ಚಿತ್ರದುರ್ಗ ನ. 18
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಕಾರ್ಮಿಕರ ಹಕ್ಕುಗಳ ರಕ್ಷಣೆಗಾಗಿ ಮತ್ತು ಅವರ ಬದುಕಿಗೆ ಭದ್ರತೆಯನ್ನು ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಧೋರಣೆಗಳನ್ನುಖಂಡಿಸಿ ನ. 22 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಈ ಸಮ್ಮೇಳನದ ಮೂಲಕ ಕಾರ್ಮಿಕರ ವಿರೋಧಿ ನೀತಿಗಳ ವಿರುದ್ಧ ಧ್ವನಿ ಎತ್ತಲಾಗುವುದು ಹಾಗೂ ಗಂಭೀರ ನಿರ್ಣಯ ಗಳನ್ನು ಕೈಗೊಳ್ಳಲಾಗುವುದು ಎಂದು ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್‍ನ ಪ್ರಧಾನ ಕಾರ್ಯ ದರ್ಶಿ ಜಿ.ಸಿ.ಸುರೇಶ್ ಬಾಬು ತಿಳಿಸಿದ್ದಾರೆ.
ಚಿತ್ರದುಗ್ ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಸ್ವಾತಂತ್ರ್ಯ ಪೂರ್ವದಲ್ಲಿ ರೂಪುಗೊಂಡ ಮೊಟ್ಟಮೊದಲ ಕಾರ್ಮಿಕ ಸಂಘಟನೆಯಾದ ಎಐಟಿಯುಸಿ ವತಿಯಿಂದ, ನವೆಂಬರ್ 22 ರಿಂದ 26 ರವರೆಗೆ ಬೆಂಗಳೂರಿನಲ್ಲಿ 43ನೇ ರಾಷ್ಟ್ರೀಯ ಸಮ್ಮೇಳನವನ್ನು ಬೆಂಗಳೂರಿನ ಫ್ರೀಡಂ ಪಾರ್ಕ ಪಕ್ಕದ ಪಾರ್ಕಿಂಗ್ ಪ್ರಾಗಂಣದಲ್ಲಿ ಹಮ್ಮಿಕೊಳ್ಳಲಾಗಿದೆ ದೇಶಾದ್ಯಂತ ಇರುವ ಕಾರ್ಮಿಕರ ಕಾನೂನುಗಳನ್ನು ಕೇಂದ್ರ ಸರ್ಕಾರ ಕಡಿತಗೊಳಿಸಿದೆ ಅಸ್ತಿತ್ವದಲ್ಲಿದ್ದ 44 ಕಾರ್ಮಿಕ ಕಾನೂನು ಕಾಯ್ದೆಗಳನ್ನು ಕೇವಲ ನಾಲ್ಕಕ್ಕೆ ಇಳಿಸಿ ಅವೆಲ್ಲವನ್ನೂ ನಿರ್ಲಕ್ಷಿಸಲಾಗಿದೆ ಎಂದು ಕಳವಳ ವ್ಯಕ್ತಪಡಿಸಿ ಇಂದಿನ ದಿನಗಳಲ್ಲಿ ಕಾರ್ಮಿಕರಿಗೆ ಯಾವುದೇ ರೀತಿಯ ಸೇವಾ ಭದ್ರತೆಯಾಗಲಿ ಅಥವಾ ಜೀವನದ ಭದ್ರತೆಯಾಗಲಿ ಇಲ್ಲದಂತಾಗಿದೆ ಎಂದು ತಿಳಿಸಿದರು.
ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ತಯಾರಕರು, ಕಟ್ಟಡ ಕಾರ್ಮಿಕರು, ಕೆಎಸ್‍ಆರ್‍ಟಿಸಿ ಸ್ಥಾಪಕ ಮತ್ತು ಕಾರ್ಮಿಕರು, ಮನೆಕೆಲಸದವರು, ಹೋಟೆಲ್ ಕಾರ್ಮಿಕರು ಹಾಗೂ ಆಟೋ ಚಾಲಕರು ಸೇರಿದಂತೆ ಹತ್ತಾರು ಸಂಘಟನೆಗಳು ಒಗ್ಗೂಡಿ ಬೆಂಗಳೂರಿನಲ್ಲಿ ಈ ರಾಷ್ಟ್ರೀಯ ಸಮ್ಮೇಳನವನ್ನು ನಡೆಸುತ್ತಿವೆ. ನವೆಂಬರ್ 22 ರಂದು ಮೆರವಣಿಗೆ ಹಾಗೂ ಸಭಾಂಗಣ ಕಾರ್ಯಕ್ರಮಗಳು ಜರುಗಲಿದ್ದು, ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಸುಮಾರು ಒಂದು ಲಕ್ಷಕ್ಕೂ ಅಧಿಕ ಕಾರ್ಮಿಕರು ಈ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಎಐಟಿಸಿಯ ರಾಜ್ಯ ಉಪಾಧ್ಯಕ್ಷರರಾದ ಉಮಾಪತಿ ಟಿ.ಆರ್. ಮಾತನಾಡಿ, ಬೆಂಗಳೂರಿನಲ್ಲಿ ನಡೆಯಲಿರುವ ಎಐಟಿಸಿ ರಾಷ್ಟ್ರೀಯ ಮಹಾಸಮ್ಮೇಳನದಲ್ಲಿ ಸುಮಾರು 15 ದೇಶಗಳ 50ಕ್ಕೂ ಹೆಚ್ಚು ಅಂತರರಾಷ್ಟ್ರೀಯ ಪ್ರತಿನಿಧಿಗಳು ಸೇರಿದಂತೆ ಅಧಿಕ ಮಂದಿ ಕಾರ್ಮಿಕರು, ಅಂಗನವಾಡಿ ಕಾರ್ಯಕರ್ತರು, ಬಿಸಿಯೂಟ ತಯಾರಕರು ಮತ್ತು ವಿವಿಧ ವಲಯಗಳ ನೌಕರರು ಪಾಲ್ಗೊಳ್ಳಲಿದ್ದಾರೆ ಹಿಂದೆ 1983ನೇ ಇಸವಿಯಲ್ಲಿ ರಾಮಕೃಷ್ಣ ಹೆಗಡೆಯವರು ಮುಖ್ಯಮಂತ್ರಿಯಾಗಿದ್ದ ವೇಳೆ ಬೆಂಗಳೂರಿನಲ್ಲಿ ಎಐಟಿಸಿ ರಾಷ್ಟ್ರೀಯ ಸಮ್ಮೇಳನ ನಡೆದಿತ್ತು. ಈಗ ಸುಮಾರು 43 ವರ್ಷಗಳ ಬಳಿಕ ಮತ್ತೆ ಬೆಂಗಳೂರಿನಲ್ಲಿ ಈ ಮಹಾಸಮ್ಮೇಳನ ಆಯೋಜನೆಗೊಂಡಿದೆ. ಪ್ರತಿ ಮೂರು ವರ್ಷಕ್ಕೊಮ್ಮೆ ಈ ರಾಷ್ಟ್ರೀಯ ಮಹಾಸಮ್ಮೇಳನ ನಡೆಯುತ್ತಿದ್ದು, ಕಳೆದ ಬಾರಿ ಕೇರಳದ ಅಲಪ್ಪುಳದಲ್ಲಿ ನಡೆದಿತ್ತು. ಈ ಬಾರಿ ಬೆಂಗಳೂರಿನಲ್ಲಿ ನಡೆಸಲಾಗುತ್ತಿದೆ ಎಂದರು.
ಎಐಟಿಸಿ ಸಂಘಟನೆಯು 1920ನೇ ಇಸವಿಯಲ್ಲಿ ಸ್ವಾತಂತ್ರ್ಯ ಪೂರ್ವದಲ್ಲಿ ದುಡಿಯುವ ವರ್ಗದ ಹಕ್ಕುಗಳಿಗಾಗಿ ಹುಟ್ಟಿಕೊಂಡ ಮೊದಲ ಸಂಘಟನೆಯಾಗಿದೆ. ಈ ಸಂಘಟನೆಗೆ ಜವಾಹರಲಾಲ್ ನೆಹರೂ, ವಿ.ವಿ. ಗಿರಿ, ಎಸ್.ಎ. ಡಾ, ಎ.ಬಿ. ಬರ್ದನ್ ಹಾಗೂ ಧೀಮತ ನಾಯಕರು ನೇತೃತ್ವ ವಹಿಸಿ ಕಳೆದ 106 ವರ್ಷಗಳಿಂದ ಯಶಸ್ವಿಯಾಗಿ ಮುನ್ನಡೆಸಿಕೊಂಡು ಬಂದಿದ್ದಾರೆ. ಚಿತ್ರದುರ್ಗ ಜಿಲ್ಲೆಯಿಂದ ಸುಮಾರು 2,000 ಜನ ಅಂಗನವಾಡಿ ಕಾರ್ಯಕರ್ತರು, ಬಿಸಿಯೂಟ ತಯಾರಕರು, ಕಟ್ಟಡ ಕಾರ್ಮಿಕರು, ಎಪಿಎಂಸಿ ಹಾಗೂ ಗಣಿ ಕಾರ್ಮಿಕರು ಮತ್ತು ಕೆಎಸ್‍ಆರ್‍ಟಿಸಿ ನೌಕರರು ಸೇರಿದಂತೆ ವಿವಿಧ ವಲಯಗಳ ನೌಕರರು ಈ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.
ಹಮಾಲರ ಸಂಘದ ಜಿಲ್ಲಾಧ್ಯಕ್ಷರಾದ ಬಿ. ಬಸವರಾಜು ಮಾತನಾಡಿ, ಬೆಂಗಳೂರಿನಲ್ಲಿ ನಡೆಯಲಿರುವ ಈ ರಾಷ್ಟ್ರೀಯ ಸಮ್ಮೇಳನಕ್ಕೆ ಚಿತ್ರದುರ್ಗ ಎಪಿಎಂಸಿಯಿಂದ ಸುಮಾರು ನೂರಕ್ಕೂ ಹೆಚ್ಚು ಕಾರ್ಮಿಕರು ಸೇರಿದಂತೆ ಜಿಲ್ಲೆಯ ಎಲ್ಲಾ ಕಾರ್ಮಿಕ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಲಿದ್ದಾರೆ ಅಂತರರಾಷ್ಟ್ರೀಯ ಮಟ್ಟದ ಪ್ರತಿನಿಧಿಗಳು ಹಾಗೂ ರಾಜ್ಯದ ನಾನಾ ಜಿಲ್ಲೆಗಳ ಲಕ್ಷಾಂತರ ಕಾರ್ಮಿಕರ ಸಮ್ಮುಖದಲ್ಲಿ ಬೆಂಗಳೂರಿನಲ್ಲಿ ಜರುಗಲಿರುವ ಈ ಐತಿಹಾಸಿಕ ಎಐಟಿಸಿ ರಾಷ್ಟ್ರೀಯ ಮಹಾಸಮ್ಮೇಳನವನ್ನು ಯಶಸ್ವಿಗೊಳಿಸಲು ಹಾಗೂ ದುಡಿಯುವ ವರ್ಗದ ಹಕ್ಕುಗಳ ಧ್ವನಿಯನ್ನು ಗಟ್ಟಿಗೊಳಿಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ಗೋಷ್ಟಿಯಲ್ಲಿ ಟಿ.ಆರ್. ರಜೀಯಾ ಬೇಗಂ, ಸಾವಿತ್ರಮ್ಮ, ಸತ್ಯಕೀರ್ತಿ, ಬಾಬು ಸೇರಿದಂತೆ ಇತರರು ಭಾಗವಹಿಸಿದ್ದರು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.
🟢 WhatsApp Group
Join WhatsApp Group
🔵 Facebook Page
Follow Facebook Page
⚫ Twitter / X
Follow on X (Twitter)
🟣 Threads
Follow on Threads
Follow on Instagram
🔵 Telegram
Join Telegram Channel
🟢 WhatsApp Channel
Follow WhatsApp Channel
📰 ಸಮಗ್ರ ಸುದ್ದಿ
ನಿಖರತೆಗೆ ಮತ್ತೊಂದು ಹೆಸರು
📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು