ಮತದಾರರ ಹಕ್ಕು ರಕ್ಷಣೆಗೆ ಕಾಂಗ್ರೆಸ್ ಹೋರಾಟ: ಚಿತ್ರದುರ್ಗದಲ್ಲಿ ‘ವೋಟ್ ಬಚಾವೋ, ದೇಶ ಬಚಾವೋ’ ಪ್ರತಿಭಟನೆ.

ಚಿತ್ರದುರ್ಗ ನ. 7

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಮತದಾರರ ಹಕ್ಕನ್ನು ಸಂವಿಧಾನ ಬದ್ಧವಾಗಿ ಉಳಿಸಿಕೊಳ್ಳುವುದು ದೇಶದ ಪ್ರತಿಯೊಬ್ಬ ನಾಗರಿಕನ ಮತ್ತು ಎಲ್ಲಾ ಪಕ್ಷಗಳ ಜವಾಬ್ದಾರಿಯಾಗಿದೆ. ಮತದಾರರ ಪಟ್ಟಿಯಿಂದ ಅನ್ಯಾಯವಾಗಿ ಕೈಬಿಡಲಾಗಿರುವ ಪ್ರತಿಯೊಬ್ಬರ ಹೆಸರನ್ನು ಮರು ಸೇರ್ಪಡೆಗೊಳಿಸುವವರೆಗೆ ಮತ್ತು ಸಂವಿಧಾನ ವಿರೋಧಿ ಧೋರಣೆಗಳನ್ನು ಮಟ್ಟಹಾಕುವವರೆಗೆ ಕಾಂಗ್ರೆಸ್ ಪಕ್ಷವು ನಿರಂತರವಾಗಿ ಹೋರಾಟ ನಡೆಸಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ನಗರಾಭೀವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ತಾಜ್‍ಪೀರ್ ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಸಮಿತಿವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಜನ ಸಾಮಾನ್ಯರ ಪ್ರಾಥಮಿಕ ಹಕ್ಕುಗಳಲ್ಲಿ ಒಂದಾದ ಮತದಾನ ಹಕ್ಕನ್ನು ರಕ್ಷಿಸಲು ವೋಟೋ ಬಚಾವೋ ದೇಶ ಬಚಾವೋ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಂವಿಧಾನವು ಪ್ರತಿಯೊಬ್ಬ ಪ್ರಜೆಗೂ ನೀಡಿರುವ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಕೆಲಸವನ್ನು ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗ ಮಾಡುತ್ತಿವೆ ಸಂವಿಧಾನಕ್ಕೆ ವಿರುದ್ಧವಾಗಿ ಫಾರಮ್ 7, ಫಾರಮ್ 6 ಮತ್ತು ಫಾರಮ್ 8 ಅನ್ನು ದುರುಪಯೋಗಪಡಿಸಿಕೊಂಡು ಮತದಾರರ ಹೆಸರನ್ನು ಪಟ್ಟಿಯಿಂದ ಕೈಬಿಡಲಾಗುತ್ತಿದೆ ಸುಪ್ರೀಂ ಕೋರ್ಟ್ ಆದೇಶದಂತೆ, ಮತದಾರರ ಪಟ್ಟಿಯಿಂದ ಹೆಸರು ಬಿಟ್ಟುಹೋದವರ ಬಳಿ ಮತ್ತೆ ಫಾರಮ್ 6 ಅನ್ನು ಪಡೆದು ಅವರನ್ನು ನೇರವಾಗಿ ಮತದಾರರ ಪಟ್ಟಿಗೆ ಸೇರಿಸಬೇಕೆ ಹೊರತು, ಹಳೆಯ ಹೆಸರು ಬಿಟ್ಟುಹೋದವರಿಗೆ ಹೊಸದಾಗಿ ಫಾರಮ್ 6 ಪಡೆಯುವಂತೆ ಕಿರುಕುಳ ನೀಡಬಾರದು ಎಂದು ಒತ್ತಾಯಿಸಲಾಗಿದೆ.

ಇತ್ತೀಚೆಗೆ ರಾಷ್ಟ್ರೀಯ ಪಕ್ಷವೊಂದರ ರಾಜ್ಯ ಅಧ್ಯಕ್ಷರು ದೇಶದ ಪ್ರತಿಯೊಬ್ಬ ಪ್ರಜೆಯೂ ತಂದೆ-ತಾಯಿಯ ಮಕ್ಕಳು ವಿನಃ ಯಾವ ಪಕ್ಷದ ಮಕ್ಕಳಲ್ಲ ಎಂಬುದನ್ನು ಮರೆತು, ಬೇಜವಾಬ್ದಾರಿಯುತ ಹೇಳಿಕೆಗಳನ್ನು ನೀಡಿರುವುದನ್ನು ತೀವ್ರವಾಗಿ ಖಂಡಿಸಲಾಯಿತು. ಅಂತಹ ನಾಯಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಕೇವಲ ಎಚ್ಚರಿಕೆ ನೀಡಿ ಸುಮ್ಮನಿರುವ ಬದಲು ಅವರ ಹೇಳಿಕೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಬಿಜೆಪಿ ಮುಖಂಡ ಚಲವಾದಿ ನಾರಾಯಣಸ್ವಾಮಿ ಅವರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಹಾಗೂ ಮುಖಂಡರನ್ನು ಹಗುರವಾಗಿ ಮಾತನಾಡಿರುವುದನ್ನು ಖಂಡಿಸಿ, ಅವರು ತಮ್ಮ ಹೆಸರಿನಲ್ಲಿರುವ ‘ಚಲವಾದಿ’ ಪದವನ್ನು ಕೈಬಿಡಬೇಕು ಅಥವಾ ತಮ್ಮ ಹೇಳಿಕೆಗೆ ಬೇಷರತ್ತಾಗಿ ಕ್ಷಮೆ ಯಾಚಿಸಬೇಕು ಚಲವಾದಿ ಸಮಾಜಕ್ಕೆ ಅಪಮಾನ ಮಾಡುವ ಹಕ್ಕು ಯಾರಿಗೂ ಇಲ್ಲ ಎಂದು ಸ್ಪಷ್ಟಪಡಿಸಲಾಯಿತು.

ಭಾರತ ದೇಶದಲ್ಲಿ ಸುಮಾರು 12 ರಿಂದ 13 ಕೋಟಿ ಹಾಗೂ ಕರ್ನಾಟಕ ರಾಜ್ಯದಲ್ಲಿ ಸುಮಾರು ಒಂದು ಕೋಟಿ ಮತದಾರರ ಮತಗಳನ್ನು ವಂಚಿತರನ್ನಾಗಿ ಮಾಡಲಾಗಿದೆ. ಈ ಅನ್ಯಾಯದ ವಿರುದ್ಧ ನವೆಂಬರ್ 1ರಂದು ದೆಹಲಿಯಲ್ಲಿ ‘ಇಂಡಿಯಾ’ ಕೂಟದ ವತಿಯಿಂದ ರಾಹುಲ್ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ಇದರ ಮುಂದುವರಿದ ಭಾಗವಾಗಿ ರಾಜ್ಯ ಮಟ್ಟದಲ್ಲೂ ಕೆಪಿಸಿಸಿ ಹಾಗೂ ಜಿಲ್ಲಾ ಕಾಂಗ್ರೆಸ್ ಕಚೇರಿಗಳ ಮುಂದೆ “ದೇಶ ಉಳಿಸು, ವೋಟ್ ಉಳಿಸು” ಅಭಿಯಾನದ ಮೂಲಕ ಪ್ರತಿಭಟನೆಗಳನ್ನು ನಡೆಸಲಾಗುತ್ತಿದೆ ಎಂದರು.

ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಆರ್.ಕೆ. ಸರ್ಧಾರ್ ಮಾತನಾಡಿ, ದೇಶದ ಪ್ರಜಾಪ್ರಭುತ್ವವನ್ನು ಮತ್ತು ಜನರ ಮೂಲಭೂತ ಹಕ್ಕಾದ ಮತವನ್ನು ರಕ್ಷಿಸಲು ಎಲ್ಲ ಪಕ್ಷಗಳು ಹಾಗೂ ಒಗ್ಗೂಡಿ ‘ವೋಟ್ ಬಚಾವೋ’ ಅಭಿಯಾನವನ್ನು ಯಶಸ್ವಿಗೊಳಿಸಬೇಕು ದೆಹಲಿ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಕನಿಷ್ಠ 13 ಕೋಟಿಗೂ ಅಧಿಕ ಮತಗಳನ್ನು ಪಟ್ಟಿಯಿಂದ ಕಡೆಗಣಿಸುವ ಹುನ್ನಾರ ನಡೆಯುತ್ತಿದ್ದು, ಇದರ ವಿರುದ್ಧ ಗಂಭೀರ ಹೋರಾಟವನ್ನು ಆರಂಭಿಸಲಾಗಿದೆ ಈ ಹೋರಾಟಕ್ಕೆ ಕಾಂಗ್ರೆಸ್ ಪಕ್ಷದ ಮುಖಂಡರಾದ ರಾಹುಲ್ ಗಾಂಧಿ ಅವರ ನೇತೃತ್ವ ಹಾಗೂ ಇಡೀ ಕಾಂಗ್ರೆಸ್ ಪಕ್ಷದ ಮುಖಂಡರ ಬೆಂಬಲವಿದೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ‘ಮತ’ ಎನ್ನುವುದು ಅತ್ಯಂತ ದೊಡ್ಡ ಹಕ್ಕಾಗಿದ್ದು, ದೇಶದಲ್ಲಿ ಮತಗಳೇ ಕಳವಾದರೆ ಪ್ರಜಾಪ್ರಭುತ್ವ ಉಳಿಯಲು ಸಾಧ್ಯವಿಲ್ಲ. ಮತ ವಂಚನೆ ಮತ್ತು ಕಳವು ಮಾಡುವ ಕೆಟ್ಟ ಆಲೋಚನೆಗಳನ್ನು ಹೊಂದಿರುವವರ ವಿರುದ್ಧ ಯಾವುದೇ ಪಕ್ಷದ ಮುಖಂಡರಾಗಲಿ, ನಾವು ಒಂದಾಗಿ ಎಚ್ಚೆತ್ತುಕೊಳ್ಳಬೇಕು ಪ್ರತಿಯೊಬ್ಬ ನಾಗರಿಕನೂ ತನ್ನ ಮತದ ಹಕ್ಕನ್ನು ಉಳಿಸಿಕೊಳ್ಳಲು ಈ ಅಭಿಯಾನವನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾದ ಕೆ.ಎಂ.ಹಾಲಸ್ವಾಮಿ ಮಾತನಾಡಿ, ಕೇಂದ್ರದ ಬಿಜೆಪಿ ಸರ್ಕಾರವು ಕಳೆದ ಹನ್ನೆರಡು ವರ್ಷಗಳಿಂದ ದೇಶದ ಜನರಿಗೆ ಯಾವುದೇ ಚುನಾವಣಾ ಪ್ರಣಾಳಿಕೆ ವಚನಗಳನ್ನು ಈಡೇರಿಸದೆ ಕೇವಲ ಸುಳ್ಳು ಆಶ್ವಾಸನೆಗಳ ಮೂಲಕ ಅಧಿಕಾರ ನಡೆಸುತ್ತಿದೆ. ಯುವಕರು, ರೈತರು ಹಾಗೂ ಬಡವರನ್ನು ವಂಚಿಸುವ ಮೂಲಕ ಬಿಜೆಪಿ ನಾಯಕರು ದೇಶದ

ಮತದಾರರಿಗೆ ದ್ರೋಹ ಎಸಗುತ್ತಿದ್ದಾರೆ. 2014ರಲ್ಲಿ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ಅಭ್ಯರ್ಥಿಯಾಗಿ ಘೋಷಣೆಯಾದ ಸಂದರ್ಭದಲ್ಲಿ ದೇಶಕ್ಕೆ ವಿವಿಧ ಪ್ರಣಾಳಿಕೆಗಳನ್ನು ಬಿಡುಗಡೆ ಮಾಡಿದ್ದರು. ಎರಡು ವರ್ಷಕ್ಕೆ ಎರಡು ಕೋಟಿ ಉದ್ಯೋಗ ಕಲ್ಪಿಸುವುದಾಗಿ, ವಿದೇಶದಲ್ಲಿದ್ದ ಕಪ್ಪು ಹಣವನ್ನು ತಂದು ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂಪಾಯಿ ಜಮಾ ಮಾಡುವುದಾಗಿ ಮತ್ತು ಗೋಹತ್ಯೆ ನಿಷೇಧಿಸುವುದಾಗಿ ಭರವಸೆ ನೀಡಿದ್ದರು. ಆದರೆ ಈ ಯಾವುದೇ ಪ್ರಣಾಳಿಕೆಗಳನ್ನು ಕಳೆದ ಹನ್ನೆರಡು ವರ್ಷಗಳಲ್ಲಿ ಈಡೇರಿಸಿಲ್ಲ ಎಂದು ದೂರಿದರು.

