ಚಿತ್ರದುರ್ಗ: ಬೆಂಗಳೂರಿನಲ್ಲಿ ಇಸ್ರೋ (ISRO) ಆಯೋಜಿಸಿದ್ದ ರಾಜ್ಯಮಟ್ಟದ “ಕಿಶೋರ ಕಮ್ಮಟ ವೈಜ್ಞಾನಿಕ ವಿಷಯ ಪ್ರಸ್ತುತಿ” ಸ್ಪರ್ಧೆಯಲ್ಲಿ ನಗರದ ಪ್ರತಿಷ್ಠಿತ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿ ನಂದಿಕ ಎಸ್.ಎನ್. ತೃತೀಯ ಸ್ಥಾನ ಪಡೆದು ಶಾಲೆಗೆ ಹಾಗೂ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
2026ರ ನವೆಂಬರ್ 14ರಂದು ಬೆಂಗಳೂರಿನಲ್ಲಿ ನಡೆದ ಈ ಸ್ಪರ್ಧೆಯಲ್ಲಿ ರಾಜ್ಯದ 150 ಶಾಲೆಗಳು ಭಾಗವಹಿಸಿದ್ದವು. ಮೊದಲ ಸುತ್ತಿನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ 35 ಶಾಲೆಗಳು ಆಯ್ಕೆಯಾಗಿದ್ದವು. ನಂತರ ನಡೆದ ಎರಡನೇ ಸುತ್ತಿನಲ್ಲಿ 35 ಶಾಲೆಗಳ ಪೈಕಿ 18 ಶಾಲೆಗಳು ಅಂತಿಮ ಸುತ್ತಿಗೆ ಅರ್ಹತೆ ಪಡೆದಿದ್ದವು.
ಅಂತಿಮ ಸುತ್ತಿನಲ್ಲಿ ಆಯ್ಕೆಯಾದ 18 ಶಾಲೆಗಳ ವಿದ್ಯಾರ್ಥಿಗಳು ಇಸ್ರೋದ ಗಣ್ಯ ವಿಜ್ಞಾನಿಗಳ ಮುಂದೆ ತಮ್ಮ ವೈಜ್ಞಾನಿಕ ಯೋಜನೆಗಳನ್ನು ಪ್ರಸ್ತುತಪಡಿಸಿದರು. ಈ ಸ್ಪರ್ಧೆಯಲ್ಲಿ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿ ನಂದಿಕ ಎಸ್.ಎನ್. ತಮ್ಮ ವಿಷಯವನ್ನು ಪರಿಣಾಮಕಾರಿಯಾಗಿ ಮಂಡಿಸಿ ತೃತೀಯ ಸ್ಥಾನ ಗಳಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.
ವಿದ್ಯಾರ್ಥಿನಿಯ ಈ ಸಾಧನೆಯ ಹಿಂದೆ ಅವರ ಪ್ರತಿಭೆ, ಶ್ರದ್ಧೆ, ಆತ್ಮವಿಶ್ವಾಸ ಹಾಗೂ ನಿರಂತರ ಪರಿಶ್ರಮ ಪ್ರಮುಖ ಪಾತ್ರ ವಹಿಸಿದ್ದು, ಮಾರ್ಗದರ್ಶಕ ಶಿಕ್ಷಕಿಯರಾದ ಶ್ರೀಮತಿ ವಿದ್ಯಾ ಮತ್ತು ಶ್ರೀಮತಿ ಚಿನ್ನಾಂಬೆ ಅವರು ಸೂಕ್ತ ಮಾರ್ಗದರ್ಶನ ನೀಡಿದ್ದಾರೆ.
ನಂದಿಕ ಎಸ್.ಎನ್. ಅವರ ಸಾಧನೆ ಸಂಸ್ಥೆಗೆ ಹೆಮ್ಮೆಯ ಹಾಗೂ ಅವಿಸ್ಮರಣೀಯ ಕ್ಷಣವಾಗಿದೆ. ಅವರ ಸಾಧನೆಯನ್ನು ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಬಿ. ವಿಜಯಕುಮಾರ್, ವ್ಯವಸ್ಥಾಪಕ ನಿರ್ದೇಶಕ ಎಸ್.ಎಂ. ಪೃಥ್ವೀಶ, ಆಡಳಿತ ಮಂಡಳಿ ಸದಸ್ಯರು, ಶಾಲೆಯ ಮುಖ್ಯೋಪಾಧ್ಯಾಯ ಎನ್.ಜಿ. ತಿಪ್ಪೇಸ್ವಾಮಿ ಸೇರಿದಂತೆ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.
ಮುಂದಿನ ದಿನಗಳಲ್ಲಿಯೂ ನಂದಿಕ ಅವರು ಇಂತಹ ಇನ್ನಷ್ಟು ಸಾಧನೆಗಳನ್ನು ಮಾಡಿ ಉನ್ನತ ಮೈಲಿಗಲ್ಲುಗಳನ್ನು ತಲುಪಲಿ ಎಂದು ಸಂಸ್ಥೆಯ ಆಡಳಿತ ಮಂಡಳಿ ಶುಭ ಹಾರೈಸಿದೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.
🟢 WhatsApp Group
Join WhatsApp Group
🔵 Facebook Page
Follow Facebook Page
⚫ Twitter / X
Follow on X (Twitter)
🟣 Threads
Follow on Threads
Follow on Instagram
🔵 Telegram
Join Telegram Channel
🟢 WhatsApp Channel
Follow WhatsApp Channel
📰 ಸಮಗ್ರ ಸುದ್ದಿ
ನಿಖರತೆಗೆ ಮತ್ತೊಂದು ಹೆಸರು
📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು