ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ವಿದ್ಯಾರ್ಥಿಗಳಿಗೆ ಕಾನೂನು ಅರಿವು.

ಮಕ್ಕಳ ಸುರಕ್ಷತೆ ಮತ್ತು ಹಕ್ಕುಗಳ ಕುರಿತು ಇಂಡಿಯನ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಜಾಗೃತಿ ಅಭಿಯಾನ

ಚಿತ್ರದುರ್ಗ: ನಗರದ ಪ್ರತಿಷ್ಠಿತ ಇಂಡಿಯನ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಮಕ್ಕಳ ಸುರಕ್ಷತೆ, ಹಕ್ಕುಗಳು ಹಾಗೂ ಕಾನೂನು ಅರಿವು ಮೂಡಿಸುವ ಉದ್ದೇಶದಿಂದ ವಿಶೇಷ ಜಾಗೃತಿ ಅಭಿಯಾನವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಮಕ್ಕಳ ಹಕ್ಕುಗಳು ಹಾಗೂ ಸೈಬರ್ ಅಪರಾಧಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಸರಸ್ವತಿ ಕಾನೂನು ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಶ್ರೀಮತಿ ಹರ್ಷ ಎಸ್.ಎಂ. ಹಾಗೂ ಶ್ರೀಮತಿ ಅಭಿನೇತ್ರಿ ಪಟವರ್ಧನ್ ಅವರು ವಿವಿಧ ವಿಷಯಗಳ ಕುರಿತು ಸುದೀರ್ಘವಾಗಿ ಮಾಹಿತಿ ನೀಡಿದರು.

ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯಗಳಿಂದ ರಕ್ಷಣೆ ಪಡೆಯಲು ಇರುವ ಪೋಕ್ಸೋ ಕಾಯ್ದೆಯ ನಿಯಮಗಳು, ಬಾಲ್ಯ ವಿವಾಹದಿಂದ ಉಂಟಾಗುವ ದುಷ್ಪರಿಣಾಮಗಳು, ಮಕ್ಕಳಿಗೆ ಸಂವಿಧಾನ ಮತ್ತು ಕಾನೂನು ಒದಗಿಸಿರುವ ಹಕ್ಕುಗಳು ಹಾಗೂ ಇಂದಿನ ಡಿಜಿಟಲ್ ಯುಗದಲ್ಲಿ ಹೆಚ್ಚುತ್ತಿರುವ ಸೈಬರ್ ಅಪರಾಧಗಳ ಬಗ್ಗೆ ವಿದ್ಯಾರ್ಥಿಗಳಿಗೆ ವಿವರಿಸಿದರು.

ಅಪರಿಚಿತ ವ್ಯಕ್ತಿಗಳೊಂದಿಗೆ ವೈಯಕ್ತಿಕ ಮಾಹಿತಿಯನ್ನು ಹಂಚಿಕೊಳ್ಳದಿರುವುದು, ಸಾಮಾಜಿಕ ಜಾಲತಾಣಗಳನ್ನು ಸುರಕ್ಷಿತವಾಗಿ ಬಳಸುವುದು, ಆನ್‌ಲೈನ್ ವಂಚನೆಗಳ ಬಗ್ಗೆ ಎಚ್ಚರಿಕೆ ವಹಿಸುವುದು ಹಾಗೂ ಯಾವುದೇ ರೀತಿಯ ದೌರ್ಜನ್ಯ ಅಥವಾ ಕಿರುಕುಳ ಎದುರಾದಾಗ ಧೈರ್ಯವಾಗಿ ಸಂಬಂಧಪಟ್ಟವರ ಗಮನಕ್ಕೆ ತರುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಮಕ್ಕಳು ತಮ್ಮ ಹಕ್ಕುಗಳು ಮತ್ತು ಕಾನೂನು ರಕ್ಷಣೆಯ ಬಗ್ಗೆ ತಿಳಿದುಕೊಳ್ಳುವುದರ ಜೊತೆಗೆ, ಯಾವುದೇ ಅನ್ಯಾಯದ ವಿರುದ್ಧ ಧ್ವನಿ ಎತ್ತುವ ಧೈರ್ಯ ಬೆಳೆಸಿಕೊಳ್ಳಬೇಕು ಎಂಬ ಸಂದೇಶವನ್ನು ಸಂಪನ್ಮೂಲ ವ್ಯಕ್ತಿಗಳು ನೀಡಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತಾಧಿಕಾರಿಗಳಾದ ಶ್ರೀಮತಿ ಚಂದ್ರಕಲಾ ಚಂದ್ರಪ್ಪ, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಘುಚಂದನ್, ಶಾಲೆಯ ಡೀನ್ ಅನಂತರಾಮ್, ಶೈಕ್ಷಣಿಕ ನಿರ್ದೇಶಕರಾದ ಸಂಪತ್ ಕುಮಾರ್ ಸಿ.ಡಿ., ಪ್ರಾಂಶುಪಾಲರಾದ ಪಿ. ಬಸವರಾಜಯ್ಯ, ಮುಖ್ಯ ಶಿಕ್ಷಕರಾದ ಜರೀನಾ, ಸಾರ್ವಜನಿಕ ಸಂಪರ್ಕಾಧಿಕಾರಿ ರವಿಕುಮಾರ್ ಸೇರಿದಂತೆ ಶಾಲೆಯ ಎಲ್ಲಾ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಲ್ಲಿ ಕಾನೂನು ಅರಿವು, ಸಾಮಾಜಿಕ ಜವಾಬ್ದಾರಿ ಹಾಗೂ ವೈಯಕ್ತಿಕ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಈ ಅಭಿಯಾನ ಮಹತ್ವದ ಪಾತ್ರ ವಹಿಸಿತು.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.

🟢 WhatsApp Group

Join WhatsApp Group

🔵 Facebook Page

Follow Facebook Page

⚫ Twitter / X

Follow on X (Twitter)

🟣 Threads

Follow on Threads

🟠 Instagram

Follow on Instagram

🔵 Telegram

Join Telegram Channel

🟢 WhatsApp Channel

Follow WhatsApp Channel

📰 ಸಮಗ್ರ ಸುದ್ದಿ

ನಿಖರತೆಗೆ ಮತ್ತೊಂದು ಹೆಸರು

📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು

Leave a Reply

Your email address will not be published. Required fields are marked *