ಭದ್ರಾ ಮೇಲ್ದಂಡೆ ಯೋಜನೆ |ಜಿಲ್ಲಾ ಉಸ್ತುವಾರಿ ಸಚಿವರಿಂದ ಮುಖ್ಯಮಂತ್ರಿಗಳಿಗೆ ಪತ್ರ.

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಚಿತ್ರದುರ್ಗ ಫೆ. 24 : ಮಧ್ಯ ಕರ್ನಾಟಕದ ಕನಸಿನ ಯೋಜನೆಯಾದ ಈ ಭದ್ರಾ ಮೇಲ್ದಂಡೆ ಯೋಜನೆಯಡಿ ಬರುವ ಚಿತ್ರದುರ್ಗ ಶಾಖಾ ಕಾಲುವೆ ಕಾಮಗಾರಿಯನ್ನು ಅಕ್ಟೋಬರ್-2025 ರೊಗಳಗೆ ಪೂರ್ಣಗೊಳಿಸುವ ಗುರಿ ನಿಗಧಿಪಡಿಸಿಕೊಳ್ಳಲಾಗಿದ್ದು, ಈ ಯೋಜನೆಯನ್ನು
ಕಾಂಗ್ರೆಸ್ ಸರ್ಕಾರದ ಅವಧಿಯೊಳಗೆ ಪೂರ್ಣಗೊಳಿಸಲು ಅನುವಾಗುವಂತೆ ಈ ಬಾರಿಯ 2025-26ನೇ ಸಾಲಿನ ಆಯವ್ಯಯದಲ್ಲಿ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಗೆ ರೂ.3000.00 ಕೋಟಿಗಳ ಅನುದಾನ ಒದಗಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ
ಸಿದ್ದರಾಮಯ್ಯ ರವರಿಗೆ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಪತ್ರವನ್ನು ಬರೆದಿದ್ದಾರೆ.

ಈ ಬಗ್ಗೆ ಸಚಿವರಿಂದ ಮುಖ್ಯಮಂತ್ರಿಗಳಿಗೆ ಬರೆದ ಪತ್ರದ ಸಾರಾಂಶ ಈ ರೀತಿಯಿದೆ ಭದ್ರಾ ಮೇಲ್ದಂಡೆ ಯೋಜನೆ ಮಧ್ಯ ಕರ್ನಾಟಕದ ಬರಪೀಡಿತ ಪ್ರದೇಶಗಳಾದ ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ ಹಾಗೂ ತುಮಕೂರು ಜಿಲ್ಲೆಯಲ್ಲಿನ 2,25,515 ಹೆಕ್ಟರ್ ಭೂ ಪ್ರದೇಶಕ್ಕೆ ಹನಿ ನೀರಾವರಿ ಪದ್ಧತಿಯಲ್ಲಿ ನೀರಾವರಿ ಸೌಲಭ್ಯ ಹಾಗೂ ಈ ಜಿಲ್ಲೆಗಳ ವ್ಯಾಪ್ತಿಯಲ್ಲಿನ 367 ಕೆರೆಗಳನ್ನು ತುಂಬಿಸುವ ಮಹತ್ವಾಕಾಂಕ್ಷೆ ಯೋಜನೆಯಾಗಿದೆ. ಸದರಿ ಯೋಜನೆಯ ಅಂದಾಜು ರೂ. 21,473.67 ಕೋಟಿಗಳ ಪರಿಷ್ಕೃತ
ಯೋಜನಾ ವರದಿಗೆ ಸರ್ಕಾರದಿಂದ ಆಡಳಿತಾತ್ಮಕ ಅನುಮೋದನೆ ನೀಡಲಾಗಿದ್ದು, ಈ ಯೋಜನೆಗೆ 2024-25ನೇ ಸಾಲಿನ
ಆಯವ್ಯಯದಲ್ಲಿ ರೂ. 1250.00 ಕೋಟಿಗಳ ಅನುದಾನ ಘೋಷಣೆ ಮಾಡಲಾಗಿದ್ದು, ಈವರೆಗೆ ರೂ.750.00 ಕೋಟಿಗಳ ಅನುದಾನ
ಬಿಡುಗಡೆ ಮಾಡಲಾಗಿರುತ್ತದೆ. ಪ್ರಸ್ತುತ ಭದ್ರಾ ಮೇಲ್ದಂಡೆ ಯೋಜನೆ ಪೂರ್ಣ ಪ್ರಮಾಣದಲ್ಲಿ ಫಲಪ್ರದವಾಗಬೇಕಾದಲ್ಲಿ ಹಾಗೂ
ಹಂಚಿಕೆಯಾದ ನೀರನ್ನು ಪೂರ್ಣ ಪ್ರಮಾಣದಲ್ಲಿ ಪಡೆಯುವ ನಿಟ್ಟಿನಲ್ಲಿ ತುಂಗಾ ನದಿಯಿಂದ ಲಿಫ್ಟ್ ಮೂಲಕ ನೀರನ್ನು ಪಡೆಯುವ
ಒಂದನೇ ಹಂತದ ಕಾಮಗಾರಿಗೆ ವೇಗದ ಚಾಲನೆ ನೀಡಬೇಕಾಗಿರುತ್ತದೆ. ಅಲ್ಲದೇ ಈ ಯೋಜನೆ ವ್ಯಾಪ್ತಿಯಲ್ಲಿ ಬರುವ ಕೆರೆಗಳಿಗೆ
ನೀರು ತುಂಬಿಸುವ ಕಾಮಗಾರಿಗಳನ್ನು ಸಹ ಕೈಗೊಳ್ಳಬೇಕಾಗಿರುತ್ತದೆ.

ಕೇಂದ್ರ ಪುರಸ್ಕೃತ ಯೋಜನೆಯಾದ ಈ ಕಾಮಗಾರಿಗೆ ಈವರೆಗೂ ಕೇಂದ್ರ ಸರ್ಕಾರದಿಂದ ಧನಸಹಾಯ ಬಿಡುಗಡೆಯಾಗದೇ
ಇರುವುದರಿಂದ ಕಾಮಗಾರಿಗಳು ನಿರೀಕ್ಷಿತ ವೇಗದಲ್ಲಿ ಪ್ರಗತಿ ಸಾಧಿಸಲು ಸಾಧ್ಯವಾಗುತ್ತಿಲ್ಲ. ಮಧ್ಯ ಕರ್ನಾಟಕದ ಕನಸಿನ
ಯೋಜನೆಯಾದ ಈ ಭದ್ರಾ ಮೇಲ್ದಂಡೆ ಯೋಜನೆಯಡಿ ಬರುವ ಚಿತ್ರದುರ್ಗ ಶಾಖಾ ಕಾಲುವೆ ಕಾಮಗಾರಿಯನ್ನು ಅಕ್ಟೋಬರ್-
2025ರೊಗಳಗೆ ಪೂರ್ಣಗೊಳಿಸುವ ಗುರಿ ನಿಗಧಿಪಡಿಸಿ ಕೊಳ್ಳಲಾಗಿದ್ದು, ಈ ಯೋಜನೆಯನ್ನು ಕಾಂಗ್ರೆಸ್ ಸರ್ಕಾರದ ಅವಧಿಯೊಳಗೆ
ಪೂರ್ಣ ಗೊಳಿಸಲು ಅನುವಾಗು ವಂತೆ ತಾವುಗಳು ದಯಮಾಡಿ ಈ ಬಾರಿಯ 2025-26ನೇ ಸಾಲಿನ ಆಯವ್ಯಯದಲ್ಲಿ ಭದ್ರಾ
ಮೇಲ್ದಂಡೆ ಯೋಜನೆ ಕಾಮಗಾರಿಗೆ ರೂ.3000.00 ಕೋಟಿಗಳ ಅನುದಾನ ಒದಗಿಸಲು ಮನವಿ ಮಾಡಲಾಗಿದೆ ಎಂದು ಸಚಿವರು ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *