ಚಿತ್ರದುರ್ಗ:ಜೂ.20.
ವರದಿ ಮತ್ತು ಫೋಟೋ ಕೃಪೆ,ರವಿ ಕೆ.ಅಂಬೇಕರ್
ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಚಿತ್ರದುರ್ಗ ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆಯುಷ್ ಇಲಾಖೆ ಚಿತ್ರದುರ್ಗ ಇವರ ಜಂಟಿ ಆಶ್ರಯದಲ್ಲಿ ಇಂದು ದಿನಾಂಕ 20/06/2026 ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ‘ಯೋಗ ಜಾಥ’ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು.
ಹಸಿರು ಬಾವುಟ ಪ್ರದರ್ಶಿಸುವುದರೊಂದಿಗೆ ಚಾಲನೆ.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಅಪರ ಜಿಲ್ಲಾಧಿಕಾರಿಗಳಾದ ಶ್ರೀ ಕುಮಾರಸ್ವಾಮಿ ಅವರು ಜಾತಕ್ಕೆ ಹಸಿರು ಬಾವುಟ ಪ್ರದರ್ಶಿಸುವ ಮೂಲಕ ಅಧಿಕೃತವಾಗಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಯೋಗದ ಪಾತ್ರ ದೊಡ್ಡದಾಗಿದ್ದು, ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ರೂಢಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಯೋಗದ ಮಹತ್ವದ ಕುರಿತು ಜಾಗೃತಿಜಿಲ್ಲಾ ಆಯುಷ್ ಅಧಿಕಾರಿಗಳಾದ ಡಾ. ಚಂದ್ರಕಾಂತ್ ನಾಗಸಮುದ್ರ ಅವರು ಅಂತರರಾಷ್ಟ್ರೀಯ ಯೋಗ ದಿನದ ಮಹತ್ವ ಹಾಗೂ ದೈಹಿಕ-ಮಾನಸಿಕ ಆರೋಗ್ಯದ ಮೇಲೆ ಯೋಗ ಬೀರಬಹುದಾದ ಸಕಾರಾತ್ಮಕ ಪ್ರಭಾವಗಳ ಕುರಿತು ಮಾತನಾಡಿದರು. ಯೋಗವು ಕೇವಲ ವ್ಯಾಯಾಮವಲ್ಲ, ಅದು ಜೀವನ ನಡೆಸುವ ಅತ್ಯುತ್ತಮ ಪದ್ಧತಿಯಾಗಿದೆ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.
ಕಾರ್ಯಕ್ರಮದ ಆರಂಭದಲ್ಲಿ ಡಾ. ನಾರದಮುನಿ ಅವರು ಪ್ರಸ್ತಾವಿಕ ನುಡಿಗಳನ್ನು ಆಡಿ, ಕಾರ್ಯಕ್ರಮದ ಉದ್ದೇಶ ಮತ್ತು ಉಪಯೋಗಗಳನ್ನು ತಿಳಿಸಿದರು.
500ಕ್ಕೂ ಹೆಚ್ಚು ಜನರ ಭಾಗಿಈ ಬೃಹತ್ ಯೋಗ ಜಾತ ಕಾರ್ಯಕ್ರಮದಲ್ಲಿ ಅಮೃತ ಆಯುರ್ವೇದ ವೈದ್ಯಕೀಯ ಕಾಲೇಜಿನ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು, ವಿವಿಧ ಯೋಗ ಸಂಸ್ಥೆಗಳ ಹಾಗೂ ಭಾರತೀಯ ಯೋಗ ಶಿಕ್ಷಣ ಸಂಸ್ಥೆ ಚಿತ್ರದುರ್ಗ, ಶ್ರೀ ಪತಂಜಲಿ ಯೋಗ ಸಂಸ್ಥೆ, ಮಯೂರ ಯೋಗ ಕ್ರೀಡಾ ಸಂಸ್ಥೆ, ಸೇರಿದಂತೆ ಹಲವಾರು ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸದಸ್ಯರು ಉತ್ಸಾಹದಿಂದ ಪಾಲ್ಗೊಂಡಿದ್ದರು. ಆಯುಷ್ ಇಲಾಖೆಯ ಎಲ್ಲಾ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳು ಸೇರಿದಂತೆ ಒಟ್ಟು 500ಕ್ಕೂ ಹೆಚ್ಚು ಜನ ಜಾತದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಿಂದ ಪ್ರಾರಂಭಗೊಂಡ ಜಾಥಾವು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಜಾಥವು ಶ್ರೀ ಮುರುಘರಾಜೇಂದ್ರ ಕ್ರೀಡಾಂಗಣ, ಸರ್ಕಾರಿ ವಿಜ್ಞಾನ ಕಾಲೇಜು ಇಲ್ಲಿ ಮುಕ್ತಾಯಗೊಂಡಿತು.
Follow the ಸಮಗ್ರ ಸುದ್ದಿ Telegram Channel: https://t.me/SamagraSuddi
ಸಮಗ್ರ ಸುದ್ದಿ channel on WhatsApp:
https://whatsapp.com/channel/0029VbDbOsBD8SE2H0L3d40j
