ಕೇಂದ್ರ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಕ-ಯುವತಿಯರಿಗೆ ಭರ್ಜರಿ ಸಿಹಿಸುದ್ದಿ. ಗಡಿ ಭದ್ರತಾ ಪಡೆ (BSF) ಬೃಹತ್ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, 1167 ಸಹಾಯಕ ಸಬ್ ಇನ್ಸ್‌ಪೆಕ್ಟರ್ (ASI/SI) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಪದವಿ ಮುಗಿಸಿರುವ ಅಭ್ಯರ್ಥಿಗಳಿಗೆ ಇದು ಅತ್ಯುತ್ತಮ ಅವಕಾಶವಾಗಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ.
ನೇಮಕಾತಿಯ ಸಂಪೂರ್ಣ ವಿವರ ಇಲ್ಲಿದೆ:
- ಒಟ್ಟು ಹುದ್ದೆಗಳು: 1167
- ಹುದ್ದೆಯ ಹೆಸರು: ಸಹಾಯಕ ಸಬ್ ಇನ್ಸ್‌ಪೆಕ್ಟರ್ (ASI) / ಸಬ್ ಇನ್ಸ್‌ಪೆಕ್ಟರ್
- ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಪದವಿ (ಡಿಗ್ರಿ) ಪೂರ್ಣಗೊಳಿಸಿರಬೇಕು.
- ವಯೋಮಿತಿ: ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಹಾಗೂ ಗರಿಷ್ಠ 32 ವರ್ಷ ಮೀರಿರಬಾರದು. ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST) ಅಭ್ಯರ್ಥಿಗಳಿಗೆ ಸರ್ಕಾರಿ ನಿಯಮಾನುಸಾರ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
- ಅರ್ಜಿ ಶುಲ್ಕ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಶುಲ್ಕವನ್ನು ನಿಗದಿಪಡಿಸಿಲ್ಲ. ಸಂಪೂರ್ಣ ಉಚಿತವಾಗಿ ಅರ್ಜಿ ಸಲ್ಲಿಸಬಹುದು.
- ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ದಾರ್ಢ್ಯತೆ (ಫಿಟ್ನೆಸ್) ಪರೀಕ್ಷೆ, ಕೌಶಲ್ಯ ಪರೀಕ್ಷೆ, ದಾಖಲಾತಿ ಪರಿಶೀಲನೆ ಹಾಗೂ ಅಂತಿಮವಾಗಿ ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: ನವೆಂಬರ್ 12
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್ 31
ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಹೆಚ್ಚಿನ ಮಾಹಿತಿ, ಅಧಿಸೂಚನೆ ವಿವರ ಹಾಗೂ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು BSF ನ ಅಧಿಕೃತ ವೆಬ್‌ಸೈಟ್ bsf.nic.in ಗೆ ಭೇಟಿ ನೀಡಬಹುದು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.
🟢 WhatsApp Group
Join WhatsApp Group
🔵 Facebook Page
Follow Facebook Page
⚫ Twitter / X
Follow on X (Twitter)
🟣 Threads
Follow on Threads
Follow on Instagram
🔵 Telegram
Join Telegram Channel
🟢 WhatsApp Channel
Follow WhatsApp Channel
📰 ಸಮಗ್ರ ಸುದ್ದಿ
ನಿಖರತೆಗೆ ಮತ್ತೊಂದು ಹೆಸರು
📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು