ಒಂದೇ ಪಂದ್ಯದಲ್ಲಿ ದ್ವಿಶತಕ ಹಾಗೂ ಶತಕ ಬಾರಿಸಿ ಇತಿಹಾಸ ನಿರ್ಮಿಸಿದ ಯಶಸ್ವಿ ಜೈಸ್ವಾಲ್..!

Irani Cup rest of india batsman Yashasvi Jaiswal smashed century after double century vs madhya pradesh

ಪ್ರಸ್ತುತ ಭಾರತದಲ್ಲಿ ನಡೆಯುತ್ತಿರುವ ಇರಾನಿ ಕಪ್​ನಲ್ಲಿ (Irani Cup) ಶೇಷ ಭಾರತ ತಂಡವನ್ನು ಪ್ರತಿನಿಧಿಸುತ್ತಿರುವ ಯುವ ಸ್ಫೋಟಕ ಬ್ಯಾಟರ್ ಯಶಸ್ವಿ ಜೈಸ್ವಾಲ್‌ (Yashasvi Jaiswal ) ಶತಕದ ಮೇಲೆ ಶತಕ ಬಾರಿಸುತ್ತಿದ್ದಾರೆ. ಈ 21 ವರ್ಷದ ಬ್ಯಾಟ್ಸ್‌ಮನ್ ಕ್ರೀಸ್‌ಗೆ ಬಂದಾಗಲೆಲ್ಲಾ ಅವರ ಬ್ಯಾಟ್‌ನಿಂದ ರನ್​ಮಳೆ ಸುರಿಯಲಾರಂಭಿಸಿದೆ. ರಣಜಿ ಟ್ರೋಫಿಯಲ್ಲಿ (Ranji Trophy) ಅದ್ಭುತ ಪ್ರದರ್ಶನ ನೀಡಿದ ಯಶಸ್ವಿ ಜೈಸ್ವಾಲ್ ಇದೀಗ ಇರಾನಿ ಕಪ್‌ನಲ್ಲೂ ಅಬ್ಬರ ಸೃಷ್ಟಿಸಿದ್ದಾರೆ. ಗ್ವಾಲಿಯರ್‌ನಲ್ಲಿ ಮಧ್ಯಪ್ರದೇಶ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ ದ್ವಿಶತಕ ಸಿಡಿಸಿದ ಯಶಸ್ವಿ ಜೈಸ್ವಾಲ್, ಎರಡನೇ ಇನ್ನಿಂಗ್ಸ್‌ನಲ್ಲಿಯೂ ಶತಕ ಸಿಡಿಸಿದ್ದಾರೆ. ಜೈಸ್ವಾಲ್ ಈ ಶತಕವನ್ನು 100ಕ್ಕೂ ಹೆಚ್ಚು ಸ್ಟ್ರೈಕ್ ರೇಟ್‌ನೊಂದಿಗೆ ಬಾರಿಸಿದ್ದು ದೊಡ್ಡ ವಿಷಯ.

ಇರಾನಿ ಕಪ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ದ್ವಿಶತಕ ಸಿಡಿಸಿದ ಯಶಸ್ವಿ ಜೈಸ್ವಾಲ್, ಎರಡನೇ ಇನ್ನಿಂಗ್ಸ್‌ನಲ್ಲಿ ಶತಕ ಸಿಡಿಸುವುದರೊಂದಿಗೆ ಈ ಟೂರ್ನಿಯಲ್ಲಿ ಈ ಸಾಧನೆ ಮಾಡಿದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ. ಅಲ್ಲದೆ ಇರಾನಿ ಕಪ್‌ನಲ್ಲಿ 300ಕ್ಕೂ ಹೆಚ್ಚು ರನ್ ಗಳಿಸಿದ ಎರಡನೇ ಭಾರತೀಯ ಕೂಡ ಆಗಿದ್ದಾರೆ. ಈ ಮೊದಲು ಈ ದಾಖಲೆ ಶಿಖರ್ ಧವನ್ ಹೆಸರಿನಲ್ಲಿತ್ತು. ಇದೀಗ ಜೈಸ್ವಾಲ್, ಧವನ್ ದಾಖಲೆಯನ್ನು ಸರಿಗಟ್ಟಿದ್ದಾರೆ. ಜೈಸ್ವಾಲ್, ಮೊದಲ ಇನ್ನಿಂಗ್ಸ್‌ನಲ್ಲಿ 213 ರನ್ ಗಳಿಸಿದ್ದದರೆ, ಎರಡನೇ ಇನ್ನಿಂಗ್ಸ್‌ನಲ್ಲಿಯೂ ಶತಕ ಗಳಿಸಿದ್ದರು.

8 ಬೌಂಡರಿ, 4 ಸಿಕ್ಸರ್‌! ಮೈದಾನದಲ್ಲಿ ಸುನಾಮಿ ಎಬ್ಬಿಸಿದ 110 ಕೆಜಿ ತೂಕದ ಬ್ಯಾಟ್ಸ್‌ಮನ್! ವಿಡಿಯೋ ನೋಡಿ

ತಂಡಕ್ಕೆ ನೆರವಾದ ಜೈಸ್ವಾಲ್-ಈಶ್ವರನ್

ಎರಡನೇ ಇನ್ನಿಂಗ್ಸ್‌ನಲ್ಲಿ, ರೆಸ್ಟ್ ಆಫ್ ಇಂಡಿಯಾ ತಂಡ ಆರಂಭದಲ್ಲೇ ಸಂಕಷ್ಟಕ್ಕೆ ಸಿಲುಕಿತು. ತಂಡದ ನಾಯಕ ಮಯಾಂಕ್ ಅಗರ್ವಾಲ್‌ ಶೂನ್ಯಕ್ಕೆ ಔಟಾದರು. ಬಾಬಾ ಇಂದ್ರಜಿತ್​ಗೂ ಕೂಡ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. ಮೊದಲ ಎಸೆತದಲ್ಲೇ ಯಶ್‌ ಧುಲ್‌ ಕೂಡ ಪೆವಿಲಿಯನ್​ಗೆ ಮರಳಿದರು. ಆದರೆ, ಯಶಸ್ವಿ ಕ್ರೀಸ್‌ನಲ್ಲಿ ಉಳಿದು ರನ್ ಮಳೆ ಸುರಿಸಿದರು. ಈ ಎಡಗೈ ಬ್ಯಾಟ್ಸ್‌ಮನ್ ವೇಗವಾಗಿ ಬೌಂಡರಿ ಮತ್ತು ಸಿಕ್ಸರ್‌ಗಳ ಮಳೆಗರೆದರು. ಈ ಆಟಗಾರ ಈಶ್ವರನ್ ಜೊತೆ 102 ರನ್ ಜೊತೆಯಾಟವನ್ನು ಹಂಚಿಕೊಂಡರು. ಇದುವರೆಗೆ ಈ ಇಬ್ಬರು ಆಟಗಾರರು ಈ ಪಂದ್ಯದಲ್ಲಿ 400 ಕ್ಕೂ ಹೆಚ್ಚು ರನ್ ಸೇರಿಸಿದ್ದು, ಇರಾನಿ ಕಪ್ ಇತಿಹಾಸದಲ್ಲಿ ಇದು ದಾಖಲೆಯಾಗಿದೆ. 2011ರಲ್ಲಿ ಶಿಖರ್ ಧವನ್ ಮತ್ತು ಅಭಿಮನ್ಯು ಮುಕುಂದ್ 387 ರನ್ ಸೇರಿಸಿದ್ದರು.

ಜೈಸ್ವಾಲ್​ಗೆ ಟೀಂ ಇಂಡಿಯಾ ಬಾಗಿಲು ತೆರೆಯುತ್ತಾ?

ಯಶಸ್ವಿ ಜೈಸ್ವಾಲ್ ಅವರ ಪ್ರದರ್ಶನವನ್ನು ಗಮನಿಸಿದರೆ, ಅವರು ಶೀಘ್ರದಲ್ಲೇ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯುವ ಸಾಧ್ಯತೆಗಳು ಹೆಚ್ಚಿವೆ. ಜೈಸ್ವಾಲ್ ಇದುವರೆಗೆ ಕೇವಲ 15 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದು ಅದರಲ್ಲಿ 9 ಶತಕಗಳನ್ನು ಬಾರಿಸಿದ್ದಾರೆ. ಅದರಲ್ಲಿ 3 ದ್ವಿಶತಕಗಳು ಸೇರಿವೆ. ಜೈಸ್ವಾಲ್ ಅವರ ಬ್ಯಾಟಿಂಗ್ ಸರಾಸರಿ 85 ಕ್ಕಿಂತ ಹೆಚ್ಚಿದೆ. ಹೀಗಾಗಿ ಟೀಂ ಇಂಡಿಯಾದ ಟೆಸ್ಟ್​ ತಂಡದಲ್ಲಿ ಆರಂಭಿಕರ ಕೊರತೆ ಎದ್ದು ಕಾಣುತ್ತಿರುವುದನ್ನು ಗಮನಿಸಿದರೆ ಯಶಸ್ವಿಗೆ ಶೀಘ್ರದಲ್ಲೇ ಟೀಂ ಇಂಡಿಯಾದಿಂದ ಕರೆ ಬರಬಹುದು ಎಂದು ತೋರುತ್ತದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

source https://tv9kannada.com/sports/cricket-news/irani-cup-rest-of-india-batsman-yashasvi-jaiswal-smashed-century-after-double-century-vs-madhya-pradesh-psr-au14-530628.html

Leave a Reply

Your email address will not be published. Required fields are marked *