ಮೌಲಾನಾ ಅಬುಲ್ ಕಲಾಂ ಆಜಾದ್ ಜಯಂತಿ ಆಚರಣೆ: ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆ ಸ್ಮರಿಸಿದ ಕಾಂಗ್ರೆಸ್ ಮುಖಂಡರು.

ಚಿತ್ರದುರ್ಗ ನ. 11

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಸ್ವಾತಂತ್ರ್ಯ ಹೋರಾಟಗಾರ, ದೇಶದ ಪ್ರಥಮ ಶಿಕ್ಷಣ ಸಚಿವರಾದ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಜನ್ಮದಿನಾಚರಣೆಯನ್ನು ಕಾಂಗ್ರೆಸ್ ಪಕ್ಷದವತಿಯಿಂದ ಆಚರಿಸಲಾಗಿದ್ದು, ದೇಶದ ಶಿಕ್ಷಣ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆಯನ್ನು ಸ್ಮರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಸಿ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಪ್ರಥಮ ಪ್ರಧಾನಿ ಜವಹರಲಾಲ್ ನೆಹರೂ ಅವರ ಸಂಪುಟದಲ್ಲಿ ಮೊದಲ ಶಿಕ್ಷಣ ಸಚಿವರಾಗಿ ಮೌಲಾನಾ ಅಬುಲ್ ಕಲಾಂ ಆಜಾದ್ ಅವರು ಕಾರ್ಯನಿರ್ವಹಿಸಿದ್ದರು. ಸ್ವಾತಂತ್ರ್ಯ ಪೂರ್ವದಲ್ಲಿ ಶೇಕಡಾ 11ರಷ್ಟು ಜನರು ಮಾತ್ರ ಶಿಕ್ಷಣ ಪಡೆಯುತ್ತಿದ್ದರು. ಅದರಲ್ಲೂ ಕೆಲವೇ ಕೆಲವು ಸಮುದಾಯಗಳು ಮತ್ತು ಶ್ರೀಮಂತರಿಗೆ ಮಾತ್ರ ಶಿಕ್ಷಣ ಸಿಗುತ್ತಿತ್ತು. ಆದರೆ, ಸ್ವಾತಂತ್ರ್ಯ ಬಂದ ಬಳಿಕ ಸಮಾಜದ ಎಲ್ಲ ವರ್ಗದವರಿಗೂ ಶಿಕ್ಷಣ ಸಿಗಬೇಕು ಎಂಬ ದೂರದೃಷ್ಟಿಯಿಂದ ಮೌಲಾನಾ ಆಜಾದ್ ಅವರು ಅನೇಕ ಮಹತ್ವದ ನೀತಿಗಳನ್ನು ಹಾಗೂ ನಿಯಮಗಳನ್ನು ಜಾರಿಗೆ ತಂದರು ಅವರು ಜಾರಿಗೆ ತಂದ ಸುಧಾರಣೆಗಳು ಇಂದು ಅನೇಕ ಶಾಲೆಗಳು, ಹೈಸ್ಕೂಲ್‍ಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಬೆಳಕಾಗಿವೆ. ಅಲ್ಲದೆ, ಯುಜಿಸಿ ವ್ಯವಸ್ಥೆಯನ್ನು ಕೂಡ ಅಂದೇ ಅವರು ಪರಿಚಯಿಸಿದ್ದರು ಎಂದರು.

1947ರಲ್ಲಿ ದೇಶ ವಿಭಜನೆಗೊಂಡಾಗ ಒಳಸಂಚು ಹಾಗೂ ಜಾತಿ-ಕೋಮುವಾದದ ಸಂಚಿನಿಂದ ಭಾರತ ವಿಭಜನೆಯಾಯಿತು. ಹಿಂದೂ ಮಹಾಸಭಾ ಮತ್ತು ಮುಸ್ಲಿಂ ಲೀಗ್ ಒಳಸಂಚಿನಿಂದಾಗಿ ಈ ವಿಭಜನೆ ಸಂಭವಿಸಿತು. ಆದರೆ, ಮೌಲಾನಾ ಅಬುಲ್ ಕಲಾಂ ಆಜಾದ್ ಅವರು ದೇಶದ ವಿಭಜನೆಯನ್ನು ಕಟುವಾಗಿ ವಿರೋಧಿಸಿದ್ದರು. ಡೆಲ್ಲಿಯ ಜಾಮಿಯಾ ಮಸೀದಿ ಮೇಲೆ ನಿಂತು ಮುಸ್ಲಿಂ ಸಮುದಾಯಕ್ಕೆ ವಿಶೇಷವಾಗಿ ಮನವರಿಕೆ ಮಾಡಿಕೊಟ್ಟು, ನಮ್ಮ ಪೂರ್ವಜರು ಇಲ್ಲೇ ಹುಟ್ಟಿದ್ದಾರೆ, ನೂರಾರು ವರ್ಷಗಳ ಸೂಫಿ ಸಂತರು ಇಲ್ಲೇ ಇದ್ದಾರೆ, ಆದ್ದರಿಂದ ಯಾರೂ ದೇಶ ಬಿಟ್ಟು ಹೋಗಬೇಡಿ ಎಂದು ಕರೆ ನೀಡಿದ್ದರು.

ಇಂದಿನ ದಿನಗಳಲ್ಲಿ ದೇಶದಲ್ಲಿ ಕೋಮುವಾದಿ ವಾತಾವರಣವಿದ್ದು, ಕಾಂಗ್ರೆಸ್ ಪಕ್ಷವು ಜನರ ಕೈಗೆ ಕಾಗದ, ಪೆನ್ನು ಮತ್ತು ಪುಸ್ತಕವನ್ನು ನೀಡುವ ಉದ್ದೇಶ ಹೊಂದಿದೆ. ಪ್ರತಿಯೊಬ್ಬರಿಗೂ ಶಿಕ್ಷಣ ಸಿಗುವಂತಾಗಬೇಕು ಮತ್ತು ದೇಶದಲ್ಲಿ ಜಾತ್ಯತೀತ ತತ್ವ ಗಟ್ಟಿಯಾಗಿ ಉಳಿಯಬೇಕು ಎಂಬ ಉದ್ದೇಶದಿಂದ ಈ ಜನ್ಮದಿನಾಚರಣೆಯನ್ನು ಆಚರಿಸಲಾಗುತ್ತಿದೆ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಜನ್ಮದಿನವನ್ನು ಕೇವಲ ಆಚರಣೆಗಾಗಿ ಸೀಮಿತಗೊಳಿಸದೆ, ಶಿಕ್ಷಣ ದಿನಾಚರಣೆಯನ್ನಾಗಿ ಆಚರಿಸಬೇಕು. ಪ್ರತಿಯೊಬ್ಬರಿಗೂ ಶಿಕ್ಷಣ ಸಿಗುವಂತಹ ಮಾರ್ಗದಲ್ಲಿ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎನ್ನುವ ಸ್ಪಷ್ಟ ಸಂದೇಶವನ್ನು ನೀಡಲಾಯಿತು.

ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಅಧ್ಯಕ್ಷರಾದ ಸೈಯದ್ ಖುದ್ದುಸ್ ಮಾತನಾಡಿ, ಡಾ. ಮೌಲಾನಾ ಅಬ್ದುಲ್ ಕಲಾಂ ಅಜಾದ್ ಅವರು, ಸ್ವಾತಂತ್ರ್ಯ ಭಾರತದ ಮೊಟ್ಟ ಮೊದಲ ಶಿಕ್ಷಣ ಸಚಿವರು. ಸ್ವತಂತ್ರ ಭಾರತದ ಮೊದಲ ಶಿಕ್ಷಣ ಸಚಿವರಾಗಿ ಮೌಲಾನ್ ಅಜಾದ್ ರವರು 1947 ರ ಆಗಸ್ಟ್ 15 ರಿಂದ 1958 ರ ಫೆಬ್ರುವರಿ 2ರ ವರೆಗೆ ಸೇವೆ ಸಲ್ಲಿಸಿದ್ದರು. ಅಜಾದ್ ಅವರು ಶಿಕ್ಷಣ ಸಚಿವರಾಗಿದ್ದ ಸಮಯದಲ್ಲಿ’ರಾಷ್ಟ್ರೀಯ ಶಿಕ್ಷಣ ನೀತಿ’ ಯನ್ನು ಜಾರಿಗೆ ತಂದಿದ್ದರು.

ಡಾ. ಮೌಲಾನಾ ಅಬ್ದುಲ್ ಕಲಾಂ ಅಜಾದ್ ಅವರು ಸೌದಿ ಅರೇಬಿಯಾದ ಮೆಕ್ಕಾದಲ್ಲಿ 1888 ನವೆಂಬರ್ 11ರಂದು ಜನಿಸಿದರು. ಅರಬ್ಬೀ, ಉರ್ದು, ಪರ್ಷಿಯನ್, ಇಂಗ್ಲಿಷ್ ಭಾಷೆ, ಗಣಿತ, ಸಾಹಿತ್ಯ, ಯುನಾನಿ ವೈದ್ಯ ವಿಜ್ಞಾನಗಳನ್ನು ಅಜಾದ್ ಅವರು ಕರಗತ ಮಾಡಿಕೊಂಡಿದ್ದರು.ಉರ್ದು ವಿದ್ವಾಂಸರಾದ ಅವರು, ತಮ್ಮ ಬರಹಗಳಿಗೆ ‘ಅಜಾದ್’ ಎಂಬ ನಾಮಾಕಿಂತವನ್ನು ಬಳಸುತ್ತಿದ್ದರು. ಆದ್ದರಿಂದ ಅವರು ಮೌಲಾನಾ ಅಜಾದ್ ಎಂದೇ ಪ್ರಸಿದ್ಧಿಯಾದರು. ಅಜಾದ್ ಅವರು ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ಸಕ್ರಿಯ ಪಾತ್ರ ವಹಿಸಿದ್ದರು. ಖಿಲಾಫತ್ ಚಳವಳಿಯ ಮುಂದಾಳತ್ವ ವಹಿಸಿಕೊಂಡಿದ್ದರು.

ಅಜಾದ್ ಅವರು ಶಿಕ್ಷಣ ಸಚಿವರಾಗಿದ್ದ ಸಮಯದಲ್ಲಿ’ರಾಷ್ಟ್ರೀಯ ಶಿಕ್ಷಣ ನೀತಿ’ ಯನ್ನು ಜಾರಿಗೆ ತಂದಿದ್ದರು. ಪೂರ್ವ ಪ್ರಾಥಮಿಕ ಶೀಕ್ಷಣಕ್ಕೆ ಹೆಚ್ಚು ಒತ್ತು ನೀಡಿ ಕೊಡುಗೆ ನೀಡಿದ್ದರು. ಕೇಂದ್ರ ಶಿಕ್ಷಣ ಸಲಹಾ ಮಂಡಳಿಯ ಅಧ್ಯಕ್ಷರಾಗಿದ್ದ ಅಜಾದ್ ಅವರು ವಯಸ್ಕರ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಿದರು.ದಿಲ್ಲಿಯಲ್ಲಿ ಕೇಂದ್ರ ಇನ್ಸಿಟಿಟ್ಯೂಟ್ ಸ್ಥಾಪಿಸಿದರು. ಅದು ಮುಂದೆ ಡಿಯು ಶಿಕ್ಷಣ ಇಲಾಖೆಯಾಗಿ ಮಾರ್ಪಟ್ಟಿತು. ಅಜಾದ್ ಅಧ್ಯಕ್ಷತೆಯಲ್ಲಿ ಶಿಕ್ಷಣ ಸಚಿವಾಲಯವು 1951ರಲ್ಲಿ ಮೊಟ್ಟ ಮೊದಲ ಬಾರಿಗೆ ಭಾರತೀಯ ತಂತ್ರಜ್ಞಾನ ಸಂಸ್ಥೆಯನ್ನು ಸ್ಥಾಪಿಸಿತು.1953 ರಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗವನ್ನು ರಚಿಸಲಾಯಿತು. ಬೆಂಗಳೂರಿನಲ್ಲಿ ಭಾರತೀಯ ವಿಜ್ಞಾನ ಸಂಸ್ಥೆ ಮತ್ತು ದೆಹಲಿಯಲ್ಲಿ ವಿಶ್ವವಿದ್ಯಾಲಯದಲ್ಲಿ ತಂತ್ರಜ್ಞಾನ ವಿಭಾಗ ತೆರೆಯಲು ಒತ್ತು ನೀಡಿದರು. ಜಮಿಲಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಸಂಸ್ಥಾಪಕರಲ್ಲಿ ಒಬ್ಬರಾಗಿದ್ದಾರೆ. ಮೌಲಾನಾ ಅವರು ಫೆಬ್ರವರಿ 22, 1958 ರಂದು ದೆಹಲಿಯಲ್ಲಿ ನಿಧನರಾದರು.

ವಿದ್ಯಾರ್ಥಿಗಳು ಮಾತ್ರವಲ್ಲದೇ ದೇಶದ ಪ್ರತಿಯೊಬ್ಬ ಪ್ರಜೆಯೂ ಅವರ ಕೊಡುಗೆಯನ್ನು ನೆನೆಯಬೇಕು. ‘ಶಿಕ್ಷಣ ಎಂದರೆ ಕೇವಲ ಓದುವುದು ಅಲ್ಲ. ಇತರರಿಂದ ಕಲಿಯುವುದು ಮತ್ತು ಇತರರಿಗೂ ಕಲಿಸುವುದು’ ಇದು ಅವರ ಮಹತ್ವದ ಹೇಳಿಕೆಯಾಗಿದೆ.ಆದ್ದರಿಂದ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಶಿಕ್ಷಣ ಕ್ಷೇತ್ರಕ್ಕೆ ಇವರು ನೀಡಿದಂತಹ ಕೊಡುಗೆಗಳನ್ನು ಸ್ಮರಿಸುವ ಸಲುವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವತಿಯಿಂದ ಇವರ ಜಯಂತಿಯನ್ನು ಆಚರಿಸಲು ಸೂಕ್ತ ಕ್ರಮವನ್ನು ಕೈಗೊಳ್ಳಬೇಕೆಂದು ಸೈಯದ್ ಖುದ್ದುಸ್ ರವರು ಹೇಳಿದರು.

ಜಿಲ್ಲಾ ಗ್ಯಾರೆಂಟಿ ಅಧ್ಯಕ್ಷರಾದ ಶಿವಣ್ಣ, ಮಾತನಾಡಿ ಮುಸ್ಲಿಂ ಸಮುದಾಯವನ್ನು ಕೆಲವು ಶಕ್ತಿಗಳು ಕಡೆಗಣಿ ಸುತ್ತಿವೆ ದೇಶದ ತತ್ವ ಹಾಗೂ ಸಂವಿಧಾನವನ್ನು ಒಪ್ಪಿಕೊಂಡು, ದೇಶದೊಂದಿಗೆ ಸಹಬಾಳ್ವೆಯಿಂದ ಜೀವಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ ಮುಸ್ಲಿಂ ಸಮುದಾಯದವರು ದೇಶಕ್ಕೆ ಸೈನಿಕರಾಗಿ, ರಾಷ್ಟ್ರಪತಿಗಳಾಗಿ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಗಳು ಸ್ಮರಣೀಯ ಎಂದ ಅವರು ಶಿಕ್ಷಣ ಕ್ಷೇತ್ರಕ್ಕೆ ಸ್ವಾತಂತ್ರ್ಯ ದೊರೆತ ನಂತರ ನೀಡಿರುವ ಕೊಡುಗೆಗಳು ಅಪೂರ್ವವಾಗಿದ್ದು, ಶಿಕ್ಷಣದಿಂದ ಮಾತ್ರ ದೇಶದ ಪ್ರಗತಿ ಸಾಧ್ಯ ಪ್ರತಿಯೊಬ್ಬರ ಮನೆಯಲ್ಲಿ ಉತ್ತಮ ಶಿಕ್ಷಣ ಸಿಕ್ಕಾಗ ಮಾತ್ರ ಗ್ರಾಮ, ಜಿಲ್ಲೆ, ರಾಜ್ಯ ಮತ್ತು ದೇಶದ ಅಭಿವೃದ್ಧಿ ಸಾಧ್ಯವಾಗುತ್ತದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಹಾಗೂ ಶಾಂತಿ ನೆಲೆಸಲು ಜಾತಿ-ಮತಗಳ ಭೇದಭಾವವಿಲ್ಲದೆ, ಸಂವಿಧಾನದ ಆಶಯದಂತೆ ಎಲ್ಲರೂ ಒಮ್ಮುಖವಾಗಿ ಸಾಗಬೇಕು ಸರ್ವರಿಗೂ ಸಮಪಾಲು, ಸಮಬಾಳು ಎಂಬ ತತ್ವದಡಿ ಎಲ್ಲಾ ಜನಾಂಗಗಳನ್ನು ಒಂದುಗೂಡಿಸಿಕೊಂಡು ಹೋಗುವ ಗುಣ ಕಾಂಗ್ರೆಸ್ ಸರ್ಕಾರದಲ್ಲಿದೆ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ಸಂಪತ್ ಕುಮಾರ್, ಪದವೀಧರದ ಅಧ್ಯಕ್ಷರಾದ ಪ್ರಕಾಶ್‍ರಾಮನಾಯಕ, ಮೊಹಮ್ಮದ್ ರಫಿ ಮುನಿರಾ ಮುಖಾಂದರ, ಮುದಸಿರ್‍ನವಾಜ್, ಉಸ್ಮಾನ್ ಖಾಸಿಂ ಆಲಿ, ರೆಹಮಾನ್,ರಮೇಶ್, ರಾಜಣ್ಣ, ಚಾಂದ್‍ಪೀರ್, ಜಯ್ಯಣ್ಣ, ಪಾಪಣ್ಣ, ಇನ್ನು ಅನೇಕ ಮುಖಂಡರು ಭಾಗಿಯಾಗಿದ್ದರು.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.

🟢 WhatsApp Group

Join WhatsApp Group

🔵 Facebook Page

Follow Facebook Page

⚫ Twitter / X

Follow on X (Twitter)

🟣 Threads

Follow on Threads

🟠 Instagram

Follow on Instagram

🔵 Telegram

Join Telegram Channel

🟢 WhatsApp Channel

Follow WhatsApp Channel

📰 ಸಮಗ್ರ ಸುದ್ದಿ

ನಿಖರತೆಗೆ ಮತ್ತೊಂದು ಹೆಸರು

📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು

Leave a Reply

Your email address will not be published. Required fields are marked *