ಡೀಸೆಲ್, ಪೆಟ್ರೋಲ್, ಅಡುಗೆ ಅನಿಲ ಹಾಗೂ ರೈತರ ರಸಗೊಬ್ಬರಗಳ ಬೆಲೆಯನ್ನು ನಿಯಂತ್ರಿಸುವುದಾಗಿ ಸುಳ್ಳು ಸರಮಾಲೆಗಳನ್ನು ಬಿತ್ತರಿಸಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ, ಪ್ರತಿಯೊಂದು ವಲಯದಲ್ಲೂ ಸಂಪೂರ್ಣವಾಗಿ ವಿಫಲವಾಗಿದೆ ರಾಜೀವ್ ಗಾಂಧಿಯವರು ಯುವಕರಿಗೆ ನೀಡಿದ್ದ ಮತದಾನದ ಹಕ್ಕನ್ನು ಕಸಿಯುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಪ್ರತಿ ವರ್ಷವೂ ಮತದಾರರ ಪರಿಷ್ಕರಣೆ ಸಾಮಾನ್ಯ ಪ್ರಕ್ರಿಯೆಯಾಗಿದ್ದರೂ, ಕೇವಲ ಒಂದು ಸಣ್ಣಪುಟ್ಟ ತಪ್ಪುಗಳನ್ನು ಮುಂದಿಟ್ಟುಕೊಂಡು ಬಿಹಾರ ಮತ್ತು ಪಶ್ಚಿಮ ಬಂಗಾಳದಂತಹ ರಾಜ್ಯಗಳಲ್ಲಿ ವಲಸಿಗರು, ಅಲ್ಪಸಂಖ್ಯಾತರು ಹಾಗೂ ಹಿಂದುಳಿದ ವರ್ಗದವರ ಮತಗಳನ್ನು ಕಡಿತಗೊಳಿಸುವ ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿದರು.

ಜ್ಞಾನೇಶ್ ಕುಮಾರ್ ಅವರು ಚುನಾವಣಾ ಆಯುಕ್ತರಾದ ಬಳಿಕ ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದ್ದಾರೆ ಸ್ವತಃ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಕೂಡ ಮಾಡದಷ್ಟು ಸಹಾಯವನ್ನು ಇವರು ಬಿಜೆಪಿ ಪರವಾಗಿ ಮಾಡುತ್ತಿದ್ದಾರೆ ಮುಂದಿನ ದಿನಗಳಲ್ಲಿ ದೇಶದ ಜನತೆ ಬಿಜೆಪಿ ಸರ್ಕಾರದ ಈ ಎಲ್ಲಾ ಮೋಸ ಹಾಗೂ ಜನವಿರೋಧಿ ನೀತಿಗಳಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಗೀತಾ ನಂದಿನಿಗೌಡ, ಮುದಾಸಿರ್, ಖುದ್ದುಸ್, ಲಕ್ಷ್ಮೀಕಾಂತ, ಮಂಜುನಾಥ್, ಖಾಸಿಂಆಲಿ, ಚಿತ್ರದುರ್ಗ ಗ್ಯಾರೆಂಟಿ ಅಧ್ಯಕ್ಷ ಪ್ರಕಾಶ್, ಉಪಾಧ್ಯಕ್ಷರಾದ ರವಿ ಕುಮಾರ್, ನರಹರಿ, ಪೈಲಟ್ ನಾಗರಾಜ್, ನಜ್ಮಾತಾಜ್, ಮೋಕ್ಷಾ ರುದ್ರಸ್ವಾಮಿ, ಚೋಟು, ಮಧುಗೌಡ ಸೇರಿದಂತೆ ವಿವಿಧ ಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.

🟢 WhatsApp Group

Join WhatsApp Group

🔵 Facebook Page

Follow Facebook Page

⚫ Twitter / X

Follow on X (Twitter)

🟣 Threads

Follow on Threads

🟠 Instagram

Follow on Instagram

🔵 Telegram

Join Telegram Channel

🟢 WhatsApp Channel

Follow WhatsApp Channel

📰 ಸಮಗ್ರ ಸುದ್ದಿ

ನಿಖರತೆಗೆ ಮತ್ತೊಂದು ಹೆಸರು

📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು

Leave a Reply

Your email address will not be published. Required fields are marked *