ಚಿತ್ರದುರ್ಗ ನ. 7
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ನಗರದ ಧರ್ಮ ಶಾಲಾ ರಸ್ತೆಯಲ್ಲಿನ ಶ್ರೀ ಪಾಶ್ರ್ವನಾಥ ವಿದ್ಯಾ ಸಂಸ್ಥೆಯಲ್ಲಿ ದೀಪಾವಳಿಯ ಅಂಗವಾಗಿ ಶನಿವಾರ 6000ಕ್ಕೂ ಹೆಚ್ಚುಹಣತೆಯನ್ನು ಮಕ್ಕಳಿಂದ ಹಚ್ಚುವುದರ ಮೂಲಕ ಆಡಳಿತ ಮಂಡಳಿಯರು ದೀಪಾವಳಿಯನ್ನು ಅಚರಣೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಕಾರ್ಯದರ್ಶಿ ಸುರೇಶ್ ಕುಮಾರ್ ಮಾತನಾಡಿ ಪ್ರತಿ ವರ್ಷ ದಂತೆ ಈ ವರ್ಷವೂ ಜಿಲ್ಲೆಯಾದ್ಯಂತ ದೀಪಾವಳಿ ಹಬ್ಬವನ್ನು ಸಡಗರದಿಂದ ಆಚರಿಸಲಾಗುತ್ತಿದ್ದು, ಹಬ್ಬದ ಸಂದರ್ಭದಲ್ಲಿ ಸಿಡಿಸುವ ಪಟಾಕಿಗಳು ಶಬ್ದಮಾಲಿನ್ಯ ಮತ್ತು ವಾಯು ಮಾಲಿನ್ಯವನ್ನು ಪರಿಸರಕ್ಕೆ ಮಾಡುತ್ತಿವೆ. ಇದರಿಂದ ಜನರ ಆರೋಗ್ಯವೂ ಹದಗೆಡುತ್ತಿದ್ದು, ಪ್ರಾಣಿ- ಪಕ್ಷಿಗಳಿಗೂ ತೊಂದರೆಯಾಗುತ್ತಿದೆ. ಆದ್ದರಿಂದ ಸಾರ್ವಜನಿಕರು ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ, ಸರಳ ರೀತಿಯಲ್ಲಿ ಹಾಗೂ ಮಾಲಿನ್ಯ ರಹಿತವಾಗಿ ಆಚರಿಸಬೇಕೆಂದು ಮನವಿ ಮಾಡಿ ಸಾರ್ವಜನಿಕರು ಕೇವಲ ಹಸಿರು ಪಟಾಕಿಗಳನ್ನು ಮಾತ್ರ ಅಧಿಕೃತ ಹಾಗೂ ಅನುಮೋದಿತ ಮಾರಾಟಗಾರರಿಂದ ಖರೀದಿಸಬೇಕಾಗಿದೆ. ಎಂದು ತಿಳಿಸಿದರು.
ಈ ಕಾರ್ಯಕ್ರಮವನ್ನು ಸಂಸ್ಥೆಯ ಉಪಾಧ್ಯಕ್ಷರಾದ ಮುಖೇಶ್ ಸೋನುವಾಡಿಯ ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಶಾಲೆಯ ತುಂಬೆಲ್ಲಾ ಮಣ್ಣಿನ ಹಣತೆಗಳಲ್ಲಿ ಸಾಲು ಸಾಲಾಗಿ ಇಟ್ಟು ಅದಕ್ಕೆ ಮಕ್ಕಳಿಂದ ದೀಪವನ್ನು ಹಚ್ಚುವುದರ ಮೂಲಕದೀಪಾವಳಿಯನ್ನು ಆಚರಣೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಶಾಲಾ ಮಕ್ಕಳಿಂದ ವಿವಿಧ ರೀತಿಯ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆದವು.
ಈ ಸಮಯದಲ್ಲಿ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿಯಾದ ಶ್ರೀಮತಿ ನಾಜಿಮಾ ಸ್ವಾಲೇಹಾ, ಫ್ರೌಢ ಶಾಲೆಯ ಮುಖ್ಯ ಶಿಕ್ಷಕರಾದ ಜನಕರೆಡ್ಡಿ, ವ್ಯವಸ್ಥಾಪಕರಾದ ವಿಜಯ್ ಕುಮಾರ್, ಚಿತ್ರ ಕಲಾವಿದ ನಾಗರಾಜ್ ಬೇದ್ರೇ ಭಾಗವಹಿಸಿದ್ದರು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.
🟢 WhatsApp Group
Join WhatsApp Group
🔵 Facebook Page
Follow Facebook Page
⚫ Twitter / X
Follow on X (Twitter)
🟣 Threads
Follow on Threads
Follow on Instagram
🔵 Telegram
Join Telegram Channel
🟢 WhatsApp Channel
Follow WhatsApp Channel
📰 ಸಮಗ್ರ ಸುದ್ದಿ
ನಿಖರತೆಗೆ ಮತ್ತೊಂದು ಹೆಸರು
📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು