ಮಕ್ಕಳ ಹಕ್ಕುಗಳ ಸಂಸತ್–2026: ಮೈಸೂರಿನಲ್ಲಿ ಜಿಲ್ಲಾ ಮಟ್ಟದ ಮಕ್ಕಳ ಸಮಾಲೋಚನಾ ಕಾರ್ಯಾಗಾರ.

ಮೈಸೂರು, ನ. 11:

ಮಕ್ಕಳಲ್ಲಿ ನಾಯಕತ್ವ ಗುಣಗಳು, ಪ್ರಜಾಪ್ರಭುತ್ವದ ಮೌಲ್ಯಗಳು, ನಾಗರಿಕ ಪ್ರಜ್ಞೆ ಹಾಗೂ ಮಕ್ಕಳ ಹಕ್ಕುಗಳು ಮತ್ತು ಕರ್ತವ್ಯಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಮೈಸೂರಿನಲ್ಲಿ “ಮಕ್ಕಳ ಹಕ್ಕುಗಳ ಸಂಸತ್–2026” ಜಿಲ್ಲಾ ಮಟ್ಟದ ಮಕ್ಕಳ ಸಮಾಲೋಚನಾ ಕಾರ್ಯಾಗಾರವನ್ನು ಆಯೋಜಿಸಲಾಯಿತು.

ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆ (RLHP), ಮೈಸೂರು, ಯುನಿಸೆಫ್ (UNICEF) ಹಾಗೂ ಕರ್ನಾಟಕ ಮಕ್ಕಳ ಹಕ್ಕುಗಳ ನಿಗಾ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ನವೆಂಬರ್ 11ರಂದು ನಡೆದ ಈ ಕಾರ್ಯಾಗಾರದಲ್ಲಿ ವಿವಿಧ ತಾಲೂಕುಗಳಿಂದ ಆಗಮಿಸಿದ ಸುಮಾರು 50 ಮಕ್ಕಳು, ಪೋಷಕರು ಹಾಗೂ ಮಕ್ಕಳ ಪ್ರತಿನಿಧಿಗಳು ಭಾಗವಹಿಸಿದ್ದರು.

ಕಾರ್ಯಕ್ರಮದ ಪ್ರಾಸ್ತಾವಿಕವಾಗಿ ಮಾತನಾಡಿದ RLHP ಸಂಸ್ಥೆಯ ನಿರ್ದೇಶಕಿ ಸರಸ್ವತಿ ಅವರು, ಮಕ್ಕಳ ಹಕ್ಕುಗಳ ಸಂಸತ್ತಿನ ಉದ್ದೇಶ ಹಾಗೂ ಇಂತಹ ವೇದಿಕೆಗಳಲ್ಲಿ ಮಕ್ಕಳು ಸಕ್ರಿಯವಾಗಿ ಭಾಗವಹಿಸುವುದರ ಮಹತ್ವವನ್ನು ವಿವರಿಸಿದರು. ಮಕ್ಕಳಿಗೆ ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ವ್ಯಕ್ತಪಡಿಸಲು ಹಾಗೂ ತಮ್ಮ ಸಮಸ್ಯೆಗಳನ್ನು ಸಂಬಂಧಪಟ್ಟವರ ಗಮನಕ್ಕೆ ತರಲು ಇಂತಹ ಕಾರ್ಯಾಗಾರಗಳು ಸಹಕಾರಿಯಾಗಿವೆ ಎಂದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಆಶಾ ಎ.ಎಸ್. ಅವರು, ಮಕ್ಕಳಲ್ಲಿ ನಾಯಕತ್ವ ಗುಣಗಳು, ನಾಗರಿಕ ಪ್ರಜ್ಞೆ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬೆಳೆಸುವುದು ಅಗತ್ಯವಾಗಿದೆ. ಪ್ರತಿಯೊಬ್ಬ ಮಗುವೂ ತನ್ನ ಹಕ್ಕುಗಳು ಮತ್ತು ಕರ್ತವ್ಯಗಳ ಬಗ್ಗೆ ತಿಳಿದುಕೊಳ್ಳಬೇಕು. ಕಾರ್ಯಾಗಾರದಲ್ಲಿ ಪಡೆದುಕೊಂಡ ಮಾಹಿತಿಯನ್ನು ತಮ್ಮ ಶಾಲೆ ಹಾಗೂ ಸುತ್ತಮುತ್ತಲಿನ ಇತರ ಮಕ್ಕಳಿಗೂ ಹಂಚಿಕೊಳ್ಳುವ ಮೂಲಕ ಮಕ್ಕಳ ಹಕ್ಕುಗಳ ಕುರಿತು ಜಾಗೃತಿ ಮೂಡಿಸಬೇಕು ಎಂದು ಕರೆ ನೀಡಿದರು.

ಮೈಸೂರು ಗ್ರಾಮಾಂತರ ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದರಾಜು ಅವರು ಮಾತನಾಡಿ, ಶಾಲೆಗಳಲ್ಲಿ ಶಾಲಾ ಸಂಸತ್ತಿನ ರಚನೆ ಮತ್ತು ಅದರ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು. ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಸುರಕ್ಷಿತ ಮತ್ತು ಅಸುರಕ್ಷಿತ ಸ್ಪರ್ಶದ ಅರಿವು, ಮಕ್ಕಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳು ಹಾಗೂ ಮೊಬೈಲ್ ಬಳಕೆಯಿಂದ ಉಂಟಾಗುವ ಪರಿಣಾಮಗಳ ಕುರಿತು ವಿವರಿಸಿದರು.

ಮಕ್ಕಳು ತಮ್ಮ ಹಕ್ಕುಗಳ ಬಗ್ಗೆ ಸಂಪೂರ್ಣ ಅರಿವು ಹೊಂದುವುದರ ಜೊತೆಗೆ, ತಾವು ಎದುರಿಸುತ್ತಿರುವ ಸಮಸ್ಯೆಗಳನ್ನು ಗುರುತಿಸಿ ಅವುಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಮುಂದಾಗಬೇಕು. ಮುಂದಿನ ರಾಜ್ಯಮಟ್ಟದ ಮಕ್ಕಳ ಸಂಸತ್ತಿನಲ್ಲಿ ತಮ್ಮ ಸಮಸ್ಯೆಗಳು ಮತ್ತು ಅಭಿಪ್ರಾಯಗಳನ್ನು ಧೈರ್ಯವಾಗಿ ಮಂಡಿಸುವ ಮೂಲಕ ಮಕ್ಕಳ ಧ್ವನಿಯಾಗಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಕಾರ್ಯಾಗಾರದಲ್ಲಿ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ಸುಮಾರು 50 ಮಕ್ಕಳು, ಪೋಷಕರು ಭಾಗವಹಿಸಿದ್ದರು. ಮಕ್ಕಳ ಪ್ರತಿನಿಧಿಗಳಾದ ಕುಮಾರಿ ಚಂದನ, ಮಾಸ್ಟರ್ ಮೋಹಿತ್ ಹಾಗೂ ಅಪೇಕ್ಷಿತ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಮಕ್ಕಳ ಹಕ್ಕುಗಳ ರಕ್ಷಣೆ, ಅವರ ಸಮಸ್ಯೆಗಳಿಗೆ ಸೂಕ್ತ ಸ್ಪಂದನೆ ಹಾಗೂ ನಿರ್ಧಾರ ಪ್ರಕ್ರಿಯೆಗಳಲ್ಲಿ ಮಕ್ಕಳ ಭಾಗವಹಿಸುವಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಈ ಕಾರ್ಯಾಗಾರ ಮಹತ್ವ ಪಡೆದುಕೊಂಡಿತು.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.

🟢 WhatsApp Group

Join WhatsApp Group

🔵 Facebook Page

Follow Facebook Page

⚫ Twitter / X

Follow on X (Twitter)

🟣 Threads

Follow on Threads

🟠 Instagram

Follow on Instagram

🔵 Telegram

Join Telegram Channel

🟢 WhatsApp Channel

Follow WhatsApp Channel

📰 ಸಮಗ್ರ ಸುದ್ದಿ

ನಿಖರತೆಗೆ ಮತ್ತೊಂದು ಹೆಸರು

📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು

Leave a Reply

Your email address will not be published. Required fields are marked *