವರು ತಿಳಿಸಿದರು.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.

🟢 WhatsApp Group

Join WhatsApp Group

🔵 Facebook Page

Follow Facebook Page

⚫ Twitter / X

Follow on X (Twitter)

🟣 Threads

Follow on Threads

🟠 Instagram

Follow on Instagram

🔵 Telegram

Join Telegram Channel

🟢 WhatsApp Channel

Follow WhatsApp Channel

📰 ಸಮಗ್ರ ಸುದ್ದಿ

ನಿಖರತೆಗೆ ಮತ್ತೊಂದು ಹೆಸರು

📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು

Leave a Reply

Your email address will not be published. Required fields are marked *