
GG vs DC Live Score, WPL 2023: ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆಯಲಿರುವ ವುಮೆನ್ಸ್ ಪ್ರೀಮಿಯರ್ ಲೀಗ್ನ 9ನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈಗಾಗಲೇ ಉಭಯ ತಂಡಗಳು 3 ಪಂದ್ಯಗಳನ್ನು ಆಡಿದ್ದು, ಅದರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು 2 ಜಯ ಸಾಧಿಸಿದರೆ, ಗುಜರಾತ್ ಜೈಂಟ್ಸ್ ತಂಡವು 1 ಗೆಲುವು ದಾಖಲಿಸಿದೆ.
ಅತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದರೆ, ಗುಜರಾತ್ ಜೈಂಟ್ಸ್ ತಂಡವು 4ನೇ ಸ್ಥಾನದಲ್ಲಿದೆ. ಹೀಗಾಗಿ ಈ ಪಂದ್ಯದ ಗೆಲ್ಲುವ ಮೂಲಕ ಪಾಯಿಂಟ್ ಟೇಬಲ್ನಲ್ಲಿ ಮೇಲೇರುವ ಇರಾದೆಯಲ್ಲಿದೆ ಗುಜರಾತ್ ಜೈಂಟ್ಸ್. ಆದರೆ ಕೊನೆಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೋತಿರುವ ಡೆಲ್ಲಿ ಕ್ಯಾಪಿಟಲ್ಸ್ ಮತ್ತೆ ಗೆಲುವಿನ ಲಯಕ್ಕೆ ಮರಳುವ ವಿಶ್ವಾಸದಲ್ಲಿದೆ. ಹೀಗಾಗಿ ಈ ಪಂದ್ಯದಲ್ಲಿ ಉಭಯ ತಂಡಗಳಿಂದ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು.
ಡೆಲ್ಲಿ ಕ್ಯಾಪಿಟಲ್ಸ್ ತಂಡ: ಮೆಗ್ ಲ್ಯಾನಿಂಗ್ (ನಾಯಕಿ), ಶಫಾಲಿ ವರ್ಮಾ, ಆಲಿಸ್ ಕ್ಯಾಪ್ಸಿ, ಮರಿಜಾನ್ನೆ ಕಪ್, ಜೆಮಿಮಾ ರೊಡ್ರಿಗಸ್, ಜೆಸ್ ಜೊನಾಸೆನ್, ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ಮಿನ್ನು ಮಣಿ, ರಾಧಾ ಯಾದವ್, ಶಿಖಾ ಪಾಂಡೆ, ಟಾರಾ ನೋರಿಸ್, ಪೂನಂ ಯಾದವ್, ಲಾರಾ ಹ್ಯಾರಿಸ್, ಅರುಂಧತಿ ರೆಡ್ಡಿ, ಜಸಿಯಾ ಅಖ್ತರ್, ಅಪರ್ಣಾ ಮೊಂಡಲ್, ಟೈಟಾಸ್ ಸಾಧು, ಸ್ನೇಹಾ ದೀಪ್ತಿ
ಗುಜರಾತ್ ಜೈಂಟ್ಸ್ ತಂಡ: ಸಬ್ಬಿನೇನಿ ಮೇಘನಾ, ಸೋಫಿಯಾ ಡಂಕ್ಲಿ, ಹರ್ಲೀನ್ ಡಿಯೋಲ್, ಆಶ್ಲೀಗ್ ಗಾರ್ಡ್ನರ್, ದಯಾಲನ್ ಹೇಮಲತಾ, ಅನ್ನಾಬೆಲ್ ಸದರ್ಲ್ಯಾಂಡ್, ಸ್ನೇಹ ರಾಣಾ (ನಾಯಕಿ), ಕಿಮ್ ಗಾರ್ತ್, ಸುಷ್ಮಾ ವರ್ಮಾ(ವಿಕೆಟ್ ಕೀಪರ್), ಮಾನ್ಸಿ ಜೋಶಿ, ತನುಜಾ ಕನ್ವರ್, ಲಾರಾ ವೊಲ್ವಾರ್ಡ್ಟ್, ಜಾರ್ಜಿಯಾ ವಾರೆಹ್ಯಾಮ್ ಪಟೇಲ್, ಅಶ್ವನಿ ಕುಮಾರಿ, ಹರ್ಲಿ ಗಾಲಾ, ಶಬ್ನಮ್ ಎಂಡಿ ಶಕಿಲ್, ಪರುಣಿಕಾ ಸಿಸೋಡಿಯಾ.