ಚಿತ್ರದುರ್ಗ, ನ. 25:
ರೋಟರಿ ಕ್ಲಬ್ ಚಿತ್ರದುರ್ಗ, ವಾಸವಿ ಬ್ಲಡ್ ಸೆಂಟರ್ ಹಾಗೂ ಸೋನಿಕ್ ಹಿಯರಿಂಗ್ ಏಡ್ ಸೆಂಟರ್ ಚಿತ್ರದುರ್ಗ ಇವರ ಸಹಯೋಗದಲ್ಲಿ ನವೆಂಬರ್ 25ರಂದು ರಕ್ತದಾನ ಶಿಬಿರ ಮತ್ತು ಉಚಿತ ಶ್ರವಣ ದೋಷ ಪರೀಕ್ಷಾ ಶಿಬಿರವನ್ನು ಆಯೋಜಿಸಲಾಗಿದೆ.
ನಗರದ ಚಳ್ಳಕೆರೆ ರಸ್ತೆಯಲ್ಲಿರುವ ಬಾಷ್ ಶೋರೂಂ ಹಿಂಭಾಗದ ಎಸ್.ಆರ್.ಬಿ.ಎಂ.ಎಸ್. ರೋಟರಿ ಸೇವಾ ಭವನದಲ್ಲಿ (ರೋಟರಿ ಡಯಾಲಿಸಿಸ್ ಕೇಂದ್ರ) ಬೆಳಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಶಿಬಿರ ನಡೆಯಲಿದೆ.
ಈ ಶಿಬಿರದಲ್ಲಿ ಸಾರ್ವಜನಿಕರಿಗೆ ರಕ್ತದಾನ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಶ್ರವಣ ಸಮಸ್ಯೆ ಇರುವವರು ಉಚಿತವಾಗಿ ಶ್ರವಣ ದೋಷ ಪರೀಕ್ಷೆ ಮಾಡಿಸಿಕೊಳ್ಳಬಹುದು. ರಕ್ತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸುವುದರ ಜೊತೆಗೆ ಶ್ರವಣ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲಿಯೇ ಗುರುತಿಸಿ ಸೂಕ್ತ ಪರೀಕ್ಷೆಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಚಿತ್ರದುರ್ಗ ಜಿಲ್ಲೆಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಶಿಬಿರದಲ್ಲಿ ಪಾಲ್ಗೊಂಡು ರಕ್ತದಾನ ಮಾಡುವ ಮೂಲಕ ಜೀವ ಉಳಿಸುವ ಮಹತ್ಕಾರ್ಯದಲ್ಲಿ ಕೈಜೋಡಿಸಬೇಕು. ಅಲ್ಲದೆ, ಉಚಿತ ಶ್ರವಣ ದೋಷ ಪರೀಕ್ಷೆಯ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ರೋಟರಿ ಕ್ಲಬ್ ಮನವಿ ಮಾಡಿದೆ.
ರಕ್ತದಾನ ಶಿಬಿರದಲ್ಲಿ ಭಾಗವಹಿಸಲು ಆಸಕ್ತರು 9972240239, 9448251154, 9886973068 ದೂರವಾಣಿ ಸಂಖ್ಯೆಗಳ ಮೂಲಕ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ರೋಟರಿ ಕ್ಲಬ್ ಚಿತ್ರದುರ್ಗದ ಅಧ್ಯಕ್ಷ ರೊ. ಯೋಗೀಶ್ ಸಹ್ಯಾದ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.
🟢 WhatsApp Group
Join WhatsApp Group
🔵 Facebook Page
Follow Facebook Page
⚫ Twitter / X
Follow on X (Twitter)
🟣 Threads
Follow on Threads
Follow on Instagram
🔵 Telegram
Join Telegram Channel
🟢 WhatsApp Channel
Follow WhatsApp Channel
📰 ಸಮಗ್ರ ಸುದ್ದಿ
ನಿಖರತೆಗೆ ಮತ್ತೊಂದು ಹೆಸರು
📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು