ಅಂಕಗಳ ಹಿಂದೆ ಓಡದೆ ಮಕ್ಕಳ ಪ್ರತಿಭೆ ಗುರುತಿಸಿ: ಶಾಲೆಗಳಲ್ಲಿ ಸೃಜನಶೀಲ ಚಟುವಟಿಕೆಗಳಿಗೆ ಆದ್ಯತೆ ನೀಡಿ – ಮಲ್ಲಿಕಾರ್ಜನ್.

ಚಿತ್ರದುರ್ಗದಲ್ಲಿ ದಕ್ಷಿಣ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ

ಚಿತ್ರದುರ್ಗ ನ. 7

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಶಾಲೆಗಳಲ್ಲಿ ಕೇವಲ ಅಂಕಗಳಿಗೆ ಮಾತ್ರ ಸೀಮಿತವಾಗದೆ, ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಅವಕಾಶ ಕಲ್ಪಿಸಬೇಕು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳ ಜತೆಗೆ ಪ್ರತಿವಾರವೂ ಎಲ್ಲಾ ಶಾಲೆಗಳಲ್ಲಿ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಮೂಲಕ ಮಕ್ಕಳಿಗೆ ಮಾತನಾಡುವ ಕೌಶಲ ಮತ್ತು ವೇದಿಕೆ ಧೈರ್ಯವನ್ನು ಬೆಳೆಸಬೇಕು ಎಂದು ಪ್ರೌಢ ಶಿಕ್ಷಣ ಸಂಯೋಜಕರಾದ ಮಲ್ಲಿಕಾರ್ಜನ್ ಶಿಕ್ಷಕರುಗಳಿಗೆ ಕರೆ ನೀಡಿದರು.

ಚಿತ್ರದುರ್ಗ ನಗರದ ಪಾಶ್ವನಾಥ ವಿದ್ಯಾ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾದ 2026-27ನೇ ಸಾಲಿನ ದಕ್ಷಿಣ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸಮಾಜದಲ್ಲಿ ಎಲ್ಲರೂ ಅಂಕಗಳ ಹಿಂದೆ ಬಿದ್ದುಕೊಂಡಿದ್ದೇವೆ ಮಕ್ಕಳಲ್ಲಿ ಅಪಾರ ಪ್ರತಿಭೆ ಇರುತ್ತದೆ ಆ ಪ್ರತಿಭೆಗೆ ತಕ್ಕ ಅವಕಾಶಗಳನ್ನು ಮಾಡಿಕೊಡಬೇಕು ಕೇವಲ ಇಲಾಖಾ ಸಂದೇಶ ಬಂದಾಗ ಮಾತ್ರ ಪ್ರತಿಭಾ ಕಾರಂಜಿ ನಡೆಸುವ ಬದಲು, ಎಲ್ಲಾ ಶಾಲೆಗಳಲ್ಲೂ ಪ್ರತಿವಾರ ಒಂದೊಂದು ಅವಧಿಯನ್ನು ವಿವಿಧ ಕಾರ್ಯಕ್ರಮಗಳಿಗೆ ಮೀಸಲಿಡಬೇಕು ಪ್ರತಿದಿನ ತರಗತಿಗಳಲ್ಲಿ ಮಕ್ಕಳೊಂದಿಗೆ ಹೆಚ್ಚು ಸಂವಾದ ನಡೆಸಿ, ಬೋರ್ಡ್ ಹತ್ತಿರ ಕರೆಸಿ ಬರೆಯಿಸುವುದು ಹಾಗೂ ಚಾಕ್‍ಪೀಸ್ ಕೊಟ್ಟು ಬರೆಯಿಸುವ ಅಭ್ಯಾಸ ಮಾಡಿಸಬೇಕು ಇದರಿಂದ ಮಕ್ಕಳಿಗೆ ವೇದಿಕೆ ಭೀತಿ ದೂರವಾಗಿ ಮಾತನಾಡಲು ಕಲಿಯಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಸಾಹಿತ್ಯ, ವಿಜ್ಞಾನ ಮತ್ತು ಪ್ರಬಂಧಗಳ ಕುರಿತು ಪ್ರತಿವಾರ ಒಂದೊಂದು ಅವಧಿಯಲ್ಲಿ ಶಾಲೆಗಳಲ್ಲಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು ಪರಿಸರ ಸಂರಕ್ಷಣೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಾ ಸ್ಪರ್ಧೆ ಹಾಗೂ ಭಾಷಣಗಳನ್ನು ನಿಯಮಿತವಾಗಿ ಆಯೋಜಿಸಬೇಕು ಚಿತ್ರದುರ್ಗದ ದಕ್ಷಿಣ ಕ್ಲಸ್ಟರ್ ಮಟ್ಟದಲ್ಲಿ ಪ್ರತಿಭೆಗಳನ್ನು ಆಯ್ಕೆ ಮಾಡುವಾಗ ತೀರ್ಪುಗಾರರು ಯಾವುದೇ ತಾರತಮ್ಯ ಮಾಡದೆ, ವಸ್ತುನಿಷ್ಠವಾದ ತೀರ್ಪನ್ನು ನೀಡಬೇಕು. ನಮ್ಮ ಶಾಲೆಯ ಮಗು ಅಥವಾ ಬೇರೆ ಶಾಲೆಯ ಮಗು ಎಂಬ ದಭಾವವಿಲ್ಲದೆ ಅರ್ಹ ಪ್ರತಿಭೆಗಳನ್ನು ಗುರುತಿಸಬೇಕು ಎಂದು ತಿಳಿ ಹೇಳಿದರು.

ಸೋಲು ಮತ್ತು ಗೆಲುವು ಎರಡನ್ನೂ ಸಮಾನವಾಗಿ ಸ್ವೀಕರಿಸಬೇಕು ಇಂದು ಸೋತವರು ನಾಳೆ ಗೆಲ್ಲಬಹುದು ಎಂದ ಅವರು, ಸೋತವರು ಯಾವುದೇ ಕಾರಣಕ್ಕೂ ಹತಾಶರಾಗದೆ ಸಕಾರಾತ್ಮಕವಾಗಿ ಮುನ್ನಡೆಯಬೇಕು ಎಂದು ಮಕ್ಕಳಿಗೆ ಸಲಹೆ ಮಾಡಿ ಶಾಲೆಗಳಲ್ಲಿ ಪಠ್ಯದ ಜತೆಗೆ ಸಹಪಠ್ಯ ಚಟುವಟಿಕೆಗಳಿಗೆ ಸಮಾನ ಪ್ರಾಮುಖ್ಯತೆ ನೀಡಬೇಕು. ಮಕ್ಕಳ ಪ್ರತಿಭೆ ಅನಾವರಣಗೊಳ್ಳಲು ಹೆಚ್ಚಿನ ವೇದಿಕೆಗಳನ್ನು ಕಲ್ಪಿಸುವುದರ ಮೂಲಕ ಸ್ಪರ್ಧೆಗಳಲ್ಲಿ ಪಾರದರ್ಶಕತೆ ಮತ್ತು ವಸ್ತುನಿಷ್ಠತೆಯನ್ನು ಕಾಪಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ಶ್ವೇತಾ ಮಾತನಾಡಿ, ವಿದ್ಯಾರ್ಥಿಗಳ ಕಲೆ, ಸಾಹಿತ್ಯ, ಸಂಸ್ಕೃತಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿನ ಪ್ರತಿಭೆ ಹೊರಹಾಕಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ ಮಕ್ಕಳಲ್ಲಿ ಉತ್ತಮ ಪ್ರತಿಭೆ ಇದೆ. ಅಂತಹ ಪ್ರತಿಭಾವಂತ ಮಕ್ಕಳಿಗೆ ಸೂಕ್ತ ವೇದಿಕೆಗಳು ಬೇಕು. ಇದಕ್ಕೆ ಸರ್ಕಾರ ಅವಕಾಶವನ್ನು ಕಲ್ಪಿಸಿವೆ. ಇಂದಿನ ಮಕ್ಕಳಲ್ಲಿ ವಿದ್ಯಾಭ್ಯಾಸದ ಜೊತೆಗೆ ನಮ್ಮ ನಾಡಿನ ಕಲೆ ಮತ್ತು ಸಂಸ್ಕೃತಿಯನ್ನು ಬೆಳೆಸಲು ಪ್ರತಿಭಾ ಕಾರಂಜಿ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಪಾಶ್ವನಾಥ ಶಾಲೆಯ ಉಪಾಧ್ಯಕ್ಷರಾದ ಮುಕೇಶ್ ಕುಮಾರ್, ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿಯಾದ ಶ್ರೀಮತಿ ನಾಜಿಮಾ ಸ್ವಾಲೇಹಾ, ಫ್ರೌಢ ಶಾಲೆಯ ಮುಖ್ಯ ಶಿಕ್ಷಕರಾದ ಜನಕರೆಡ್ಡಿ ಭಾಗವಹಿಸಿದ್ದರು. ಈ ಪ್ರತಿಭಾ ಕಾರಂಜಿಯಲ್ಲಿ ದಕ್ಷಿಣ ಕ್ಲಸ್ಟರ್ ಮಟ್ಟದ 15 ಶಾಲೆಗ ಳಿಂದ 150 ಮಕ್ಕಳು ಭಾಗವಹಿಸಿದ್ದರು.

ಕಾರ್ಯಕ್ರಮದ ಅಂಗವಾಗಿ ವಿವಿಧ ಶಾಲೆಗಳ ಮಕ್ಕಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ಮಕ್ಕಳು ವಿವಿಧ ಪ್ರಾಣಿಗಳ ಆಕೃತಿಗಳನ್ನು ಮಾಡಿ ಪೋಷಕರ ಮನ ಗೆದ್ದರು. ಇದರ ಜೊತೆಗೆ ಕಲಾ ವೇಷಗಳಲ್ಲಿ ರಾವಣ, ಶಿವ, ಒನಕೆಓಬವ್ವ ಸೇರಿದಂತೆ ಅನೇಕ ಪಾತ್ರಗಳನ್ನು ಮಕ್ಕಳು ಧರಿಸಿ, ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.

🟢 WhatsApp Group

Join WhatsApp Group

🔵 Facebook Page

Follow Facebook Page

⚫ Twitter / X

Follow on X (Twitter)

🟣 Threads

Follow on Threads

🟠 Instagram

Follow on Instagram

🔵 Telegram

Join Telegram Channel

🟢 WhatsApp Channel

Follow WhatsApp Channel

📰 ಸಮಗ್ರ ಸುದ್ದಿ

ನಿಖರತೆಗೆ ಮತ್ತೊಂದು ಹೆಸರು

📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು

Leave a Reply

Your email address will not be published. Required fields are marked *