ಕಾಂಗ್ರೆಸ್ ಸರ್ಕಾರ ಆರ್ಥಿಕವಾಗಿ ದಿವಾಳಿ; ಮುಂದಿನ ಚುನಾವಣೆಯಲ್ಲಿ ಜನರೇ ಉತ್ತರ ನೀಡಲಿದ್ದಾರೆ – ರೇಣುಕಾಚಾರ್ಯ.

ಚಿತ್ರದುರ್ಗ ನ. 12

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೂರೂವರೆ ವರ್ಷಗಳಲ್ಲಿ ಜನಸಾಮಾನ್ಯರ ಬದುಕು ದುರ್ಭರವಾಗಿದ್ದು, ಸ್ವಾತಂತ್ರ್ಯದ ನಂತರ ಇಂತಹ ಕೆಟ್ಟ ಸರ್ಕಾರವನ್ನು ಜನರು ನೋಡಿಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದು, ರಾಜ್ಯ ಸರ್ಕಾರದ ನೀತಿಗಳಿಂದ ಮಹಿಳೆಯರು, ರೈತರು ಹಾಗೂ ಬಡವರು ತೀವ್ರ ಸಂಕಷ್ಟದಲ್ಲಿದ್ದಾರೆ ಎಂದು ಮಾಜಿ ಸಚಿವರಾದ ರೆಣುಕಾಚಾರ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ವಾಗ್ದಾಳಿಯನ್ನು ನಡೆಸಿದ್ದಾರೆ.

ಚಿತ್ರದುರ್ಗ ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಸರ್ಕಾರದ ಅವಧಿಯಲ್ಲಿ ಗುತ್ತಿಗೆದಾರರಿಗೆ ಶೇಕಡಾ 40ರಷ್ಟು ಕಮಿಷನ್ ಆರೋಪ ಮಾಡಿದ್ದ ಕಾಂಗ್ರೆಸ್ ಮುಖಂಡರು, ಪ್ರಸ್ತುತ ಸರ್ಕಾರದ ಅವಧಿಯಲ್ಲಿ ಶೇಕಡಾ 60ಕ್ಕಿಂತ ಹೆಚ್ಚಾಗಿದೆ ನೀರಾವರಿ ಸೇರಿದಂತೆ ವಿವಿಧ ಕೆಲಸಗಳನ್ನು ಮಾಡಿರುವ ಗುತ್ತಿಗೆದಾರರಿಗೆ ಕಳೆದ ಮೂರೂವರೆ ವರ್ಷಗಳಿಂದ ಹಣ ಬಿಡುಗಡೆಯಾಗಿಲ್ಲ ರಾಜ್ಯ ಸರ್ಕಾರವು ಪೆಟ್ರೋಲ್, ಡೀಸೆಲ್ ಸೇರಿದಂತೆ ವಿವಿಧ ತೆರಿಗೆಗಳನ್ನು ಗಣನೀಯವಾಗಿ ಏರಿಕೆ ಮಾಡಿದೆ. ಬಸ್‍ದರ, ಗ್ರಾಮೀಣ ಪ್ರದೇಶದ ಬಿಬಿಎಂಪಿ ವ್ಯಾಪ್ತಿ ಹಾಗೂ ಕೆಎಸ್‍ಆರ್‍ಟಿಸಿ ದರಗಳನ್ನು ಮೂರು ಪಟ್ಟು ಹೆಚ್ಚಿಸಲಾಗಿದೆ ಇದರಿಂದಾಗಿ ಅಕ್ಕಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರಿದ್ದು, ಜನಸಾಮಾನ್ಯರು ರೇಷನ್ ಅಂಗಡಿಯಲ್ಲೂ ಸಾಮಗ್ರಿಗಳನ್ನು ಖರೀದಿಸಲು ಪರದಾಡುವಂತಹ ದುಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು.

