IND vs AUS: ಭಾರತ- ಆಸೀಸ್ ಕಾಳಗಕ್ಕೆ ಕ್ಷಣಗಣನೆ; ಪಂದ್ಯದ ನೇರ ಪ್ರಸಾರ ಯಾವ ಚಾನೆಲ್​ನಲ್ಲಿ ಎಷ್ಟು ಗಂಟೆಗೆ ಆರಂಭ?

IND vs AUS Live Streaming When And Where To Watch India vs Australia 1st ODI in Kannada

ಆಸ್ಟ್ರೇಲಿಯಾ ವಿರುದ್ಧದ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯನ್ನು ಭಾರತ 2-1 ಅಂತರದಿಂದ ವಶಪಡಿಸಿಕೊಂಡಿದೆ. ಟೆಸ್ಟ್ ಸರಣಿಯಲ್ಲಿ ತಲೆಬಾಗಿದ ಹೊರತಾಗಿಯೂ ಏಕದಿನದಲ್ಲಿ ಭಾರತಕ್ಕೆ (India vs Australia) ಸವಾಲು ಹಾಕಲು ಕಾಂಗರೂಗಳು ಸಿದ್ಧರಾಗಿದ್ದಾರೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಇಂದಿನಿಂದ ಅಂದರೆ, ಮಾ. 17ರಿಂದ ಆರಂಭವಾಗಲಿದೆ. ಮೊದಲ ಪಂದ್ಯದಲ್ಲಿ ಎರಡೂ ತಂಡಗಳು ತಮ್ಮ ನಿಯಮಿತ ನಾಯಕರಿಲ್ಲದೆ ಕಣಕ್ಕಿಳಿಯುತ್ತಿವೆ. ಆಸ್ಟ್ರೇಲಿಯಾದ ನಾಯಕ ಪ್ಯಾಟ್ ಕಮಿನ್ಸ್ (Pat Cummins) ತನ್ನ ತಾಯಿಯ ಸಾವಿನ ಕಾರಣ ಏಕದಿನ ಸರಣಿಯಲ್ಲಿ ಆಡುತ್ತಿಲ್ಲ. ಇತ್ತ ವಿಶ್ವಕಪ್ ವಿಜೇತ ಸ್ಟೇಡಿಯಂ ವಾಂಖೆಡೆಯಲ್ಲಿ ನಡೆಯಲಿರುವ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ (Rohit Sharma) ಆಡುವುದಿಲ್ಲ.

ವೈಯಕ್ತಿಕ ಕಾರಣಗಳಿಂದ ರೋಹಿತ್ ಮೊದಲ ಪಂದ್ಯದಿಂದ ದೂರ ಉಳಿದಿದ್ದು, ಎರಡನೇ ಪಂದ್ಯದಿಂದ ತಂಡವನ್ನು ಸೇರಿಕೊಳ್ಳಲಿದ್ದಾರೆ. ಹಾರ್ದಿಕ್ ಪಾಂಡ್ಯ ಅವರ ಅನುಪಸ್ಥಿತಿಯಲ್ಲಿ ಮೆನ್ ಇನ್ ಬ್ಲೂ ತಂಡವನ್ನು ಮುನ್ನಡೆಸಲಿದ್ದಾರೆ. ಹಾರ್ದಿಕ್ ಈ ಹಿಂದೆ ಟಿ20 ಸರಣಿಯನ್ನು ಮುನ್ನಡೆಸಿದ್ದರು. ಸ್ಟಾರ್ ಆಲ್ ರೌಂಡರ್ ರಾಷ್ಟ್ರೀಯ ತಂಡದ ಏಕದಿನ ಪಂದ್ಯದ ನಾಯಕತ್ವ ವಹಿಸುತ್ತಿರುವುದು ಇದೇ ಮೊದಲು.

IND vs AUS: ಮೊದಲ ಪಂದ್ಯಕ್ಕೆ 5+3+2+1 ಸೂತ್ರದೊಂದಿಗೆ ಕಣಕ್ಕಿಳಿಯುತ್ತಾ ಭಾರತ? ಹೀಗಿದೆ ಸಂಭಾವ್ಯ ತಂಡ

ಪಂದ್ಯದ ಬಗ್ಗೆ ಪೂರ್ಣ ಮಾಹಿತಿ ಇಲ್ಲಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯ ಯಾವಾಗ ನಡೆಯಲಿದೆ?

ಭಾರತ vs ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯ ಮಾರ್ಚ್ 17 ರಂದು ಅಂದರೆ ಶುಕ್ರವಾರ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಈ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ.

ಭಾರತ-ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯ ಯಾವಾಗ ಆರಂಭವಾಗುತ್ತದೆ?

ಪಂದ್ಯ ಮಧ್ಯಾಹ್ನ 1:30ಕ್ಕೆ ಆರಂಭವಾಗಲಿದ್ದು, ಟಾಸ್ 1 ಗಂಟೆಗೆ ನಡೆಯಲಿದೆ.

ಭಾರತ-ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯದ ಲೈವ್ ಸ್ಟ್ರೀಮಿಂಗ್ ಎಲ್ಲಿ ವೀಕ್ಷಿಸಬಹುದು?

ಪಂದ್ಯದ ಲೈವ್ ಸ್ಟ್ರೀಮಿಂಗ್ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಲಭ್ಯವಿರುತ್ತದೆ.

ಭಾರತ-ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯದ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು?

ಭಾರತ-ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯದ ನೇರ ಪ್ರಸಾರವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಲಭ್ಯವಿರುತ್ತದೆ. ಅಲ್ಲದೆ, ಡಿಡಿ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೀವು ಪಂದ್ಯದ ನೇರ ಪ್ರಸಾರವನ್ನು ವೀಕ್ಷಿಸಬಹುದು.

ಏಕದಿನ ಸರಣಿಗೆ ಟೀಂ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್ ಮತ್ತು ಜಯದೇವ್ ಉನದ್ಕಟ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

source https://tv9kannada.com/sports/cricket-news/ind-vs-aus-live-streaming-when-and-where-to-watch-india-vs-australia-1st-odi-in-kannada-psr-au14-537539.html

Leave a Reply

Your email address will not be published. Required fields are marked *