ತಂಬಾಕು ಮುಕ್ತ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಜಾಗೃತಿಯ ರಾಯಭಾರಿಗಳಾಗಲಿ: ಡಾ. ಮಹೇಶ್ ಕೆ.ಎನ್.

ಕಡ್ಲೆಗುದ್ದು: ನ.17:

ವರದಿ_ ರವಿ ಕೆ.ಅಂಬೇಕರ್, 9900667740

ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳು ಅರಿವು ಹೊಂದುವುದರ ಜೊತೆಗೆ ತಮ್ಮ ಕುಟುಂಬದ ಸದಸ್ಯರು ಹಾಗೂ ಸುತ್ತಮುತ್ತಲಿನ ಜನರಲ್ಲಿಯೂ ಜಾಗೃತಿ ಮೂಡಿಸುವ ಮೂಲಕ ತಂಬಾಕು ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಶ್ರೀ ಆಂಜನೇಯ ಸ್ವಾಮಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಡಾ. ಮಹೇಶ್ ಕೆ.ಎನ್. ಕರೆ ನೀಡಿದರು.

ಸಿರಿಗೆರೆ ಸಮೀಪದ ಕಡ್ಲೆಗುದ್ದು ಗ್ರಾಮದ ಶ್ರೀ ಆಂಜನೇಯ ಸ್ವಾಮಿ ಪ್ರೌಢಶಾಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿತ್ರದುರ್ಗ ಹಾಗೂ ಹಿರೇಗುಂಟನೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ರಾಷ್ಟ್ರೀಯ ತಂಬಾಕು ನಿಯಂತ್ರಣ ಅಭಿಯಾನದ ಅಂಗವಾಗಿ ಆಯೋಜಿಸಿದ್ದ ತಂಬಾಕು ನಿಯಂತ್ರಣ ಜಾಗೃತಿ ಮತ್ತು ಯೋಗ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಿಗರೇಟ್, ಬೀಡಿ, ಗುಟ್ಕಾ, ಪಾನ್ ಮಸಾಲ ಸೇರಿದಂತೆ ವಿವಿಧ ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆಗಳು ಹಾಗೂ ಶ್ವಾಸಕೋಶದ ಸಮಸ್ಯೆಗಳು ಸೇರಿದಂತೆ ಹಲವು ಗಂಭೀರ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ತಂಬಾಕು ಸೇವನೆಯು ವ್ಯಕ್ತಿಯ ಆರೋಗ್ಯದ ಜೊತೆಗೆ ಕುಟುಂಬದ ಆರ್ಥಿಕ ಪರಿಸ್ಥಿತಿ, ನೆಮ್ಮದಿ ಮತ್ತು ಸಾಮಾಜಿಕ ಸ್ವಾಸ್ಥ್ಯದ ಮೇಲೆಯೂ ದುಷ್ಪರಿಣಾಮ ಬೀರುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಬಾಲ್ಯದಿಂದಲೇ ಆರೋಗ್ಯಕರ ಜೀವನಶೈಲಿ ಮತ್ತು ಉತ್ತಮ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು ಎಂದು ತಿಳಿಸಿದರು.

ವಿದ್ಯಾರ್ಥಿಗಳು ತಂಬಾಕು ಉತ್ಪನ್ನಗಳ ಆಕರ್ಷಣೆಗೆ ಒಳಗಾಗದೆ ಅವುಗಳಿಂದ ದೂರವಿರಬೇಕು. ತಾವು ತಂಬಾಕು ಸೇವನೆ ಮಾಡದಿರುವುದರ ಜೊತೆಗೆ ಮನೆಯವರು, ಸ್ನೇಹಿತರು ಹಾಗೂ ಸಾರ್ವಜನಿಕರಲ್ಲಿಯೂ ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಬೇಕು. ಇಂದಿನ ವಿದ್ಯಾರ್ಥಿಗಳೇ ನಾಳಿನ ಜವಾಬ್ದಾರಿಯುತ ನಾಗರಿಕರಾಗಿರುವುದರಿಂದ ಆರೋಗ್ಯವಂತ ಸಮಾಜ ನಿರ್ಮಾಣದಲ್ಲಿ ತಮ್ಮ ಪಾತ್ರವನ್ನು ಅರಿತುಕೊಳ್ಳಬೇಕು ಎಂದು ಹೇಳಿದರು.

ಯೋಗ ತರಬೇತಿ ನೀಡಿದ ಯೋಗ ತರಬೇತುದಾರ ರವಿ ಕೆ. ಅಂಬೇಕರ್ ಮಾತನಾಡಿ, ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಆರೋಗ್ಯದ ಬೆಳವಣಿಗೆಯಲ್ಲಿ ಯೋಗ ಹಾಗೂ ಧ್ಯಾನ ಮಹತ್ವದ ಪಾತ್ರ ವಹಿಸುತ್ತವೆ. ಪ್ರತಿದಿನ ಯೋಗಾಸನ, ಪ್ರಾಣಾಯಾಮ ಮತ್ತು ಧ್ಯಾನ ಅಭ್ಯಾಸ ಮಾಡುವುದರಿಂದ ಏಕಾಗ್ರತೆ, ಆತ್ಮವಿಶ್ವಾಸ, ಮನಸ್ಸಿನ ಸ್ಥಿರತೆ ಹಾಗೂ ಸಕಾರಾತ್ಮಕ ಚಿಂತನೆ ವೃದ್ಧಿಯಾಗುತ್ತದೆ. ಯೋಗವು ಉತ್ತಮ ಆರೋಗ್ಯದೊಂದಿಗೆ ಶಿಸ್ತುಬದ್ಧ ಜೀವನ ನಡೆಸಲು ಸಹಕಾರಿಯಾಗಿದೆ ಎಂದರು.

ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು, ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು. ಪಠ್ಯಪುಸ್ತಕದ ಶಿಕ್ಷಣದ ಜೊತೆಗೆ ಆರೋಗ್ಯದ ಮಹತ್ವವನ್ನೂ ಅರಿತುಕೊಳ್ಳಬೇಕು. ಯೋಗ ಮತ್ತು ಧ್ಯಾನವನ್ನು ದಿನನಿತ್ಯದ ಬದುಕಿನ ಭಾಗವಾಗಿಸಿಕೊಂಡು, ತಂಬಾಕು ಹಾಗೂ ಇತರ ದುಶ್ಚಟಗಳ ವಿರುದ್ಧ ಜಾಗೃತಿ ಮೂಡಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣದ ರಾಯಭಾರಿಗಳಾಗಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು, ತಂಬಾಕು ಉತ್ಪನ್ನಗಳನ್ನು ಸೇವಿಸುವುದಿಲ್ಲ ಹಾಗೂ ಇತರರಿಗೂ ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುತ್ತೇವೆ ಎಂದು ಪ್ರತಿಜ್ಞೆ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರಾದ ನಟರಾಜ್, ನಾಗರಾಜ್, ಕರಿಬಸಪ್ಪ, ಮಂಜಪ್ಪ, ಮಹಾಂತೇಶ್ ಸೇರಿದಂತೆ ಗ್ರಾಮದ ಮುಖಂಡರು, ಶಾಲಾ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.

🟢 WhatsApp Group

Join WhatsApp Group

🔵 Facebook Page

Follow Facebook Page

⚫ Twitter / X

Follow on X (Twitter)

🟣 Threads

Follow on Threads

🟠 Instagram

Follow on Instagram

🔵 Telegram

Join Telegram Channel

🟢 WhatsApp Channel

Follow WhatsApp Channel

📰 ಸಮಗ್ರ ಸುದ್ದಿ

ನಿಖರತೆಗೆ ಮತ್ತೊಂದು ಹೆಸರು

📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು

Leave a Reply

Your email address will not be published. Required fields are marked *