
RCB vs DC Live Score, WPL 2023: ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವುಮೆನ್ಸ್ ಪ್ರೀಮಿಯರ್ ಲೀಗ್ನ 2ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (Royal Challengers Bangalore vs Delhi Capitals) ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆರ್ಸಿಬಿ ನಾಯಕಿ ಸ್ಮೃತಿ ಮಂಧಾನ ಬೌಲಿಂಗ್ ಆಯ್ಕೆ ಮಾಡಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ 11): ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ದಿಶಾ ಕಸತ್, ಎಲ್ಲಿಸ್ ಪೆರ್ರಿ, ರಿಚಾ ಘೋಷ್ (ವಿಕೆಟ್ ಕೀಪರ್), ಹೀದರ್ ನೈಟ್, ಕನಿಕಾ ಅಹುಜಾ, ಆಶಾ ಶೋಬನಾ, ಪ್ರೀತಿ ಬೋಸ್, ಮೇಗನ್ ಶಟ್, ರೇಣುಕಾ ಠಾಕೂರ್ ಸಿಂಗ್.
ಡೆಲ್ಲಿ ಕ್ಯಾಪಿಟಲ್ಸ್ (ಪ್ಲೇಯಿಂಗ್ 11): ಶಫಾಲಿ ವರ್ಮಾ, ಮೆಗ್ ಲ್ಯಾನಿಂಗ್ (ನಾಯಕಿ), ಮರಿಜಾನ್ನೆ ಕಪ್, ಜೆಮಿಮಾ ರಾಡ್ರಿಗಸ್, ಆಲಿಸ್ ಕ್ಯಾಪ್ಸೆ, ಜೆಸ್ ಜೊನಾಸ್ಸೆನ್, ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ಅರುಂಧತಿ ರೆಡ್ಡಿ, ಶಿಖಾ ಪಾಂಡೆ, ರಾಧಾ ಯಾದವ್, ತಾರಾ ನಾರ್ರಿಸ್.
ಆರ್ಸಿಬಿ ತಂಡವನ್ನು ಟೀಮ್ ಇಂಡಿಯಾದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ ಮುನ್ನಡೆಸಿದರೆ, ಡೆಲ್ಲಿ ಕ್ಯಾಪಿಟಲ್ಸ್ ಅನ್ನು ಆಸ್ಟ್ರೇಲಿಯಾ ತಂಡದ ಯಶಸ್ವಿ ನಾಯಕಿ ಮೆಗ್ ಲ್ಯಾನಿಂಗ್ ಮುನ್ನಡೆಸುತ್ತಿರುವುದು ವಿಶೇಷ. ಹಾಗೆಯೇ ಉಭಯ ತಂಡಗಳಲ್ಲೂ ಸ್ಟಾರ್ ಆಟಗಾರ್ತಿಯರ ದಂಡೇ ಇದೆ. ಆರ್ಸಿಬಿ ತಂಡದಲ್ಲಿ ಸ್ಮೃತಿ ಮಂಧಾನ ಅಲ್ಲದೆ, ಆಸ್ಟ್ರೇಲಿಯಾದ ಆಲ್ರೌಂಡರ್ ಎಲ್ಲಿಸ್ ಪೆರ್ರಿ, ನ್ಯೂಜಿಲೆಂಡ್ನ ಸ್ಪೋಟಕ ಬ್ಯಾಟರ್ ಸೋಫಿ ಡಿವೈನ್, ಟೀಮ್ ಇಂಡಿಯಾದ ಫಿನಿಶರ್ ರಿಚಾ ಘೋಷ್ ಇದ್ದಾರೆ. ಹಾಗೆಯೇ ಬೌಲಿಂಗ್ ವಿಭಾಗದಲ್ಲಿ ರೇಣುಕಾ ಸಿಂಗ್, ಮೇಗನ್ ಶಟ್ ಆರ್ಸಿಬಿ ತಂಡದಲ್ಲಿದ್ದಾರೆ.
ಮತ್ತೊಂದೆಡೆ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ನಾಯಕಿ ಮೆಗ್ ಲ್ಯಾನಿಂಗ್ ಜೊತೆ ಟೀಮ್ ಇಂಡಿಯಾದ ಹೊಡಿಬಡಿ ಆಟಗಾರ್ತಿ ಶಫಾಲಿ ವರ್ಮಾ, ಜೆಮಿಮಾ ರೋಡಿಗ್ರಸ್, ಆಲಿಸ್ ಕ್ಯಾಪ್ಸೆ, ಲ್ಯಾರಾ ಹ್ಯಾರಿಸ್ನಂತಹ ಅತ್ಯುತ್ತಮ ಆಟಗಾರ್ತಿಯರಿದ್ದಾರೆ. ಹೀಗಾಗಿ ಇಂದಿನ ಪಂದ್ಯದಲ್ಲೂ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು.
ಈ ಪಂದ್ಯವು ಸಂಜೆ 3.30 ರಿಂದ ಶುರುವಾಗಲಿದ್ದು, ಜಿಯೋ ಸಿನಿಮಾ ಆ್ಯಪ್ ಹಾಗೂ ಸ್ಪೋರ್ಟ್ಸ್ 18 ಚಾನೆಲ್ಗಳಲ್ಲಿ ಲೈವ್ ವೀಕ್ಷಿಸಬಹುದು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಸ್ಮೃತಿ ಮಂಧಾನ (ನಾಯಕಿ), ಡೇನ್ ವ್ಯಾನ್ ನೀಕರ್ಕ್, ಎಲ್ಲಿಸ್ ಪೆರ್ರಿ, ಹೀದರ್ ನೈಟ್, ಸೋಫಿ ಡಿವೈನ್, ಎರಿನ್ ಬರ್ನ್ಸ್, ರಿಚಾ ಘೋಷ್ (ವಿಕೆಟ್ ಕೀಪರ್), ಮೇಗನ್ ಶಟ್, ರೇಣುಕಾ ಠಾಕೂರ್ ಸಿಂಗ್, ದಿಶಾ ಕಸತ್, ಕೋಮಲ್ ಝಂಝಾದ್, ಕನಿಕಾ ಅಹುಜಾ, ಶ್ರೇಯಾಂಕಾ ಪಾಟೀಲ್, ಪ್ರೀತಿ ಬೋಸ್, ಸಹನಾ ಪವಾರ್, ಪೂನಂ ಖೇಮ್ನಾರ್, ಆಶಾ ಶೋಬನಾ, ಇಂದ್ರಾಣಿ ರಾಯ್
ಡೆಲ್ಲಿ ಕ್ಯಾಪಿಟಲ್ಸ್ ತಂಡ: ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ಶಫಾಲಿ ವರ್ಮಾ, ಜೆಮಿಮಾ ರೋಡ್ರಿಗಸ್, ಮೆಗ್ ಲ್ಯಾನಿಂಗ್ (ನಾಯಕಿ), ಆಲಿಸ್ ಕ್ಯಾಪ್ಸೆ, ಲಾರಾ ಹ್ಯಾರಿಸ್, ಜಸಿಯಾ ಅಖ್ತರ್, ಶಿಖಾ ಪಾಂಡೆ, ಮರಿಜಾನ್ನೆ ಕಪ್, ಸ್ನೇಹಾ ದೀಪ್ತಿ, ರಾಧಾ ಯಾದವ್, ಅರುಂಧತಿ ರೆಡ್ಡಿ, ಪೂನಂ ಯಾದವ್ ಜೆಸ್ ಜೋನಾಸೆನ್, ಟೈಟಾಸ್ ಸಾಧು, ಅಪರ್ಣಾ ಮೊಂಡಲ್, ಮಿನ್ನು ಮಣಿ, ತಾರಾ ನಾರ್ರಿಸ್.