
MIW vs RCBW Live Score, WPL 2023: ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ನಡೆಯಲಿರುವ ವುಮೆನ್ಸ್ ಪ್ರೀಮಿಯರ್ ಲೀಗ್ನ 4ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋತಿರುವ ಆರ್ಸಿಬಿ ತಂಡವು ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಶುಭಾರಂಭ ಮಾಡುವ ನಿರೀಕ್ಷೆಯಲ್ಲಿದೆ. ಮತ್ತೊಂದೆಡೆ ಮೊದಲ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿರುವ ಮುಂಬೈ ಇಂಡಿಯನ್ಸ್ ಗೆಲುವಿನ ಲಯವನ್ನು ಮುಂದುವರೆಸುವ ಇರಾದೆಯಲ್ಲಿದೆ. ಹೀಗಾಗಿ ಈ ಪಂದ್ಯದಲ್ಲಿ ಉಭಯ ತಂಡಗಳಿಂದ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು.
ಮುಂಬೈ ಇಂಡಿಯನ್ಸ್ ತಂಡ: ಯಾಸ್ತಿಕಾ ಭಾಟಿಯಾ(ವಿಕೆಟ್ ಕೀಪರ್), ಹೇಲಿ ಮ್ಯಾಥ್ಯೂಸ್, ನ್ಯಾಟ್ ಸಿವರ್-ಬ್ರಂಟ್, ಹರ್ಮನ್‌ಪ್ರೀತ್ ಕೌರ್(ನಾಯಕಿ), ಅಮೆಲಿಯಾ ಕೆರ್, ಪೂಜಾ ವಸ್ತ್ರಾಕರ್, ಇಸ್ಸಿ ವೊಂಗ್, ಅಮಂಜೋತ್ ಕೌರ್, ಹುಮೈರಾ ಕಾಜಿ, ಜಿಂಟಿಮಣಿ ಕಲಿತಾ, ಸೈಕಾ ಇಶಾಕ್, ಹೀದರ್ ಗ್ರಹಾಂ, ಕ್ಲೋಯ್ ಟ್ರಯಾನ್, ಸೋನಮ್ ಯಾದವ್, ನೀಲಂ ಬಿಷ್ಟ್, ಪ್ರಿಯಾಂಕಾ ಬಾಲಾ, ಧಾರಾ ಗುಜ್ಜರ್
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಸ್ಮೃತಿ ಮಂಧಾನ(ನಾಯಕಿ), ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ದಿಶಾ ಕಸತ್, ರಿಚಾ ಘೋಷ್(ವಿಕೆಟ್ ಕೀಪರ್), ಹೀದರ್ ನೈಟ್, ಕನಿಕಾ ಅಹುಜಾ, ಆಶಾ ಶೋಬನಾ, ಮೇಗನ್ ಸ್ಚುಟ್, ಪ್ರೀತಿ ಬೋಸ್, ರೇಣುಕಾ ಠಾಕೂರ್ ಸಿಂಗ್, ಡೇನ್ ವ್ಯಾನ್ ನೀಕರ್ಕ್, ಇಂದ್ರಾಣಿ ರಾಯ್, ಎರಿನ್ ಬರ್ನ್ಸ್, ಪೂನಂ ಖೇಮ್ನಾರ್, ಸಹನಾ ಪವಾರ್, ಶ್ರೇಯಾಂಕ ಪಾಟೀಲ್, ಕೋಮಲ್ ಝಂಝಾದ್.