ಚಿತ್ರದುರ್ಗ: ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ಸಾಧನ ಸಲಕರಣೆಗಳ ವಿತರಣೆ- APD ವತಿಯಿಂದ ಯಶಸ್ವಿ ಕಾರ್ಯಕ್ರಮ.

ಚಿತ್ರದುರ್ಗ, ನ.14:

ವಿಶೇಷ ಅಗತ್ಯವುಳ್ಳ ಮಕ್ಕಳ ದೈನಂದಿನ ಜೀವನವನ್ನು ಸುಗಮಗೊಳಿಸುವ ಹಾಗೂ ಅವರ ಬೆಳವಣಿಗೆಗೆ ಅಗತ್ಯವಾದ ನೆರವು ಒದಗಿಸುವ ಉದ್ದೇಶದಿಂದ ಚಿತ್ರದುರ್ಗದ Association of People with Disability (APD) ವತಿಯಿಂದ ಶೀಘ್ರ ಪತ್ತೆಹಚ್ಚುವಿಕೆ ಕಾರ್ಯಕ್ರಮ ಹಾಗೂ Oracle ಸಂಸ್ಥೆಯ ಸಹಯೋಗದಲ್ಲಿ ಸಾಧನ ಸಲಕರಣೆಗಳ ವಿತರಣಾ ಕಾರ್ಯಕ್ರಮವನ್ನು ನವೆಂಬರ್ 13ರಂದು ಯಶಸ್ವಿಯಾಗಿ ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಚಿತ್ರದುರ್ಗದ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಶ್ರೀಮತಿ ವೈಶಾಲಿ, BIERTನ ಶ್ರೀ ರಾಜಣ್ಣ, ಭರಮಸಾಗರದ CDPO ಶ್ರೀಮತಿ ಐಮಾವತಿ ಎ. ಹಾಗೂ ಚಿತ್ರದುರ್ಗದ CDPO ಶ್ರೀಮತಿ ಅನುರಾಧ ಎ. ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಮತಿ ವೈಶಾಲಿ ಅವರು, ವಿಶೇಷ ಅಗತ್ಯವುಳ್ಳ ಮಕ್ಕಳು ಸಾಧನ ಸಲಕರಣೆಗಳನ್ನು ಸರಿಯಾದ ರೀತಿಯಲ್ಲಿ ಬಳಸುವುದರಿಂದ ಅವರ ದೈನಂದಿನ ಚಟುವಟಿಕೆಗಳಿಗೆ ಅನುಕೂಲವಾಗುತ್ತದೆ. ಅಲ್ಲದೆ, ಸರ್ಕಾರದ ವಿವಿಧ ಇಲಾಖೆಗಳ ಮೂಲಕ ದೊರೆಯುವ ಸೌಲಭ್ಯಗಳು ಹಾಗೂ ಯೋಜನೆಗಳ ಕುರಿತು ಮಾಹಿತಿ ನೀಡಿದರು.

ಶ್ರೀಮತಿ ಐಮಾವತಿ ಎ. ಅವರು ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು, ಸೇವೆಗಳು ಹಾಗೂ ಮಕ್ಕಳ ಸಮಗ್ರ ಬೆಳವಣಿಗೆಗೆ ಇಲಾಖೆಯಿಂದ ಕೈಗೊಳ್ಳಲಾಗುತ್ತಿರುವ ಕ್ರಮಗಳ ಕುರಿತು ವಿವರಿಸಿದರು.

ಕಾರ್ಯಕ್ರಮದಲ್ಲಿ ಕುಮಾರಿ ಸಿದ್ರಾ ಅವರು ಕೆಲವು ಮಕ್ಕಳ ಆರೋಗ್ಯ ತಪಾಸಣೆ ನಡೆಸಿ, ಅವರ ಬೆಳವಣಿಗೆಯ ಸ್ಥಿತಿಗತಿಗಳ ಬಗ್ಗೆ ಮಾಹಿತಿ ನೀಡಿದರು. ಜೊತೆಗೆ ಮಕ್ಕಳಿಗೆ ವಿತರಿಸಲಾದ ಸಾಧನ ಸಲಕರಣೆಗಳನ್ನು ಮನೆಯಲ್ಲಿ ಯಾವ ರೀತಿ ಬಳಸಬೇಕು ಮತ್ತು ಅವುಗಳ ಸರಿಯಾದ ನಿರ್ವಹಣೆ ಹೇಗಿರಬೇಕು ಎಂಬುದನ್ನು ಪೋಷಕರಿಗೆ ಪ್ರಾಯೋಗಿಕವಾಗಿ ತಿಳಿಸಿಕೊಟ್ಟರು.

ಕಾರ್ಯಕ್ರಮದಲ್ಲಿ ಒಟ್ಟು 34 ಫಲಾನುಭವಿ ಮಕ್ಕಳು ಹಾಗೂ ಅವರ ಪೋಷಕರು ಭಾಗವಹಿಸಿದ್ದರು. ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ಅಗತ್ಯವಾದ ಸಾಧನ ಸಲಕರಣೆಗಳ ವಿತರಣೆ ಮತ್ತು ಅವುಗಳ ಬಳಕೆಯ ಕುರಿತು ಮಾರ್ಗದರ್ಶನ ನೀಡುವ ಮೂಲಕ ಕಾರ್ಯಕ್ರಮವು ಮಹತ್ವ ಪಡೆದುಕೊಂಡಿತು.

ಈ ಸಂದರ್ಭದಲ್ಲಿ APD ಸಂಸ್ಥೆಯ ಸಿಬ್ಬಂದಿ, ತಾಂತ್ರಿಕ ಸಿಬ್ಬಂದಿ ಹಾಗೂ ತಂಡದ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡಿದ್ದರು. ಕುಮಾರಿ ಸಿದ್ರಾ, ಶ್ರೀಮತಿ ನಂದಿನಿ, ಶ್ರೀಮತಿ ಸುಮಂಗಲಾ, ಕುಮಾರಿ ಬಿಬಿಹಾಜಿರಾ, ಕುಮಾರಿ ಪುಷ್ಪಾ ಕೆ.ಬಿ., ಶ್ರೀಯುತ ವೇದಮೂರ್ತಿ, ಶ್ರೀಮತಿ ಸುರೇಖಾ ಸೇರಿದಂತೆ ತಂಡದ ಸದಸ್ಯರು ಉಪಸ್ಥಿತರಿದ್ದರು.

ಪೋಷಕರು, ಅಧಿಕಾರಿಗಳು ಹಾಗೂ APD ತಂಡದ ಸಹಕಾರದೊಂದಿಗೆ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.

🟢 WhatsApp Group

Join WhatsApp Group

🔵 Facebook Page

Follow Facebook Page

⚫ Twitter / X

Follow on X (Twitter)

🟣 Threads

Follow on Threads

🟠 Instagram

Follow on Instagram

🔵 Telegram

Join Telegram Channel

🟢 WhatsApp Channel

Follow WhatsApp Channel

📰 ಸಮಗ್ರ ಸುದ್ದಿ

ನಿಖರತೆಗೆ ಮತ್ತೊಂದು ಹೆಸರು

📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು

Leave a Reply

Your email address will not be published. Required fields are marked *