ಚಿತ್ರದುರ್ಗ ಮರ್ಚೆಂಟ್ಸ್ ಬ್ಯಾಂಕ್ ಅಮೃತ ಮಹೋತ್ಸವ: ರಕ್ತದಾನ ಶಿಬಿರದಲ್ಲಿ 71 ಜನರಿಂದ ರಕ್ತದಾನ.

ಚಿತ್ರದುರ್ಗ ನ. 29

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಆಧುನಿಕ ವೈದ್ಯಕೀಯ ವಿಜ್ಞಾನ ಎಷ್ಟೇ ಮುಂದುವರಿದಿದ್ದರೂ ಮಾನವ ರಕ್ತಕ್ಕೆ ಪರ್ಯಾಯವಾದ ಕೃತಕ ರಕ್ತ ಇನ್ನೂ ಸಿದ್ಧವಾಗಿಲ್ಲ. ಆದ್ದರಿಂದ ಸ್ವಯಂಪ್ರೇರಿತ ರಕ್ತದಾನವೇ ಏಕೈಕ ಆಧಾರವಾಗಿದೆ. ಎಂದು ಮರ್ಚೆಂಟ್ಸ್ ಬ್ಯಾಂಕ್‍ನ ಅಧ್ಯಕ್ಷರಾದ ರಘುರಾಮ ರೆಡ್ಡಿ ತಿಳಿಸಿದರು.

ನಗರದ ದಿ ಮರ್ಚೆಂಟ್ಸ್ ಸೌಹಾರ್ದ ಸಹಕಾರ ಬ್ಯಾಂಕ್ ನಿಯಮಿತದ ಅಮೃತ ಮಹೋತ್ಸವದ ಅಂಗವಾಗಿ ಶನಿವಾರ ಹಳೇ ಮಾಧ್ಯಮಿಕ ಶಾಲಾ ಮೈದಾನ ಆವರಣದಲ್ಲಿ ಹಮ್ಮಿಕೊಂಡಿದ್ದ ಕೃತಜ್ಞತಾ ಪರ್ವದ ಕಾರ್ಯ ಕ್ರಮದ ಎರಡನೇ ದಿನದ ಭಾನುವಾರ ಹಮ್ಮಿಕೊಂಡಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಕುಟುಂಬ ಸಮೇತರಾಗಿ ಸ್ವಯಂ ರಕ್ತವನ್ನು ದಾನ ಮಾಡುವುದರ ಮೂಲಕ ಮಾತನಾಡಿದ ಅವರು, ತುರ್ತು ವೈದ್ಯಕೀಯ ಸಂದರ್ಭಗಳಲ್ಲಿ ಜೀವ ಉಳಿಸಲು ರಕ್ತದಾನಕ್ಕಿಂತ ಮಿಗಿಲಾದ ಸೇವೆ ಮತ್ತೊಂದಿಲ್ಲ. ಅಪಘಾತ ಗಳು, ಶಸ್ತ್ರಚಿಕಿತ್ಸೆಗಳು, ಹೆರಿಗೆಯ ಸಂಕೀರ್ಣತೆಗಳು ಹಾಗೂ ರಕ್ತಕ್ಕೆ ಸಂಬಂಧಿಸಿದ ಕಾಯಿಲೆಗಳಿಂದ ಬಳಲುತ್ತಿ ರುವ ರೋಗಿಗಳಿಗೆ ಸಮಯಕ್ಕೆ ಸರಿಯಾಗಿ ರಕ್ತ ದೊರೆಯುವುದು ಅತ್ಯಗತ್ಯವಾಗಿದೆ. ಒಂದು ಯೂನಿಟ್ ರಕ್ತದಾನವು ಹಲವು ಜೀವಗಳನ್ನು ಉಳಿಸಲು ನೆರವಾಗುತ್ತದೆ. ನಿಯಮಿತವಾಗಿ ರಕ್ತದಾನ ಮಾಡುವುದರಿಂದ ದೇಹದಲ್ಲಿ ಹೊಸ ರಕ್ತಕಣಗಳ ಉತ್ಪಾದನೆಗೆ ಉತ್ತೇಜನ ದೊರೆಯುತ್ತದೆ ಎಂದರು.

ರಕ್ತದ ಕೊರತೆಯಿಂದ ಉಂಟಾಗುವ ಅನಾಹುತಗಳನ್ನು ತಡೆಯಲು ಇಂತಹ ಶಿಬಿರಗಳು ನಿರಂತರವಾಗಿ ನಡೆಯಬೇಕು ರಕ್ತದಾನ ಮಾಡಿದ ನಂತರ ದೇಹದಲ್ಲಿ ರಕ್ತದ ಪ್ರಮಾಣ ಕೆಲವೇ ವಾರಗಳಲ್ಲಿ ಸಹಜ ಸ್ಥಿತಿಗೆ ಮರಳುತ್ತದೆ ಹಾಗೂ ದೈನಂದಿನ ಚಟುವಟಿಕೆಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿ ರಕ್ತದಾನವು ಮಾನವೀಯತೆಯ ಪ್ರತೀಕವಾಗಿದೆ. ತುರ್ತು ಸಂದರ್ಭಗಳಲ್ಲಿ ರಕ್ತದ ಕೊರತೆಯಿಂದ ಯಾವುದೇ ಜೀವ ಹಾನಿಯಾಗಬಾರದು ಎಂಬ ಉದ್ದೇಶದಿಂದ ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಯೂ ಸ್ವಯಂಪ್ರೇರಿತ ರಕ್ತದಾನಕ್ಕೆ ಮುಂದಾಗಬೇಕು. ಸುರಕ್ಷಿತ ವೈದ್ಯಕೀಯ ವ್ಯವಸ್ಥೆಯಲ್ಲಿ ನಡೆಯುವ ರಕ್ತದಾನವು ದಾನಿಗೆ ಯಾವುದೇ ಹಾನಿ ಉಂಟುಮಾಡುವುದಿಲ್ಲ ಬದಲಿಗೆ ಸಮಾಜಕ್ಕೆ ಅಮೂಲ್ಯ ಕೊಡುಗೆಯಾಗುತ್ತದೆ. ಸಾರ್ವಜನಿಕರಲ್ಲಿ ಇರುವ ಅನಗತ್ಯ ಭಯ ಮತ್ತು ತಪ್ಪು ಕಲ್ಪನೆಗಳನ್ನು ದೂರ ಮಾಡಿ, 18 ರಿಂದ 65 ವರ್ಷದೊಳಗಿನ ಆರೋಗ್ಯವಂತ ನಾಗರಿಕರು ವಿಶೇಷವಾಗಿ ಯುವಜನತೆ ರಕ್ತದಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ದಿ ಮರ್ಚೆಂಟ್ಸ್ ಸೌಹಾರ್ದ ಸಹಕಾರ ಬ್ಯಾಂಕ್ ನಿಯಮಿತದ ಆಯೋಜಿಸಲಾಗಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರದಲ್ಲಿ ಸಾರ್ವಜನಿಕರು ಮತ್ತು ಯುವಕ-ಯುವತಿಯರು ಉತ್ಸಾಹದಿಂದ ಪಾಲ್ಗೊಂಡು ರಕ್ತದಾನ ಮಾಡಿದರು. ಶಿಬಿರದಲ್ಲಿ ವೈದ್ಯಕೀಯ ತಪಾಸಣೆಯ ನಂತರ ಅರ್ಹ ದಾನಿಗಳಿಂದ ರಕ್ತ ಸಂಗ್ರಹಿಸಲಾಯಿತು. ರಕ್ತದಾನಿಗಳಿಗೆ ಪ್ರಮಾಣಪತ್ರ ಮತ್ತು ಪೌಷ್ಟಿಕ ಆಹಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮರ್ಚೆಂಟ್ಸ್ ಬ್ಯಾಂಕಿನ ಅಧ್ಯಕ್ಷರಾದ ರಘುರಾಮ ರೆಡ್ಡಿ, ಅವರ ಶ್ರೀಮತಿ ಸೌಜನ್ಯಾ ಹಾಗೂ ದ್ವಿತೀಯ ಪುತ್ರಿ ಶ್ರೀವಿದ್ಯಾ ಮೋತ್ಕೂರ್ ಸೇರಿದಂತೆ ಒಟ್ಟು 51 ದಿನಗಳಿಂದ ರಕ್ತದಾನ ಮಾಡಿದರು.

ಈ ಸಂದರ್ಭದಲ್ಲಿ ಮರ್ಚೆಂಟ್ಸ್ ಬ್ಯಾಂಕ್‍ನ ಉಪಾಧ್ಯಕ್ಷ ಎಲ್.ಇ.ಶ್ರೀನಿವಾಸಬಾಬು, ನಿರ್ದೇಶಕರುಗಳಾದ ಎಲ್.ಜಯಣ್ಣ, ಪಿ.ಎಲ್. ಸುರೇಶ್‍ರಾಜು, ರಾಜಾನಾಯ್ಕ, ಶ.ಮಂಜುನಾಥ್, ಟಿ.ಹೆಚ್.ರಾಜಪ್ಪ, ಮುಕುಂದ ರಾವ್, ಸುರೇಶ್, ಡಿ.ಪ್ರಕಾಶ್, ಇಂದ್ರಮ್ಮ, ಸುಜಾತ, ವೃತ್ತಿಪರ ನಿರ್ದೇಶಕರುಗಳಾದ ರಾಜೀವ್, ಕಾರ್ತಿಕ್, À ಸೋಮಶೇಖರ್ ಬ್ಯಾಂಕ್‍ನ ಮುಖ್ಯ ಕಾರ್ಯನಿರ್ವಹಕಾಧಿಕಾರಿ ಕೆ.ಆರ್.ಮಲ್ಲಿಕಾರ್ಜನ್ ಹಾಜರಿದ್ದರು.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.

🟢 WhatsApp Group

Join WhatsApp Group

🔵 Facebook Page

Follow Facebook Page

⚫ Twitter / X

Follow on X (Twitter)

🟣 Threads

Follow on Threads

🟠 Instagram

Follow on Instagram

🔵 Telegram

Join Telegram Channel

🟢 WhatsApp Channel

Follow WhatsApp Channel

📰 ಸಮಗ್ರ ಸುದ್ದಿ

ನಿಖರತೆಗೆ ಮತ್ತೊಂದು ಹೆಸರು

📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು

Leave a Reply

Your email address will not be published. Required fields are marked *