ಚಿತ್ರದುರ್ಗ, ನ. 26:
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ನ ಚಿತ್ರದುರ್ಗ ಪ್ರಾದೇಶಿಕ ಕಚೇರಿ, ಜಿಲ್ಲಾ ಕಚೇರಿ ಹಾಗೂ ಯೋಜನಾ ಕಚೇರಿಯ ವತಿಯಿಂದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಪ್ರಯುಕ್ತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.
ಈ ಹಿನ್ನೆಲೆಯಲ್ಲಿ ನಗರದ ದವಳಗಿರಿ ಬಡಾವಣೆಯಲ್ಲಿರುವ ಶ್ರೀ ಕ್ಷಿಪ್ರ ಪ್ರಸಾದ ಮಹಾಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಚಿತ್ರದುರ್ಗ ಪ್ರಾದೇಶಿಕ ನಿರ್ದೇಶಕಿ ಗೀತಾ ಬಿ., ಜಿಲ್ಲಾ ನಿರ್ದೇಶಕ ಕಮಲಾಕ್ಷ ಡಿ., ಯೋಜನಾ ಕಚೇರಿಯ ಕ್ಷೇತ್ರ ಯೋಜನಾಧಿಕಾರಿ ಚಂದ್ರಹಾಸ ಬಿ.ಡಿ. ಸೇರಿದಂತೆ ಚಿತ್ರದುರ್ಗ ಪ್ರಾದೇಶಿಕ ಹಾಗೂ ಯೋಜನಾ ಕಚೇರಿಯ ಎಲ್ಲಾ ಯೋಜನಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಇಂಗಳದಾಳ್ ಗ್ರಾಮದಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಟ್ಯೂಷನ್ ತರಗತಿ ಆರಂಭ
ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಪ್ರಯುಕ್ತ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಉತ್ತೇಜನ ನೀಡುವ ಉದ್ದೇಶದಿಂದ ಇಂಗಳದಾಳ್ ಗ್ರಾಮದ ತಳವಾರ ಸಂಚಲಪ್ಪ ನಾಯಕರ ಪ್ರೌಢಶಾಲೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗಾಗಿ ಟ್ಯೂಷನ್ ತರಗತಿಗಳನ್ನು ಆರಂಭಿಸಲಾಯಿತು.
ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯಲು ಹಾಗೂ ಪಠ್ಯ ವಿಷಯಗಳಲ್ಲಿ ಹೆಚ್ಚಿನ ಜ್ಞಾನ ಮತ್ತು ಅರಿವು ಬೆಳೆಸಿಕೊಳ್ಳಲು ಹೆಚ್ಚುವರಿ ತರಬೇತಿ ಒದಗಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕರು, ಸಿಬ್ಬಂದಿ ವರ್ಗ, ತಾಲೂಕು ಸಮನ್ವಯಾಧಿಕಾರಿ, ಸೇವಾ ಪ್ರತಿನಿಧಿ, ಒಕ್ಕೂಟದ ಅಧ್ಯಕ್ಷರುಗಳು ಹಾಗೂ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಮೂಲಕ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯವನ್ನು ಉತ್ತಮಗೊಳಿಸುವ ಇಂತಹ ಪ್ರಯತ್ನಗಳು ಶ್ಲಾಘನೀಯವಾಗಿವೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.
🟢 WhatsApp Group
Join WhatsApp Group
🔵 Facebook Page
Follow Facebook Page
⚫ Twitter / X
Follow on X (Twitter)
🟣 Threads
Follow on Threads
Follow on Instagram
🔵 Telegram
Join Telegram Channel
🟢 WhatsApp Channel
Follow WhatsApp Channel
📰 ಸಮಗ್ರ ಸುದ್ದಿ
ನಿಖರತೆಗೆ ಮತ್ತೊಂದು ಹೆಸರು
📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು