IPL 2023 Schedule: ಮಾ. 31 ರಿಂದ ಪ್ರಾರಂಭ, ಮೇ 28 ರಂದು ಫೈನಲ್; ಪ್ರತಿ ತಂಡದ ವೇಳಾಪಟ್ಟಿ ಇಲ್ಲಿದೆ

ipl 2023 schedule know the schedule of each and every team cricket news in kannada

IPL 2023 Schedule: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಮುಂದಿನ ಆವೃತ್ತಿಯ ವೇಳಾಪಟ್ಟಿ ಬಿಡುಗಡೆಯಾಗಿದೆ. ಈ ಲೀಗ್ ಮಾರ್ಚ್ 31 ರಿಂದ ಆರಂಭವಾಗಲಿದ್ದು, ಮೊದಲ ಪಂದ್ಯವು ಅಹಮದಾಬಾದ್‌ನಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ (Gujarat Titans and Chennai Super Kings) ನಡುವೆ ನಡೆಯಲಿದೆ. ಎಂದಿನಂತೆ 10 ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದ್ದು, ಐದು ಬಾರಿ ವಿಜೇತ ಮುಂಬೈ ಇಂಡಿಯನ್ಸ್, ಪ್ರಸ್ತುತ ರನ್ನರ್ ಅಪ್ ರಾಜಸ್ಥಾನ ರಾಯಲ್ಸ್, ಕೋಲ್ಕತ್ತಾ ನೈಟ್ ರೈಡರ್ಸ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಲಕ್ನೋ ಸೂಪರ್‌ಜೈಂಟ್ಸ್ ತಂಡಗಳು ಎ ಗುಂಪಿನಲ್ಲಿ ಸ್ಥಾನ ಪಡೆದಿವೆ. ಮತ್ತೊಂದೆಡೆ, ಚೆನ್ನೈ ಸೂಪರ್ ಕಿಂಗ್ಸ್, ಪಂಜಾಬ್ ಕಿಂಗ್ಸ್, ಸನ್ ರೈಸರ್ಸ್ ಹೈದರಾಬಾದ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಬಿ ಗುಂಪಿನಲ್ಲಿ ಸ್ಥಾನ ಪಡೆದಿವೆ.

ಐಪಿಎಲ್-2023ರ ಲೀಗ್ ಹಂತದಲ್ಲಿ ಒಟ್ಟು 70 ಪಂದ್ಯಗಳು ನಡೆಯಲಿವೆ. ಇದಾದ ಬಳಿಕ ಮೂರು ಪ್ಲೇಆಫ್ ಪಂದ್ಯಗಳು ನಡೆಯಲಿದ್ದು, ನಂತರ ಫೈನಲ್ ಪಂದ್ಯ ನಡೆಯಲಿದೆ. ಲೀಗ್ ಸುತ್ತಿನಲ್ಲಿ ಒಟ್ಟು 18 ಡಬಲ್ ಹೆಡರ್‌ ಪಂದ್ಯಗಳು ಇರುತ್ತವೆ. ಮೇ 28 ರಂದು ಫೈನಲ್ ಪಂದ್ಯ ನಡೆಯಲಿದೆ. ಈಗ ಬಿಡುಗಡೆಯಾಗಿರುವ ವೇಳಾಪಟ್ಟಿ ಪ್ರಕಾರ ಪ್ರತಿ ತಂಡ ಯಾವ ದಿನ ಯಾವ ತಂಡವನ್ನು ಎದುರಿಸಲಿದೆ ಎಂಬುದರ ಪೂರ್ಣ ವಿವರ ಇಲ್ಲಿದೆ.

IPL 2023 Schedule: 16ನೇ ಆವೃತ್ತಿಯ ಐಪಿಎಲ್ ವೇಳಾಪಟ್ಟಿ ಪ್ರಕಟ; ಮೊದಲ ಪಂದ್ಯ ಯಾವಾಗ ಗೊತ್ತಾ?

ರಾಯಲ್ ಚಾಲೆಂಜರ್ಸ್ ಬೆಂಗಳೂರು

ಫಾಫ್ ಡು ಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಮೊದಲ ಪಂದ್ಯವನ್ನು ಮುಂಬೈ ಇಂಡಿಯನ್ಸ್ ವಿರುದ್ಧ ಏಪ್ರಿಲ್ 2 ರಂದು ಆಡಲಿದೆ.

ಸನ್​ರೈಸರ್ಸ್​ ಹೈದರಾಬಾದ್

ಸನ್‌ರೈಸರ್ಸ್ ಹೈದರಾಬಾದ್ ತಂಡವು ತಮ್ಮ ಮೊದಲ ಪಂದ್ಯವನ್ನು ರಾಜಸ್ಥಾನ್ ರಾಯಲ್ಸ್ ವಿರುದ್ಧ ತನ್ನ ತವರು ನೆಲದಲ್ಲಿ ಏಪ್ರಿಲ್ 2ರಂದು ಆಡಲಿದೆ.

ಮುಂಬೈ ಇಂಡಿಯನ್ಸ್

ಮುಂಬೈ ತನ್ನ ಮೊದಲ ಪಂದ್ಯವನ್ನು ಆರ್‌ಸಿಬಿ ವಿರುದ್ಧ ಏಪ್ರಿಲ್ 2 ರಂದು ಆಡಬೇಕಿದೆ.

ಲಕ್ನೋ ಸೂಪರ್‌ಜೈಂಟ್ಸ್

ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ತವರಿನಲ್ಲಿ ತನ್ನ ಮೊದಲ ಪಂದ್ಯವನ್ನು ಆಡಲಿದೆ.

ಗುಜರಾತ್ ಟೈಟಾನ್ಸ್

ಪ್ರಸ್ತುತ ವಿಜೇತ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟಾನ್ಸ್, ನಾಲ್ಕು ಬಾರಿ ವಿಜೇತ ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ತನ್ನ ಮೊದಲ ಪಂದ್ಯವನ್ನು ತನ್ನ ತವರಿನಲ್ಲಿ ಆಡಲಿದೆ.

ಪಂಜಾಬ್ ಕಿಂಗ್ಸ್

ನೂತನ ನಾಯಕ ಶಿಖರ್ ಧವನ್ ನಾಯಕತ್ವದ ಪಂಜಾಬ್ ಕಿಂಗ್ಸ್ ಕೂಡ ತಮ್ಮ ಮೊದಲ ಪಂದ್ಯವನ್ನು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಏಪ್ರಿಲ್ 1 ರಂದು ತಮ್ಮ ತವರಿನಲ್ಲಿ ಆಡಲಿದೆ.

ದೆಹಲಿ ಕ್ಯಾಪಿಟಲ್ಸ್

ದೆಹಲಿ ತಂಡವು ತನ್ನ ಮೊದಲ ಪಂದ್ಯವನ್ನು ಲಕ್ನೋ ಸೂಪರ್‌ಜೈಂಟ್ಸ್ ವಿರುದ್ಧ ಏಪ್ರಿಲ್ 1 ರಂದು ಆಡಲಿದೆ. ಈ ಪಂದ್ಯ ಲಕ್ನೋದಲ್ಲಿ ನಡೆಯಲಿದೆ.

ರಾಜಸ್ಥಾನ್ ರಾಯಲ್ಸ್

ಕಳೆದ ಸೀಸನ್​ನಲ್ಲಿ ಫೈನಲ್‌ಗೆ ತಲುಪಿದ್ದ ರಾಜಸ್ಥಾನ್ ರಾಯಲ್ಸ್ ತಂಡವು ಏಪ್ರಿಲ್ 2 ರಂದು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಬೇಕಾಗಿದೆ.

ಕೋಲ್ಕತ್ತಾ ನೈಟ್ ರೈಡರ್ಸ್

ಶ್ರೇಯಸ್ ಅಯ್ಯರ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಏಪ್ರಿಲ್ 1 ರಂದು ಪಂಜಾಬ್ ಕಿಂಗ್ಸ್ ವಿರುದ್ಧ ಆಡಲಿದೆ.

ಒಟ್ಟು 70 ಲೀಗ್ ಪಂದ್ಯಗಳು

ಈ ಬಾರಿಯ ಐಪಿಎಲ್, ಅಹಮದಾಬಾದ್, ಮೊಹಾಲಿ, ಲಕ್ನೋ, ಹೈದರಾಬಾದ್, ಬೆಂಗಳೂರು, ಚೆನ್ನೈ, ದೆಹಲಿ, ಕೋಲ್ಕತ್ತಾ, ಜೈಪುರ, ಮುಂಬೈ, ಗುವಾಹಟಿ ಮತ್ತು ಧರ್ಮಶಾಲಾ ಸೇರಿದಂತೆ ಒಟ್ಟು 12 ನಗರಗಳಲ್ಲಿ ನಡೆಯಲಿದೆ. ಟೂರ್ನಿಯ ಮೊದಲ ಹಾಗೂ ಅಂತಿಮ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಮೇ 21ರಂದು ಕೊನೆಯ ಲೀಗ್ ಪಂದ್ಯ ನಡೆಯಲಿದ್ದು, 18 ಡಬಲ್ ಹೆಡರ್ ಸೇರಿದಂತೆ ಒಟ್ಟು 70 ಲೀಗ್ ಪಂದ್ಯಗಳು ನಡೆಯಲಿವೆ. ಪ್ರತಿ ತಂಡ ತಲಾ 7 ಪಂದ್ಯಗಳನ್ನು ತವರು ನೆಲದಲ್ಲಿ ಮತ್ತು 7 ಪಂದ್ಯಗಳನ್ನು ಬೇರೆ ನೆಲದಲ್ಲಿ ಆಡಲಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

source https://tv9kannada.com/sports/cricket-news/ipl-2023-schedule-know-the-schedule-of-each-and-every-team-cricket-news-in-kannada-psr-au14-522231.html

Views: 0

Leave a Reply

Your email address will not be published. Required fields are marked *