ರಾಜ್ಯ ಸರ್ಕಾರದ ಆರ್ಥಿಕ ದಿವಾಳಿತನ ಮತ್ತು ಜನ ವಿರೋಧಿ ಧೋರಣೆಯನ್ನು ಖಂಡಿಸಿದ್ದು, ಜನತೆಗೆ ತಕ್ಕ ಪಾಠ ಕಲಿಸುವ ಸಮಯ ಬಂದಿದೆ ಈ ಕುರಿತು ಮುಖ್ಯಮಂತ್ರಿಗಳಿಗೆ ಮತ್ತು ಸಚಿವರಿಗೆ ಎಚ್ಚರಿಕೆಯನ್ನು ನೀಡಿದ ಮಾಜಿ ಸಚಿವರು, ಇನ್ನು ಕೇವಲ ಒಂದು ವರ್ಷ ಮಾತ್ರ ಚುನಾವಣೆ ಬಾಕಿ ಇದ್ದು, ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಪ್ರಭಾವಿ ಸಚಿವರು ಹಾಗೂ ಶಾಸಕರಿಗೆ ಮುಂಬರುವ ಚುನಾವಣೆಯಲ್ಲಿ ಶೇಕಡಾ 50ರಷ್ಟು ಸೋಲಿನ ಭೀತಿ ಕಾಡುತ್ತಿದೆ ಎಂದು ಭವಿಷ್ಯ ನುಡಿದು ರಾಜ್ಯ ಸರ್ಕಾರದ ಆರ್ಥಿಕ ದುಸ್ಥಿತಿ ಮತ್ತು ತೀವ್ರ ತೆರಿಗೆ ಏರಿಕೆಯಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಗುತ್ತಿಗೆದಾರರ ಬಾಕಿ ಬಿಲ್ ಗಳನ್ನು ಕೂಡಲೇ ಬಿಡುಗಡೆ ಮಾಡದಿದ್ದರೆ ಮತ್ತು ಆಡಳಿತ ವೈಫಲ್ಯವನ್ನು ಸರಿಪಡಿಸಿಕೊಳ್ಳದಿದ್ದರೆ, ಮುಂಬ ರುವ ದಿನಗಳಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಸರ್ಕಾರಕ್ಕೆ ಎಚ್ಚರಿಕೆ ನೀಡಲಾಯಿತು.

ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿ ಸಂಪೂರ್ಣವಾಗಿ ದಿವಾಳಿಯಾಗಿದೆ ಸರ್ಕಾರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲದ ಶಾಸಕರು ಕಣ್ಣೀರು ಹಾಕುವಂತ ಪರಿಸ್ಥಿತಿ ನಿರ್ಮಾಣವಾಗಿದೆ ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಯೋಜನೆಗಳ ಹೆಸರಿನಲ್ಲಿ ಮೋಸ ಮಾಡಲಾಗುತ್ತಿದೆ. ಪುರುಷರ ಮೂಲಕ ವಸೂಲಿ ಮಾಡುತ್ತಾ, ಸರ್ಕಾರ ಬದುಕಿದೆಯೇ ಅಥವಾ ಸತ್ತಿದೆಯೇ ಎಂದು ಜನ ಪ್ರಶ್ನಿಸುತ್ತಿದ್ದಾರೆ. ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆ ಸಿಗುತ್ತಿಲ್ಲ. ರಾಜ್ಯದಲ್ಲಿ ಭೀಕರ ಬರಗಾಲವಿದ್ದರೂ ರೈತರ ಪರವಾಗಿ ಸರ್ಕಾರ ಸ್ಪಂದಿಸಿಲ್ಲ. ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ನೇರವಾಗಿ ರೈತರ ಖಾತೆಗೆ 6,000 ರೂಪಾಯಿಗಳನ್ನು ಜಮಾ ಮಾಡುತ್ತಿದ್ದರೆ, ರಾಜ್ಯ ಸರ್ಕಾರದವರು ಈ ಹಿಂದೆ ನೀಡುತ್ತಿದ್ದ ಹೆಚ್ಚುವರಿ ಹಣವನ್ನು ನಿಲ್ಲಿಸಿದ್ದಾರೆ ಎಂದು ಆರೋಪಿಸಲಾಯಿತು.

ವೃದ್ಧರು, ಅಂಗವಿಕಲರು ಹಾಗೂ ವಿಧವೆಯರಿಗೆ ಮಾಶಾಸನಗಳು ಸರಿಯಾಗಿ ಸಿಗುತ್ತಿಲ್ಲ. ಎಂಟು-ಹತ್ತು ತಿಂಗಳುಗಳಾದರೂ ಪಿಂಚಣಿ ಹಣ ಬಿಡುಗಡೆಯಾಗುತ್ತಿಲ್ಲವಾದರೂ, ಸರ್ಕಾರ ಮಾತ್ರ ಮಹಿಳೆಯರಿಗೆ ಉಚಿತ ಎಂದು ಹೇಳಿ ಪುರುಷರಿಂದ ಹಾಗೂ ಇತರೆಡೆ ವಸೂಲಿ ಮಾಡುತ್ತಿದೆ ಎಂದು ಅವರು ಕೇಂದ್ರ ಸರ್ಕಾರದ ತೆರಿಗೆಯನ್ನು ಮೂರು ಪಟ್ಟು ಕರ್ನಾಟಕದಲ್ಲಿ ಹಾಕಬೇಕಿದೆ ಹಾಗೂ ಬಸ್ ದರ ಹೆಚ್ಚಳದಿಂದಾಗಿ ಬಡವರು ಮತ್ತು ಗ್ರಾಮೀಣ ಪ್ರದೇಶದ ಜನರಿಗೆ ತೊಂದರೆಯಾಗಿದೆ ನಗರ ಪ್ರದೇಶಗಳಲ್ಲಿ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತವಿದ್ದರೂ, ಗ್ರಾಮೀಣ ಭಾಗದಲ್ಲಿ ಬಸ್‍ಗಳೇ ಇಲ್ಲದಿರುವ ಪರಿಸ್ಥಿತಿಯಿದೆ ಮುಂದಿನ ಚುನಾವಣೆಯಲ್ಲಿ ಪ್ರಭಾವಿ ಸಚಿವರು ಹಾಗೂ ಶಾಸಕರು ಹೀನಾಯವಾಗಿ ಸೋಲಲಿದ್ದಾರೆ ಎಂದು ಭವಿಷ್ಯ ನುಡಿದರು. ಕಾಂಗ್ರೆಸ್ ಮುಖಂಡರು ಹಾಗೂ ಸಚಿವರಿಗೆ ನೈತಿಕ ಹಕ್ಕಿಲ್ಲದಿರುವುದರಿಂದ, ಮುಂದಿನ ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಯಾದವ್, ರಾಜ್ಯ ರೈತ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜನ್, ನಗರಸಭೆಯ ಮಾಜಿ ಸದಸ್ಯ ಸುರೇಶ್ ಜಿಲ್ಲಾ ವಕ್ತಾರ ನಾಗರಾಜ್ ಬೇದ್ರೇ ಉಪಸ್ಥಿತರಿದ್ದರು.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.

🟢 WhatsApp Group

Join WhatsApp Group

🔵 Facebook Page

Follow Facebook Page

⚫ Twitter / X

Follow on X (Twitter)

🟣 Threads

Follow on Threads

🟠 Instagram

Follow on Instagram

🔵 Telegram

Join Telegram Channel

🟢 WhatsApp Channel

Follow WhatsApp Channel

📰 ಸಮಗ್ರ ಸುದ್ದಿ

ನಿಖರತೆಗೆ ಮತ್ತೊಂದು ಹೆಸರು

📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು

Leave a Reply

Your email address will not be published. Required fields are marked *