ಚಿತ್ರದುರ್ಗ ನ. 11
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಹಾಗೂ ವಿವಿಧ ಜನಜಾಗೃತಿ ಮತ್ತು ಶೈಕ್ಷಣಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ಎಸ್.ಟಿ. ಮೋರ್ಚಾದ ಜಿಲ್ಲಾಧ್ಯಕ್ಷ ಜೆ.ಬಿ. ರಾಜು ತಿಳಿಸಿದ್ದಾರೆ.
ಚಿತ್ರದುರ್ಗ ನಗರದ ಬಿಜೆಪಿ ಕಚೇರಿಯಲ್ಲಿ ಗುರುವಾರ ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮದಿನಾಚರಣೆಯ ಅಂಗವಾಗಿ ನಡೆಸಿದ ಪೂರ್ವ ಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ, ಛತ್ತೀಸ್ಗಢ, ಮಹಾರಾಷ್ಟ್ರ, ಜಾರ್ಖಂಡ್, ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ಸೇರಿದಂತೆ ಜನಸಂಖ್ಯೆ ಹೆಚ್ಚಿರುವ ರಾಜ್ಯಗಳಲ್ಲಿ ಭಗವಾನ್ ಬಿರ್ಸಾ ಮುಂಡಾ ಅವರ ಹೆಸರಿನಲ್ಲಿ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲಾಗಿದೆ ಇದೇ ವೇಳೆ, ಬ್ರಿಟಿಷರ ವಿರುದ್ಧ ಧೀರ ಹೋರಾಟ ನಡೆಸಿದ ಭಗವಾನ್ ಬಿರ್ಸಾ ಮುಂಡಾ ಅವರ ಸ್ಮರಣಾರ್ಥವಾಗಿ ಜನಜಾತಿ ಸಂಘ ಹಾಗೂ ಉತ್ಸವ ಸಂಘಗಳನ್ನು ಸಹ ರಚಿಸಿ ಸ್ಥಾಪಿಸಲಾಗಿದೆ ಎಂದು ವಿವರಿಸಿದರು.
ಭಗವಾನ್ ಬಿರ್ಸಾ ಮುಂಡಾ ಅವರ ಆದರ್ಶಗಳನ್ನು ಸ್ಮರಿಸುತ್ತಾ, ದೇಶದಾದ್ಯಂತ ಮತ್ತು ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳು ಹಾಗೂ ಕಚೇರಿಗಳಲ್ಲಿ ಅವರ ಜನ್ಮದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಮತ್ತು ಯುವಜನತೆಯಲ್ಲಿ ರಾಷ್ಟ್ರೀಯ ಪ್ರಜ್ಞೆ ಹಾಗೂ ಐತಿಹಾಸಿಕ ಜಾಗೃತಿ ಮೂಡಿಸಲು ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗುವುದು, ಪ್ರತಿವರ್ಷ ನವೆಂಬರ್ 15 ರಂದು ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮದಿನೋತ್ಸವವನ್ನು ಆಚರಿಸಿಕೊಂಡು ಬರಲಾಗುತ್ತಿದ್ದು, ಈ ಬಾರಿಯೂ ಸಭೆ ನಡೆಸಿ ಹಂತ ಹಂತವಾಗಿ ಕಾರ್ಯಕ್ರಮಗಳನ್ನು ರೂಪಿಸಲು ತೀರ್ಮಾನಿಸಲಾಗಿದೆ ಎಂದರು.
ನ. 13 ರಂದು ಶಾಲಾ-ಕಾಲೇಜುಗಳಲ್ಲಿ ಹಾಗೂ ಆಸ್ಪತ್ರೆಗಳಲ್ಲಿ ಜಯಂತಿ ಪ್ರಯುಕ್ತ ಹಣ್ಣು ವಿತರಣೆ ಕಾರ್ಯಕ್ರಮ ಹಾಗೆಯೇ ನ. 14 ರಂದು ರಾಜಾವೀರ ಮದಕರಿ ನಾಯಕ ಪ್ರತಿಮೆಯನ್ನು ಸ್ವಚ್ಛಗೊಳಿಸಿ, ಸಂಜೆ ದೀಪಾರಾಧನೆ ನ. 15 ರಂದು ಜಿಲ್ಲಾ ಕಚೇರಿಯಲ್ಲಿ ಭಗವಾನ್ ಬಿರ್ಸಾ ಮುಂಡಾ ಜಯಂತ್ಯುತ್ಸವವನ್ನು ್ತ ಜಿಲ್ಲೆಯ ಎಲ್ಲಾ ಬಿಜೆಪಿ ಕಚೇರಿಗಳು ಹಾಗೂ ತಾಲೂಕು ಕಚೇರಿಗಳಲ್ಲಿ ಇದನ್ನು ಆಚರಿಸಲಾಗುವುದು ಎಂದು ತಿಳಿಸಿ ಎಲ್ಲಾ ಶಾಲೆಗಳು, ಕಾಲೇಜುಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಜನಜಾಗೃತಿ ಸಪ್ತಾಹ ಸಂದರ್ಭದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಎಸ್.ಟಿ.ಮೋರ್ಚಾದ ಪ್ರಧಾನ ಕಾರ್ಯದರ್ಶಿ ನವೀನ್ ಎನ್. ಬೋಸೇರಂಗಪ್ಪ, ಜಿಲ್ಲಾ ಕಾರ್ಯದರ್ಶಿ ದಕ್ಷಿಣ ಮೂರ್ತಿ, ಹಿರಿಯೂರು ಎಸ್.ಟಿ.ಮೋರ್ಚಾದ ಮಂಡಲ ಅಧ್ಯಕ್ಷ ಪ್ರಜ್ವಲ್ ಚಿತ್ರದುರ್ಗ ಗ್ರಾಮಾಂತರ ಎಸ್.ಟಿ. ಮೋರ್ಚಾದ ಅಧ್ಯಕ್ಷ ಪ್ರಸಾದ್ ಬಾಬು, ಜಿಲ್ಲಾ ವಕ್ತಾರ ನಾಗರಾಜ್ ಬೇದ್ರೇ ಉಪಸ್ಥಿತರಿದ್ದರು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.
🟢 WhatsApp Group
Join WhatsApp Group
🔵 Facebook Page
Follow Facebook Page
⚫ Twitter / X
Follow on X (Twitter)
🟣 Threads
Follow on Threads
Follow on Instagram
🔵 Telegram
Join Telegram Channel
🟢 WhatsApp Channel
Follow WhatsApp Channel
📰 ಸಮಗ್ರ ಸುದ್ದಿ
ನಿಖರತೆಗೆ ಮತ್ತೊಂದು ಹೆಸರು
📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು