KL Rahul & Athiya Shetty Welcome Baby Girl: ಟೀಂ ಇಂಡಿಯಾ ಕ್ರಿಕೆಟಿಗ ಕೆ.ಎಲ್. ರಾಹುಲ್ ಮತ್ತು ಬಾಲಿವುಡ್ ನಟಿ ಅಥಿಯಾ ಶೆಟ್ಟಿ ದಂಪತಿಗಳು ಹೆಣ್ಣು ಮಗುವಿಗೆ ಪೋಷಕರಾಗಿದ್ದಾರೆ. ಅಥಿಯಾ ಶೆಟ್ಟಿ ಈ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ರಾಹುಲ್ ಐಪಿಎಲ್ ನಲ್ಲಿ ಆಡುತ್ತಿದ್ದರೂ, ತಮ್ಮ ಮಗುವಿನ ನಿರೀಕ್ಷೆಯಿಂದಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ತೊರೆದಿದ್ದರು. ಈಗ ಅವರ ಮನೆಗೆ ಹೊಸ ಸದಸ್ಯೆಯ ಆಗಮನವಾಗಿದೆ.

ಟೀಂ ಇಂಡಿಯಾ ಕ್ರಿಕೆಟಿಗ ಹಾಗೂ ಕನ್ನಡಿಗ ಕೆಎಲ್ ರಾಹುಲ್ ಹಾಗೂ ಬಾಲಿವುಡ್ ನಟಿ ಅಥಿಯಾ ಶೆಟ್ಟಿ ದಂಪತಿಗಳು ಹೆಣ್ಣು ಮಗುವಿಗೆ ಪೋಷಕರಾಗಿದ್ದಾರೆ. ಸ್ವತಃ ಈ ವಿಚಾರವನ್ನು ಅಥಿಯಾ ಶೆಟ್ಟಿ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಮಾಹಿತಿ ನೀಡಿದ್ದಾರೆ. ವಾಸ್ತವವಾಗಿ ರಾಹುಲ್ ಐಪಿಎಲ್ಗಾಗಿ ಕೆಲವು ದಿನಗಳ ಹಿಂದೆ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೇರಿಕೊಂಡಿದ್ದರು. ಆದರೆ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದ ರಾಹುಲ್ ಭಾನುವಾರವಷ್ಟೇ ಡೆಲ್ಲಿ ತಂಡವನ್ನು ತೊರೆದು ಮನೆಗೆ ವಾಪಸ್ಸಾಗಿದ್ದರು. ಇದೀಗ ಈ ದಂಪತಿಗಳ ಮನೆಗೆ ಮಹಾಲಕ್ಷ್ಮೀಯ ಆಗಮನವಾಗಿದೆ ಎಂಬ ಸುದ್ದಿ ಹೊರಬಿದ್ದಿದೆ.
Source : TV 9 Kannada