ಚಿತ್ರದುರ್ಗ ಜಿಲ್ಲೆಯ ಅಭಿವೃದ್ಧಿಗಾಗಿ ಸಚಿವ ರಘುಮೂರ್ತಿಗೆ ಹೆಚ್ಚುವರಿ ಖಾತೆ ನೀಡಿ: ಸಂಪತ್ ಕುಮಾರ್ ಒತ್ತಾಯ.

ಚಿತ್ರದುರ್ಗ ನ. 28

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಜಿಲ್ಲೆಯ ಅಭಿವೃದ್ಧಿ ಹಾಗೂ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಹಿನ್ನೆಲೆಯಲ್ಲಿ ಚಳ್ಳಕೆರೆ ಹ್ಯಾಟ್ರಿಕ್ ಶಾಸಕರು, ಜಿಲ್ಲಾಉಸ್ತುವಾರಿ ಸಚಿವರಾದ ರಘುಮೂರ್ತಿಯವರಿಗೆ ಈಗಿನ ಖಾತೆಯ ಜೊತೆಗೆ ಹೆಚ್ಚುವರಿಯಾಗಿ ಇತರೆ ಬೇರೆ ಖಾತೆಯನ್ನು ನೀಡುವಂತೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಹಾಗೂ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ರವರನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್ ಈ ಇಬ್ಬರು ಮುಖಂಡರನ್ನು ಒತ್ತಾಯಿಸಿದ್ದಾರೆ.

ಈ ಬಗ್ಗೆ ಚಿತ್ರದುರ್ಗದಲ್ಲಿ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು ಮುಂದಿನ ದಿನದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಬರಲಿದ್ದು ಇದರಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಶ್ರಮವನ್ನು ಹಾಕಬೇಕಿದೆ, ಹಾಗೂ ಜಿಲ್ಲೆಯ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ರಘುಮೂರ್ತಿ ಅವರಿಗೆ ಈಗಿರುವ ಖಾತೆಯ ಜೊತೆಗೆ ಹೆಚ್ಚುವರಿ ಖಾತೆಯನ್ನು ನೀಡಬೇಕು ಈಗ ಉತ್ತಮವಾಗಿ ಕಾರ್ಯವನ್ನು ನಿರ್ವಹಿಸುತ್ತಿದ್ದು ಹೆಚ್ಚುವರಿ ಜವಾಬ್ದಾರಿ ನೀಡಿದರೆ ಜಿಲ್ಲೆಯ ಜನರಿಗೆ ಮತ್ತು ಜಿಲ್ಲೆಯ ಅಭಿವೃದ್ಧಿಗೆ ಅನುಕೂಲವಾಗುತ್ತದೆ ಕೆಪಿಸಿಸಿ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿ ಗಳಿಗೆ ಮನವಿ ಮಾಡಿದ್ದಾರೆ.

ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ, ನಗರಸಭೆ ಹಾಗೂ ಪುರಸಭೆ ಚುನಾವಣೆಗಳು ಮತ್ತು ಹಿರಿಯೂರು ಉಪ ಚುನಾವಣೆಯಲ್ಲಿ ಅನುಕೂಲವಾಗಲಿದೆ ಈ ಹಿನ್ನಲೆಯಲ್ಲಿ ರಘುಮೂರ್ತಿ ಅವರಿಗೆ ಪ್ರಸ್ತುತ ಖಾತೆಯ ಜೊತೆಗೆ ಹೆಚ್ಚುವರಿ ಖಾತೆಯನ್ನು ನೀಡುವುದು ಸೂಕ್ತವಾಗಿದ್ದು, ರಘುಮೂರ್ತಿ ಅವರು 3 ಬಾರಿ ಶಾಸಕರಾಗಿ ಉತ್ತಮವಾದ ಕೆಲಸವನ್ನು ಮಾಡಿದ್ದಾರೆ ಈಗ ಸಚಿವರಾಗಿ ಸಾಕಷ್ಟು ಕೆಲಸ ಮಾಡುತ್ತಿದ್ದು, ಉತ್ತಮ ಕೆಲಸ ಮಾಡುತ್ತಿದ್ದಾರೆ ಯಾವುದೇ ಹೆಚ್ಚುವರಿ ಖಾತೆಯನ್ನು ನೀಡಿದರೂ, ಅದರಿಂದ ಜಿಲ್ಲೆಯ ಜನರಿಗೂ ಅನುಕೂಲವಾಗುತ್ತದೆ ಮತ್ತು ಇಡೀ ಜಿಲ್ಲೆಯ ಅಭಿವೃದ್ಧಿಯಾಗುತ್ತದೆ ಈ ಕುರಿತು ಕೆಪಿಸಿಸಿ ಅಧ್ಯಕ್ಷರು ಮತ್ತು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುವುದಾಗಿ ಎಂದು ತಿಳಿಸಿದರು.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.

🟢 WhatsApp Group

Join WhatsApp Group

🔵 Facebook Page

Follow Facebook Page

⚫ Twitter / X

Follow on X (Twitter)

🟣 Threads

Follow on Threads

🟠 Instagram

Follow on Instagram

🔵 Telegram

Join Telegram Channel

🟢 WhatsApp Channel

Follow WhatsApp Channel

📰 ಸಮಗ್ರ ಸುದ್ದಿ

ನಿಖರತೆಗೆ ಮತ್ತೊಂದು ಹೆಸರು

📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು

Leave a Reply

Your email address will not be published. Required fields are marked *