ಚಿತ್ರದುರ್ಗ| ಪ್ರಥಮ ಬಾರಿಗೆ ವಿದ್ಯಾ ವಿಕಾಸ ಶಾಲೆಯಲ್ಲಿ ‘ಕೊಡಥಾನ್’ ಸ್ಪರ್ಧೆ: ವಿದ್ಯಾರ್ಥಿಗಳ ತಾಂತ್ರಿಕ ಪ್ರತಿಭೆಗೆ ವೇದಿಕೆ.

ಚಿತ್ರದುರ್ಗ:

ವಿದ್ಯಾರ್ಥಿಗಳಲ್ಲಿ ತಾಂತ್ರಿಕ ಜ್ಞಾನ, ತಾರ್ಕಿಕ ಚಿಂತನೆ, ಸೃಜನಶೀಲತೆ ಹಾಗೂ ಸಮಸ್ಯೆಗಳನ್ನು ಪರಿಹರಿಸುವ ಕೌಶಲ್ಯಗಳನ್ನು ಬೆಳೆಸುವ ಉದ್ದೇಶದಿಂದ ನಗರದ ಪ್ರತಿಷ್ಠಿತ ವಿದ್ಯಾ ವಿಕಾಸ ವಿದ್ಯಾಸಂಸ್ಥೆಯಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ‘ಕೊಡಥಾನ್’ (Codathon) ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.

ನವೆಂಬರ್ 12 ಮತ್ತು 13ರಂದು ನಡೆದ ಈ ಸ್ಪರ್ಧೆಯಲ್ಲಿ ಶಾಲೆಯ 6ರಿಂದ 10ನೇ ತರಗತಿಯ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ್ದರು. ಡಿಜಿಟಲ್ ಯುಗದಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಕೋಡಿಂಗ್ ಮತ್ತು ತಂತ್ರಜ್ಞಾನ ಜ್ಞಾನವನ್ನು ಪ್ರಾಯೋಗಿಕವಾಗಿ ಕಲಿಯಲು ಈ ಸ್ಪರ್ಧೆ ಉತ್ತಮ ವೇದಿಕೆಯಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮಹೇಶ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಗುರುಪ್ರಸಾದ್ ಟಿ. ಮಾತನಾಡಿ, ಇಂದಿನ ಡಿಜಿಟಲ್ ಯುಗದಲ್ಲಿ ವಿದ್ಯಾರ್ಥಿಗಳಿಗೆ ಕೋಡಿಂಗ್ ಮತ್ತು ತಂತ್ರಜ್ಞಾನದ ಜ್ಞಾನ ಅತ್ಯಂತ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಂತ್ರಜ್ಞಾನವನ್ನು ಕೇವಲ ಬಳಸುವುದಕ್ಕೆ ಸೀಮಿತವಾಗದೆ, ಹೊಸ ಆವಿಷ್ಕಾರಗಳನ್ನು ಮಾಡುವತ್ತ ಗಮನಹರಿಸಬೇಕು ಎಂದು ತಿಳಿಸಿದರು.

ಸಂಸ್ಥೆಯ ಕಾರ್ಯದರ್ಶಿ ಬಿ. ವಿಜಯಕುಮಾರ್ ಮಾತನಾಡಿ, ಪಠ್ಯಪುಸ್ತಕದ ಜ್ಞಾನದ ಜೊತೆಗೆ ಪ್ರಾಯೋಗಿಕ ಜ್ಞಾನ ಮತ್ತು ತಾಂತ್ರಿಕ ಕೌಶಲ್ಯಗಳನ್ನು ಬೆಳೆಸುವುದು ಇಂದಿನ ಶಿಕ್ಷಣದ ಪ್ರಮುಖ ಉದ್ದೇಶವಾಗಿದೆ. ವಿದ್ಯಾರ್ಥಿಗಳಿಗೆ ಭವಿಷ್ಯದ ತಂತ್ರಜ್ಞಾನಕ್ಕೆ ಅಗತ್ಯವಾದ ಕೌಶಲ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸಂಸ್ಥೆಯು ಇಂತಹ ವಿನೂತನ ಶೈಕ್ಷಣಿಕ ಚಟುವಟಿಕೆಗಳಿಗೆ ಆದ್ಯತೆ ನೀಡುತ್ತಿದೆ ಎಂದರು.

ಶಾಲೆಯ ಮುಖ್ಯೋಪಾಧ್ಯಾಯ ತಿಪ್ಪೇಸ್ವಾಮಿ ಎನ್.ಜಿ. ಮಾತನಾಡಿ, ಕೋಡಿಂಗ್‌ನಂತಹ ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿ ಏಕಾಗ್ರತೆ, ಸಮಯ ನಿರ್ವಹಣೆ ಹಾಗೂ ಹೊಸ ವಿಷಯಗಳನ್ನು ಕಲಿಯುವ ಆಸಕ್ತಿಯನ್ನು ಹೆಚ್ಚಿಸುತ್ತವೆ. ವಿದ್ಯಾರ್ಥಿಗಳು ಇಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ತಮ್ಮಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಬೇಕು ಎಂದು ಹೇಳಿದರು.

ಕೊಡಥಾನ್ ಸ್ಪರ್ಧೆಯ ವಿಜೇತ ವಿದ್ಯಾರ್ಥಿಗಳು

ಸ್ಪರ್ಧೆಯಲ್ಲಿ ರಾಜ್ಯ ಪಠ್ಯಕ್ರಮ ಹಾಗೂ ಐಸಿಎಸ್‌ಇ ಪಠ್ಯಕ್ರಮದ ಜೂನಿಯರ್ ಮತ್ತು ಸೀನಿಯರ್ ವಿಭಾಗಗಳಲ್ಲಿ ವಿದ್ಯಾರ್ಥಿಗಳು ವಿಜೇತರಾಗಿ ಹೊರಹೊಮ್ಮಿದರು.

ರಾಜ್ಯ ಪಠ್ಯಕ್ರಮ – ಜೂನಿಯರ್ ವಿಭಾಗ

  1. ರಕ್ಷಿತಾ ಆರ್. – 8ನೇ ತರಗತಿ
  2. ಪ್ರಣತಿ ಟಿ.ಪಿ. – 8ನೇ ತರಗತಿ
  3. ಜಾಹ್ನವಿ ಸಿ.ಬಿ. – 7ನೇ ತರಗತಿ

ರಾಜ್ಯ ಪಠ್ಯಕ್ರಮ – ಸೀನಿಯರ್ ವಿಭಾಗ

  1. ಸಾಯಿ ಮೈತ್ರಿ ಎಲ್.ಎ. – 10ನೇ ತರಗತಿ
  2. ಸಾನ್ವಿ ಕೆ. – 10ನೇ ತರಗತಿ
  3. ಸೃಷ್ಟಿ ಪಿ.ಎಸ್. – 10ನೇ ತರಗತಿ

ಐಸಿಎಸ್‌ಇ ಪಠ್ಯಕ್ರಮ – ಜೂನಿಯರ್ ವಿಭಾಗ

  1. ಲೋಚನ್ ಎಂ.ಸಿ. – 7ನೇ ತರಗತಿ
  2. ರಿತಿಕಾ ವಿ. – 7ನೇ ತರಗತಿ
  3. ನಚಿಕೇತ್ ಜೋಷಿ – 7ನೇ ತರಗತಿ

ಐಸಿಎಸ್‌ಇ ಪಠ್ಯಕ್ರಮ – ಸೀನಿಯರ್ ವಿಭಾಗ

  1. ಆರಾಧಿತ ಎಸ್. – 8ನೇ ತರಗತಿ
  2. ವಿದ್ಯಾಸಾಗರ್ ಕೆ.ಎಸ್. – 9ನೇ ತರಗತಿ
  3. ತನುಶ್ರೀ ಎಸ್. – 8ನೇ ತರಗತಿ

ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಇಂಚರ ಸ್ವಾಗತಿಸಿದರು. ಆರೂಷಿ ಕಾರ್ಯಕ್ರಮ ನಿರೂಪಿಸಿದರು. ಪೂರ್ವಿ ಎ. ಶೆಟ್ಟಿ ವಂದಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು, ಶಾಲೆಯ ಎಲ್ಲಾ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.

🟢 WhatsApp Group

Join WhatsApp Group

🔵 Facebook Page

Follow Facebook Page

⚫ Twitter / X

Follow on X (Twitter)

🟣 Threads

Follow on Threads

🟠 Instagram

Follow on Instagram

🔵 Telegram

Join Telegram Channel

🟢 WhatsApp Channel

Follow WhatsApp Channel

📰 ಸಮಗ್ರ ಸುದ್ದಿ

ನಿಖರತೆಗೆ ಮತ್ತೊಂದು ಹೆಸರು

📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು

Leave a Reply

Your email address will not be published. Required fields are marked *