ಚಿತ್ರದುರ್ಗ:
ನಗರದ ಸಿಎನ್‌ಸಿ ಪಿಯು ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ಸಾಂಪ್ರದಾಯಿಕ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳು ಕನ್ನಡ ನಾಡು-ನುಡಿಯ ಅಭಿಮಾನವನ್ನು ಸಾರುವ ಕಾರ್ಯಕ್ರಮಗಳ ಜೊತೆಗೆ ಸಾಂಪ್ರದಾಯಿಕ ಉಡುಗೆ-ತೊಡುಗೆಗಳಲ್ಲಿ ಮಿಂಚಿ ಸಂಭ್ರಮಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಡೀನ್ ಡಾ. ಗೋಪಾಲ್ ಮಾತನಾಡಿ, ಕನ್ನಡ ನಾಡು, ನುಡಿ, ಭಾಷೆ ಮತ್ತು ಸಂಸ್ಕೃತಿಯ ಮಹತ್ವವನ್ನು ವಿವರಿಸಿದರು. ಕನ್ನಡ ಭಾಷೆಯ ಶ್ರೀಮಂತ ಪರಂಪರೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ವಿದ್ಯಾರ್ಥಿಗಳು ಕನ್ನಡ ಭಾಷೆಯ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

ಕಾಲೇಜಿನ ಪ್ರಾಚಾರ್ಯ ನಾಗರಾಜ್ ಮಾತನಾಡಿ, ಕನ್ನಡ ಭಾಷೆಯ ಮಹತ್ವದ ಜೊತೆಗೆ ಕನ್ನಡ ರಾಜ್ಯೋತ್ಸವದ ಸಂಕೇತಗಳಾದ ಕೆಂಪು ಮತ್ತು ಹಳದಿ ಬಣ್ಣಗಳ ಮಹತ್ವವನ್ನು ವಿವರಿಸಿದರು. ಕನ್ನಡ ನಾಡಿನ ಏಕತೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಪ್ರತಿಬಿಂಬಿಸುವ ರಾಜ್ಯೋತ್ಸವವನ್ನು ಎಲ್ಲರೂ ಹೆಮ್ಮೆಯಿಂದ ಆಚರಿಸಬೇಕು ಎಂದರು.
ಉಪಪ್ರಾಚಾರ್ಯ ಮಂಜುನಾಥ್ ಅವರು ಸಾಂಪ್ರದಾಯಿಕ ಉಡುಗೆ-ತೊಡುಗೆಗಳ ಮಹತ್ವ ಹಾಗೂ ನಮ್ಮ ಸಂಸ್ಕೃತಿಯ ವೈಶಿಷ್ಟ್ಯಗಳ ಕುರಿತು ಮಾತನಾಡಿದರು. ಆಧುನಿಕ ಜೀವನಶೈಲಿಯ ನಡುವೆಯೂ ನಮ್ಮ ಸಂಪ್ರದಾಯ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಉಳಿಸಿಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಸಭಾ ಕಾರ್ಯಕ್ರಮವನ್ನು ವಿದ್ಯಾರ್ಥಿನಿಯರಾದ ಸಂಗೀತ ಮತ್ತು ಸಾನ್ವಿ ನಿರೂಪಿಸಿದರು, ಬಿಂದು ಸ್ವಾಗತಿಸಿದರು.
ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಕಾರ್ಯಕ್ರಮಕ್ಕೆ ಮೆರುಗು ನೀಡಿದರು. ಕೊನೆಯಲ್ಲಿ ಎಲ್ಲ ವಿದ್ಯಾರ್ಥಿಗಳಿಗೆ ಸಿಹಿ ವಿತರಿಸುವ ಮೂಲಕ ಸಂಭ್ರಮದ ಆಚರಣೆಗೆ ತೆರೆ ಎಳೆಯಲಾಯಿತು.
ಸಮಾರಂಭದಲ್ಲಿ ಕಾಲೇಜಿನ ಎಲ್ಲ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.
🟢 WhatsApp Group
Join WhatsApp Group
🔵 Facebook Page
Follow Facebook Page
⚫ Twitter / X
Follow on X (Twitter)
🟣 Threads
Follow on Threads
Follow on Instagram
🔵 Telegram
Join Telegram Channel
🟢 WhatsApp Channel
Follow WhatsApp Channel
📰 ಸಮಗ್ರ ಸುದ್ದಿ
ನಿಖರತೆಗೆ ಮತ್ತೊಂದು ಹೆಸರು
📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು