
WPL 2023 Live: ಬಹು ನಿರೀಕ್ಷಿತ ವುಮೆನ್ಸ್ ಪ್ರೀಮಿಯರ್ ಲೀಗ್ ಇಂದಿನಿಂದ ಶುರುವಾಗಲಿದೆ. ಮಾರ್ಚ್ 4 ರಿಂದ ಮಾರ್ಚ್ 26 ರವರೆಗೆ ನಡೆಯಲಿರುವ ಈ ಟೂರ್ನಿಯ ಎಲ್ಲಾ ಪಂದ್ಯಗಳಿಗೆ ಮಹಾರಾಷ್ಟ್ರದ ಡಿವೈ ಪಾಟೀಲ್ ಸ್ಟೇಡಿಯಂ ಮತ್ತು ಬ್ರಬೋರ್ನ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಲಿದೆ. ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮಾರ್ಚ್ 5 ರಿಂದ ಅಭಿಯಾನ ಆರಂಭಿಸಲಿದ್ದು, ಮೊದಲ ಪಂದ್ಯವನ್ನು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಡಲಿದೆ.
ಚೊಚ್ಚಲ ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ಒಟ್ಟು 5 ತಂಡಗಳು ಸೆಣಸಲಿದ್ದು, ಅದರಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಗುಜರಾತ್ ಜೈಂಟ್ಸ್, ಯುಪಿ ವಾರಿಯರ್ಸ್, ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಕಣಕ್ಕಿಳಿಯಲಿವೆ.
ಗುಜರಾತ್ ಜೈಂಟ್ಸ್ ತಂಡ ಹೀಗಿದೆ: ಆಶ್ಲೀಗ್ ಗಾರ್ಡನರ್, ಬೆತ್ ಮೂನಿ (ನಾಯಕಿ), ಸೋಫಿಯಾ ಡಂಕ್ಲಿ, ಅನ್ನಾಬೆಲ್ ಸದರ್ಲ್ಯಾಂಡ್, ಹರ್ಲೀನ್ ಡಿಯೋಲ್, ಡಿಯಾಂಡ್ರಾ ಡಾಟಿನ್, ಸ್ನೇಹ ರಾಣಾ, ಎಸ್ ಮೇಘನಾ, ಜಾರ್ಜಿಯಾ ವೇರ್ಹ್ಯಾಮ್, ಮಾನ್ಸಿ ಜೋಶಿ, ದಯಾಲನ್ ಹೇಮಲತಾ, ಮೋನಿಕಾ ಪಟೇಲ್, ತನುಜಾ ಕನ್ವರ್, ಸುಷ್ಮಾ ವರ್ಮಾ, ಹರ್ಲಿ ಗಾಲಾ, ಅಶ್ವನಿ ಕುಮಾರಿ , ಶಬ್ಮಾನ್ ಶಕೀಲ್, ಪಾರುನಿಕ ಸಿಸೋಡಿಯಾ.
ಮುಂಬೈ ಇಂಡಿಯನ್ಸ್ ತಂಡ ಹೀಗಿದೆ: ಹರ್ಮನ್ಪ್ರೀತ್ ಕೌರ್, ನ್ಯಾಟ್ ಸಿವರ್-ಬ್ರಂಟ್, ಅಮೆಲಿಯಾ ಕೆರ್, ಪೂಜಾ ವಸ್ತ್ರಾಕರ್, ಯಾಸ್ತಿಕಾ ಭಾಟಿಯಾ, ಹೀದರ್ ಗ್ರಹಾಂ, ಇಸ್ಸಿ ವಾಂಗ್, ಅಮನ್ಜೋತ್ ಕೌರ್, ಧಾರಾ ಗುಜ್ಜರ್, ಸೈಕಾ ಇಶಾಕ್, ಹೇಲಿ ಮ್ಯಾಥ್ಯೂಸ್, ಕ್ಲೋಯ್ ಟ್ರಯೋನ್, ಪ್ರಿಯಾಂಕಾ ಬಾಲಾ, ಹುಮೈರಾ ಕಾಜಿತ್, ನೀಲಂ ಬಿಶ್ತ್, ಸೋನಮ್ ಯಾದವ್, ಜಿಂತಾಮನಿ ಕಾಲಿತ.
Views: 0