
DC vs MI Live Score, WPL 2023: ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆಯಲಿರುವ ವುಮೆನ್ಸ್ ಪ್ರೀಮಿಯರ್ ಲೀಗ್ನ 7ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಉಭಯ ತಂಡಗಳು ಬಲಿಷ್ಠವಾಗಿ ಗುರುತಿಸಿಕೊಂಡಿದ್ದು, ಹೀಗಾಗಿ ಇಂದಿನ ಪಂದ್ಯದಲ್ಲಿ ರೋಚಕ ಹಣಾಹಣಿಯನ್ನು ನಿರೀಕ್ಷಿಸಬಹುದು. ಏಕೆಂದರೆ ಆಡಿರುವ 2 ಪಂದ್ಯಗಳಲ್ಲೂ ಉಭಯ ತಂಡಗಳು ಜಯ ಸಾಧಿಸಿದೆ.
ಇತ್ತ 2 ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿರುವ ಮುಂಬೈ ಇಂಡಿಯನ್ಸ್ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡವು ದ್ವಿತೀಯ ಸ್ಥಾನದಲ್ಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಗೆದ್ದು ಅಗ್ರಸ್ಥಾನಕ್ಕೇರುವ ಅವಕಾಶ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕಿದೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡ: ಮೆಗ್ ಲ್ಯಾನಿಂಗ್(ನಾಯಕಿ), ಶಫಾಲಿ ವರ್ಮಾ, ಮರಿಝನ್ನೆ ಕಪ್, ಜೆಮಿಮಾ ರೊಡ್ರಿಗಸ್, ಆಲಿಸ್ ಕ್ಯಾಪ್ಸೆ, ಜೆಸ್ ಜೊನಾಸೆನ್, ತಾನಿಯಾ ಭಾಟಿಯಾ(ವಿಕೆಟ್ ಕೀಪರ್), ಅರುಂಧತಿ ರೆಡ್ಡಿ, ಶಿಖಾ ಪಾಂಡೆ, ರಾಧಾ ಯಾದವ್, ಟಾರಾ ನೋರಿಸ್, ಲಾರಾ ಹ್ಯಾರಿಸ್, ಜಸಿಯಾ ಅಖ್ತರ್, ಮಿನ್ನು ಮಣಿ, ಅಪರ್ಣಾ ಮೊಂಡಲ್, ಪೂನಂ ಯಾದವ್, ಟೈಟಾಸ್ ಸಾಧು, ಸ್ನೇಹಾ ದೀಪ್ತಿ.
ಮುಂಬೈ ಇಂಡಿಯನ್ಸ್ ತಂಡ: ಹೇಲಿ ಮ್ಯಾಥ್ಯೂಸ್, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ನ್ಯಾಟ್ ಸಿವರ್-ಬ್ರಂಟ್, ಹರ್ಮನ್ಪ್ರೀತ್ ಕೌರ್ (ನಾಯಕಿ), ಅಮೆಲಿಯಾ ಕೆರ್, ಪೂಜಾ ವಸ್ತ್ರಕರ್, ಇಸ್ಸಿ ವೊಂಗ್, ಅಮನ್ಜೋತ್ ಕೌರ್, ಹುಮೈರಾ ಕಾಜಿ, ಜಿಂಟಿಮಣಿ ಕಲಿತಾ, ಸೈಕಾ ಇಶಾಕ್, ಪ್ರಿಯಾಂಕಾ ಬಾಲಾ, ನೀಲಂ ಬಿಶ್ಟ್, ಸೋನಮ್ ಯಾದವ್, ಧಾರಾ ಗುಜ್ಜರ್, ಹೀದರ್ ಗ್ರಹಾಂ, ಕ್ಲೋಯ್ ಟ್ರಯಾನ್.