IND vs AUS: ಆಸೀಸ್ ತಂಡದಲ್ಲಿ ದಿಡೀರ್ ಬದಲಾವಣೆ; ಆಡಲು ಬಂದ ಆಟಗಾರ ಹೋಟೆಲ್​ಗೆ ವಾಪಸ್

IND vs AUS 1st odi Alex Carey sick and gone team hotel Josh Inglis replace in the team

ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್- ಗವಾಸ್ಕರ್ ಟ್ರೋಫಿಯ (Border Gavaskar Trophy) ಟೆಸ್ಟ್ ಸರಣಿಯಲ್ಲಿ ಭರ್ಜರಿ ಪ್ರದರ್ಶನ ತೋರಿದ್ದ ಭಾರತ (India vs Australia) 2-1 ಅಂಕಗಳ ಅಂತರದಿಂದ ಗೆದ್ದು ಟ್ರೋಫಿಯನ್ನು ತನ್ನಲ್ಲೇ ಉಳಿಸಿಕೊಂಡಿತು. ಇದೀಗ ಟೆಸ್ಟ್ ಸರಣಿ ಬಳಿಕ ಉಭಯ ತಂಡಗಳು ಏಕದಿನ ಸರಣಿ ಆಡುತ್ತಿದ್ದು, ಇಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ (Wankhede Stadium) ಮೊದಲ ಏಕದಿನ ಪಂದ್ಯ ಆರಂಭವಾಗಿದೆ. ಆದರೆ ಪಂದ್ಯದ ಟಾಸ್​ವರೆಗೂ ಸರ್ವಸನ್ನದ್ಧವಾಗಿದ್ದ ಆಸೀಸ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಕೆಲವು ನಿಮಿಷಗಳ ಹಿಂದೆ ತಂಡದಲ್ಲಿ ಸ್ಥಾನ ಪಡೆದಿದ್ದ ಆಸ್ಟ್ರೇಲಿಯಾದ ವಿಕೆಟ್‌ಕೀಪರ್ (Wicketkeeper) ಪಂದ್ಯದಿಂದ ಹೊರಗುಳಿದಿದ್ದಾರೆ. ಆಸ್ಟ್ರೇಲಿಯಾ ತಂಡದಲ್ಲಿ ಕೊನೆಯ ಕ್ಷಣದ ಬದಲಾವಣೆ ಕಂಡು ಎಲ್ಲರೂ ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಕೊನೆಯ ಕ್ಷಣದಲ್ಲಿ ಬದಲಾವಣೆ ಮಾಡಿದ ಆಸ್ಟ್ರೇಲಿಯಾ ತಂಡ ಜೋಶ್ ಇಂಗ್ಲಿಸ್​ ಅವರನ್ನು ತಂಡಕ್ಕೆ ಸೇರಿಸಿಕೊಂಡಿತು. ವಾಸ್ತವವಾಗಿ ತಂಡದ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಅಲೆಕ್ಸ್ ಕ್ಯಾರಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಅನಾರೋಗ್ಯದ ಕಾರಣ ಅವರು ಟಾಸ್‌ಗೆ ಸ್ವಲ್ಪ ಮೊದಲು ಹೋಟೆಲ್‌ಗೆ ವಾಪಸ್ಸಾಗಿದ್ದಾರೆ.

IND vs AUS: ಟಾಸ್ ಗೆದ್ದ ಪಾಂಡ್ಯ, ರಾಹುಲ್​ಗೆ ಅವಕಾಶ; ಹೀಗಿದೆ ಭಾರತ ತಂಡ

ಅಲೆಕ್ಸ್ ಕ್ಯಾರಿ ಬದಲು ಇಂಗ್ಲಿಸ್ ಆಯ್ಕೆ

ಕ್ಯಾರಿ ಹೋಟೆಲ್‌ಗೆ ಮರಳಿದ ನಂತರ, ಕೊನೆಯ ನಿಮಿಷದಲ್ಲಿ ತಂಡಕ್ಕೆ ಜೋಶ್ ಇಂಗ್ಲಿಸ್ ಅವರನ್ನು ಆಯ್ಕೆ ಮಾಡಲಾಗಿದೆ. ಕ್ಯಾರಿಯ ಹೊರತಾಗಿ ಡೇವಿಡ್ ವಾರ್ನರ್ ಕೂಡ ಮೊದಲ ಏಕದಿನ ಪಂದ್ಯದಿಂದ ಹೊರಗುಳಿದಿದ್ದಾರೆ. ವಾರ್ನರ್ ಸಂಪೂರ್ಣವಾಗಿ ಫಿಟ್ ಆಗಿಲ್ಲದಿರುವುದರಿಂದ ಅವರ ಸ್ಥಾನದಲ್ಲಿ ಮಿಚೆಲ್ ಮಾರ್ಷ್ ಮೊದಲ ಏಕದಿನ ಪಂದ್ಯದಲ್ಲಿ ಓಪನಿಂಗ್ ಮಾಡಿದರು.

6 ತಿಂಗಳ ನಂತರ ಜೋಶ್ ಎಂಟ್ರಿ

ಜೋಶ್ ಇಂಗ್ಲಿಸ್ 6 ತಿಂಗಳ ನಂತರ ಆಸ್ಟ್ರೇಲಿಯಾದ ಏಕದಿನ ತಂಡಕ್ಕೆ ಮರಳಿದ್ದಾರೆ. ಆಸ್ಟ್ರೇಲಿಯಾ ಪರ ಇದು ಅವರ ಮೂರನೇ ಏಕದಿನ ಪಂದ್ಯವಾಗಿದೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಕೊನೆಯ ಏಕದಿನ ಪಂದ್ಯವನ್ನು ಆಡಿದ್ದ ಜೋಶ್, ಎರಡೂ ಆರಂಭಿಕ ಏಕದಿನ ಪಂದ್ಯಗಳಲ್ಲಿ ಸಂಪೂರ್ಣ ವಿಫಲರಾಗಿದ್ದರು. ಹೀಗಾಗಿ ಅವರನ್ನು ಆ ಬಳಿಕ ತಂಡದಿಂದ ಕೈಬಿಡಲಾಗಿತ್ತು.

ಆಸ್ಟ್ರೇಲಿಯಾ ತಂಡ

ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಸ್ಟೀವ್ ಸ್ಮಿತ್ (ನಾಯಕ), ಮಾರ್ನಸ್ ಲಬುಶೇನ್, ಜೋಶ್ ಇಂಗ್ಲಿಸ್, ಕ್ಯಾಮೆರಾನ್ ಗ್ರೀನ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಸೀನ್ ಅಬಾಟ್, ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ

ಭಾರತ ತಂಡ

ಶುಭ್​ಮನ್ ಗಿಲ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮದ್ ಶಮಿ, ಮೊಹಮದ್ ಸಿರಾಜ್,ಕುಲ್ದೀಪ್ ಯಾದವ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

source https://tv9kannada.com/sports/cricket-news/ind-vs-aus-1st-odi-alex-carey-sick-and-gone-team-hotel-josh-inglis-replace-in-the-team-psr-au14-538046.html

Leave a Reply

Your email address will not be published. Required fields are marked *