ಮೈಸೂರು ವಸ್ತುಪ್ರದರ್ಶನದಲ್ಲಿ ಮಕ್ಕಳ ಹಕ್ಕುಗಳ ಜಾಗೃತಿ ಮಳಿಗೆ ಉದ್ಘಾಟನೆ.
ಮೈಸೂರು, ನ.17: ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಅವರ ಸುರಕ್ಷತೆಗೆ ಪ್ರತಿಯೊಬ್ಬರೂ ಆದ್ಯತೆ ನೀಡಬೇಕು. ಮಕ್ಕಳಿಗೆ ತಮ್ಮ ಹಕ್ಕುಗಳ ಬಗ್ಗೆ ಅರಿವು ಮೂಡಿಸುವುದರ ಜೊತೆಗೆ ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿ ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಸಮಾಜದ ಎಲ್ಲರೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಮೈಸೂರು ಮಹಾನಗರ ಪಾಲಿಕೆಯ ಮಾಜಿ ಮಹಾಪೌರರಾದ ಆಯುಬ್ ಖಾನ್ ಕರೆ ನೀಡಿದರು.
ಮೈಸೂರು ವಸ್ತುಪ್ರದರ್ಶನ ಆವರಣದಲ್ಲಿ ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆ (RLHP), ಮೈಸೂರು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಂಯುಕ್ತ ಆಶ್ರಯದಲ್ಲಿ ಸ್ಥಾಪಿಸಿರುವ ‘ಮಕ್ಕಳ ಹಕ್ಕುಗಳ ಜಾಗೃತಿ ಮಳಿಗೆ’ಯನ್ನು 2026ರ ನವೆಂಬರ್ 16ರಂದು ಉದ್ಘಾಟಿಸಿ ಅವರು ಮಾತನಾಡಿದರು.
ಮೈಸೂರು ಜಿಲ್ಲೆಯಲ್ಲಿ ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿ, ಬಾಲ ಗರ್ಭಿಣಿ ಪ್ರಕರಣಗಳು ಹಾಗೂ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದಂತಹ ಸಮಸ್ಯೆಗಳು ಕಂಡುಬರುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು ಅತ್ಯಗತ್ಯ. ವಸ್ತುಪ್ರದರ್ಶನಕ್ಕೆ ಪೋಷಕರೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಆಗಮಿಸುವುದರಿಂದ, ಅವರಿಗೆ ಮಕ್ಕಳ ಹಕ್ಕುಗಳ ಕುರಿತು ಅರಿವು ಮೂಡಿಸಲು ಹಾಗೂ ತುರ್ತು ಸಂದರ್ಭಗಳಲ್ಲಿ ಯಾರನ್ನು ಸಂಪರ್ಕಿಸಬೇಕು ಎಂಬ ಮಾಹಿತಿ ನೀಡಲು ಈ ಜಾಗೃತಿ ಮಳಿಗೆ ಸಹಕಾರಿಯಾಗಲಿದೆ ಎಂದರು.
ಸರ್ಕಾರಿ ಇಲಾಖೆಗಳು ಮತ್ತು ಸ್ವಯಂಸೇವಾ ಸಂಸ್ಥೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿದರೆ ಮಕ್ಕಳ ಹಕ್ಕುಗಳನ್ನು ಪರಿಣಾಮಕಾರಿಯಾಗಿ ರಕ್ಷಿಸಬಹುದು. ಮಕ್ಕಳ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತದೆ. ಮಳಿಗೆಯ ನಿರ್ವಹಣೆಗೆ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದಿಂದ ಅಗತ್ಯ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದ ಅವರು, ಸಮುದಾಯದ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ RLHP ಸಂಸ್ಥೆಯ ಕಾರ್ಯವನ್ನು ಶ್ಲಾಘಿಸಿದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮೈಸೂರು ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಅಕ್ಬರ್ ಖಾನ್ ಮಾತನಾಡಿ, ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆಯು ಕಳೆದ 40 ವರ್ಷಗಳಿಂದ ಮೈಸೂರು ನಗರದ ಕೊಳಚೆ ಪ್ರದೇಶಗಳು ಹಾಗೂ ಗ್ರಾಮೀಣ ಭಾಗಗಳಲ್ಲಿ ಮಕ್ಕಳು, ಮಹಿಳೆಯರು, ಯುವಜನರು ಮತ್ತು ಸಮುದಾಯದ ಸಬಲೀಕರಣಕ್ಕಾಗಿ ಶ್ಲಾಘನೀಯ ಸೇವೆ ಸಲ್ಲಿಸುತ್ತಿದೆ. ವಸ್ತುಪ್ರದರ್ಶನ ಆವರಣದಲ್ಲಿ ಮಕ್ಕಳ ಹಕ್ಕುಗಳ ಜಾಗೃತಿ ಮಳಿಗೆ ಸ್ಥಾಪಿಸಿರುವುದು ಸಂತಸದ ವಿಷಯವಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಮಳಿಗೆಗೆ ಭೇಟಿ ನೀಡಿ ತಮ್ಮ ಹಕ್ಕುಗಳ ಬಗ್ಗೆ ಅರಿವು ಪಡೆದು ಸುರಕ್ಷಿತವಾಗಿರಬೇಕು ಎಂದು ಆಶಿಸಿದರು.
ಕಾರ್ಯಕ್ರಮದ ಆರಂಭದಲ್ಲಿ RLHP ಸಂಸ್ಥೆಯ ನಿರ್ದೇಶಕಿ ಸರಸ್ವತಿ ಪ್ರಾಸ್ತಾವಿಕವಾಗಿ ಮಾತನಾಡಿ, ಮಕ್ಕಳ ಹಕ್ಕುಗಳ ಜಾಗೃತಿ ಮಳಿಗೆ ಸ್ಥಾಪನೆಯ ಉದ್ದೇಶ ಮತ್ತು ಅದರ ಅಗತ್ಯತೆಯನ್ನು ವಿವರಿಸಿದರು. ಇದೇ ಸಂದರ್ಭದಲ್ಲಿ 100ಕ್ಕೂ ಹೆಚ್ಚು ಮಕ್ಕಳಿಗೆ ಮಕ್ಕಳ ಹಕ್ಕುಗಳು, ಬಾಲ್ಯವಿವಾಹ ತಡೆ, ಬಾಲ ಗರ್ಭಿಣಿ ಸಮಸ್ಯೆಗಳು ಹಾಗೂ ಸುರಕ್ಷಿತ ಸ್ಪರ್ಶ ಮತ್ತು ಅಸುರಕ್ಷಿತ ಸ್ಪರ್ಶದ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಆಶಾ, ‘ಹಲೋ ಮೈಸೂರು’ ಪತ್ರಿಕೆಯ ಸಂಸ್ಥಾಪಕ ಹಾಗೂ ಸಂಪಾದಕ ಟಿ. ಗುರುರಾಜು, RLHP ಸಂಸ್ಥೆಯ ಕಾರ್ಯದರ್ಶಿ ಪ್ರೊ. ಜೋಶ್ ವಿ.ಕೆ., ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧಿಕಾರಿ ನಾಗರಾಜು ಸೇರಿದಂತೆ RLHP ಸಂಸ್ಥೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಮಕ್ಕಳ ಸಹಾಯವಾಣಿ 1098ರ ಸಿಬ್ಬಂದಿ ಉಪಸ್ಥಿತರಿದ್ದರು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.
🟢 WhatsApp Group
Join WhatsApp Group
🔵 Facebook Page
Follow Facebook Page
⚫ Twitter / X
Follow on X (Twitter)
🟣 Threads
Follow on Threads
Follow on Instagram
🔵 Telegram
Join Telegram Channel
🟢 WhatsApp Channel
Follow WhatsApp Channel
📰 ಸಮಗ್ರ ಸುದ್ದಿ
ನಿಖರತೆಗೆ ಮತ್ತೊಂದು ಹೆಸರು
📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು