ಕಾಂಗ್ರೆಸ್ ಸರ್ಕಾರಕ್ಕೆ ಎರಡು ವರ್ಷ ; ಹೊಸಪೇಟೆಯಲ್ಲಿ ಮೇ 20 ರಂದು ಬೃಹತ್ ಸಮಾವೇಶ ಒಂದು ಲಕ್ಷ ಜನರಿಗೆ ಹಕ್ಕುಪತ್ರ ವಿತರಣೆ : 2 ಲಕ್ಷ ಜನ ಸೇರುವ ನಿರೀಕ್ಷೆ.

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ಮೇ. 16 : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ವಿಜಯನಗರದ ಹೊಸಪೇಟೆಯಲ್ಲಿ ಮೇ 20 ರಂದು ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಯೂರ್ ಜಯಕುಮಾರ್ ತಿಳಿಸಿದ್ದಾರೆ.
ಚಿತ್ರದುರ್ಗ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರ ಅಧಿಕಾರಕ್ಕೆ ಬಂದು ಎರಡು
ವರ್ಷ ಯಶಸ್ವಿಯಾಗಿ ಪೂರ್ಣಗೊಂಡ ಸಂದರ್ಭದಲ್ಲಿ ಹೊಸಪೇಟೆಯಲ್ಲಿ ಆಯೋಜಿಸಿರುವ ಸಾಧನಾ ಸಮಾವೇಶದ ಕುರಿತು
ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ಸಮಾವೇಶಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ,
ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ನಾಯಕರಿಗೆ ಆಹ್ವಾನ ನೀಡಿದ್ದು, ಅವರೆಲ್ಲರೂ
ಭಾಗವಹಿಸುತ್ತಿದ್ದಾರೆ. ಇತಿಹಾಸದಲ್ಲಿ ಅಚ್ಚಳಿಯದಂತೆ ಉಳಿಯುವ ಸಮಾವೇಶವನ್ನಾಗಿ ಮಾಡಲು ಸರ್ಕಾರ ಮತ್ತು ಕಾಂಗ್ರೆಸ್ ಶ್ರಮ
ವಹಿಸಿ ಕಾರ್ಯ ನಿರ್ವಹಿಸಲಾಗುತ್ತಿದೆ ಸಮಾವೇಶದ ಯಶಸ್ವಿಗಾಗಿ ಸಚಿವರಾದ ಕೃಷ್ಣಭೈರೇಗೌಡ, ಸತೀಶ್ ಜಾರಕಿಹೊಳ್ಳಿ,
ಡಾ.ಶರಣಪ್ರಕಾಶ್ ಪಾಟೀಲ್, ಡಾ.ಹೆಚ್.ಸಿ. ಮಹದೇವಪ್ಪ, ಎನ್.ಎಸ್.ಬೋಸರಾಜ್, ಪ್ರಿಯಾಂಕ್ ಖರ್ಗೆ,
ಎಸ್.ಎಸ್.ಮಲ್ಲಿಕಾರ್ಜುನ್, ಮಂಕಾಳ ವೈದ್ಯ, ಶಿವಾನಂದ ಪಾಟೀಲ್, ಶಿವರಾಜ ತಂಗಡಗಿ, ಕೆ.ಎನ್. ರಾಜಣ್ಣ, ಎನ್.
ಚಲುವರಾಯಸ್ವಾಮಿ, ಲಕ್ಷ್ಮೀ ಹೆಬ್ಬಾಳ್ಳರ್, ಈಶ್ವರ್ ಖಂಡ್ರೆ, ಎಚ್.ಕೆ. ಪಾಟೀಲ್, ಎಂ.ಬಿ.ಪಾಟೀಲ್, ಮಧು ಬಂಗಾರಪ್ಪ,
ಶರಣಬಸಪ್ಪ ದರ್ಶನಾಪೂರ್, ದಿನೇಶ್ ಗುಂಡೂರಾವ್, ಸಂತೋಷ್ ಲಾಡ್ ಸೇರಿದಂತೆ 64 ಹಿರಿಯ ಶಾಸಕರನ್ನೊಳಗೊಂಡ
ಸಮಿತಿ ರಚಿಸಿ ಅವರಿಗೆ ನಿರ್ದಿಷ್ಟ ಹೊಣೆಗಾರಿಕೆ ನೀಡಲಾಗಿದೆ.
ಸರ್ಕಾರ ಎರಡು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ವಿವಿಧ ತಾಂಡಾಗಳಲ್ಲಿ ವಾಸಿಸುವ ಒಂದು ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ
ನೀಡಲು ಸಜ್ಜಾಗಿದೆ. ಹಟ್ಟಿ, ಹಾಡಿ, ತಾಂಡಾ, ಪಾಳ್ಯ, ಮಜುರೆ ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಿ ಅಲ್ಲಿ
ವಾಸಿಸುತ್ತಿರುವ ಅಷ್ಟೂ ಮಂದಿಗೆ ಕಂಪ್ಯೂಟರೈಸ್ಟ್ ಇತಿಹಾಸದಲ್ಲಿ ಅಚ್ಚಳಿಯದಂತೆ ಉಳಿಯುವ ಸಮಾವೇಶವನ್ನಾಗಿ ಮಾಡಲು
ಶ್ರಮ ನೋಂದಾಯಿತ ದಾಖಲೆಗಳನ್ನು ನೀಡಲಿದ್ದಾರೆ. ಸಚಿವರು ಮತ್ತು ಶಾಸಕರು ಇಂತಹ ಜನವಸತಿಗಳಿಗೆ ತೆರಳಿ ಸರ್ಕಾರ
ಕೈಗೊಂಡಿರುವ ನಿರ್ಧಾರವನ್ನು ತಲುಪಿಸಿ ಅವರಿಗೆ ಅಧಿಕಾರಿಗಳಿಂದ ದಾಖಲೆಗಳು ತಲುಪಿವೆಯೇ ಎಂದು ಪರಿಶೀಲನೆ ಮಾಡಿ
ಅವರು ಸಮಾವೇಶಕ್ಕೆ ಬರುವಂತೆ ನೋಡಿಕೊಳ್ಳುವ ಹೊಣೆಗಾರಿಕೆ ನೀಡಲಾಗಿದೆ. ಜನವಸತಿಗಳಿಂದ ಬರುವ ಈ ಫಲಾನುಭವಿಗಳ
ಜೊತೆಗೆ ಆಯ್ದ ಕೆಲವರಿಗೆ ರಾಹುಲ್ ಗಾಂಧಿ ಮತ್ತು ಖರ್ಗೆ ಅವರು ಹಕ್ಕು ಪತ್ರ ವಿತರಿಸಲಿದ್ದಾರೆ.
ಸಾಧನಾ ಸಮಾವೇಶ ಸರ್ಕಾರಿ ಕಾರ್ಯಕ್ರಮವಾಗಿದ್ದು, ಸಮಾವೇಶಕ್ಕೆ ಫಲಾನುಭವಿಗಳನ್ನು ಕರೆ ತರುವಂತೆ ಜಿಲ್ಲಾಡಳಿತಕ್ಕೆ
ಸೂಚನೆ ನೀಡಿದ್ದು, ಅದರಂತೆ ಪಕ್ಷದ ಕಾರ್ಯಕರ್ತರು ಪಾಲ್ಗೊಳ್ಳುವಂತೆ ಸಚಿವರು, ಶಾಸಕರು ವ್ಯವಸ್ಥೆ ಮಾಡಲಿದ್ದಾರೆ
ಜಿಲ್ಲೆಯಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸುವಂತೆ ಮನವಿ ಮಾಡಿದರು. ಚಿತ್ರದುರ್ಗ ಜಿಲ್ಲೆಯಲ್ಲಿನ ಆರು
ವಿಧಾನಸಭಾ ಕ್ಷೇತ್ರಗಳ ಪೈಕಿ ಐದು ವಿಧಾನ ಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದು, ಸರ್ಕಾರದ ಎರಡು
ವರ್ಷಗಳ ಸಾಧನೆ ಏನು ಎಂಬುದನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕಾದ ಹೊಣೆ ಸಚಿವರು, ಶಾಸಕರು, ಮುಖಂಡರ
ಮೇಲಿದೆ ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆಗಳಿಗೆ ಪ್ರತಿ ಬಜೆಟ್‍ನಲ್ಲೂ 52 ಸಾವಿರ ಕೋಟಿ ರೂ. ಮೀಸಲಿಟ್ಟು
ಅನುಷ್ಠಾನಗೊಳಿಸಿದ್ದರ ಪರಿಣಾಮ ಒಂದು ಕೋಟಿ ಜನರು ಬಡತನ ರೇಖೆಗಿಂತ ಮೇಲೆ ಬಂದಿದ್ದಾರೆ. ಗ್ಯಾರಂಟಿ ಯೋಜನೆಗಳ
ಸಮರ್ಪಕ ಅನುಷ್ಠಾನದ ಜೊತೆಗೆ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳುವ ಮೂಲಕ ಪ್ರಗತಿಯತ್ತ ಕೊಂಡೊಯ್ಯಲಾಗುತ್ತಿದೆ
ಎಂದರು.
ಹೊಸಪೇಟೆಯಲ್ಲಿ ನಡೆಯುವ ಸರ್ಕಾರದ ಸಾಧನಾ ಸಮಾವೇಶದಲ್ಲಿ ಹಾಡಿ, ಹಟ್ಟಿ, ತಾಂಡಾ ಪ್ರದೇಶಗಳ ಒಂದು ಲಕ್ಷ ಜನರಿಗೆ
ಕಂದಾಯ ಇಲಾಖೆಯಿಂದ ಹಕ್ಕುಪತ್ರ ವಿತರಣೆ ಮಾಡಲಾಗುವುದು ಸರ್ಕಾರಿ ಜಾಗಗಳಲ್ಲಿ ನಿರ್ಮಾಣವಾಗಿರುವ ಜನ ವಸತಿ
ಪ್ರದೇಶಗಳಿಗೆ ಕಂದಾಯ ಗ್ರಾಮದ ಸ್ಥಾನಮಾನ ಸಿಗದ ಕಾರಣ ಅಲ್ಲಿಯ ಜನರಿಗೆ ವಿದ್ಯುತ್, ಕುಡಿಯುವ ನೀರು, ‘ರಸ್ತೆ, ಚರಂಡಿ
ಸೇರಿದಂತೆ ಯಾವುದೇ ಸವಲತ್ತುಗಳು ಸಿಗದೇ ವಂಚಿತವಾಗಿದ್ದವು. ಇದನ್ನು ಮನಗಂಡ ಸಿಎಂ ಸಿದ್ದರಾಮಯ್ಯ ಮೊದಲ
ಅವಧಿಯಲ್ಲಿ(2013-18)ಒತ್ತುವರಿಯಾಗಿದ್ದ ಅರಣ್ಯ ಭೂಮಿಯನ್ನು ತೆರವುಗೊಳಿಸಿ, ಕೋಟ್ಯಂತರ ಸಸಿಗಳನ್ನು ನೆಟ್ಟು ಪರಿಸರ ಮತ್ತು
ವನ್ಯಜೀವಿಗಳ ಸಂರಕ್ಷಣೆ ಮಾಡುತ್ತಿದ್ದೇವೆ ಮಾಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಇದೇ ಮೇ. 20
ರಂದು ಮಂಗಳವಾರ ಹೊಸಪೇಟೆಯಲ್ಲಿ ಸಾಧನಾ ಸಮಾವೇಶದಲ್ಲಿ ಎರಡು ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಚಿತ್ರದುರ್ಗ ಜಿಲ್ಲೆಯ
ಆರು ತಾಲ್ಲೂಕುಗಳಿಂದ ಸುಮಾರು 10 ಸಾವಿರ ಜನ ಭಾಗವಹಿಸುವ ನಿರೀಕ್ಷೆ ಇದೆ ಎಂದರು.
ಕಾರ್ಯಕ್ರಮದಲ್ಲಿ ಶಾಸಕರಾದ ಕೆ.ಸಿ.ವಿರೇಂದ್ರ ಪಪ್ಪಿ, ಮುರಳಿಧರ ಹಾಲಪ್ಪ, ಜಿಲ್ಲಾಧ್ಯಕ್ಷರಾದ ಎಂ.ಕೆ.ತಾಜ್ ಪೀರ್,
ಕಾರ್ಯಾದ್ಯಕ್ಷರಾದ ಹಾಲಸ್ವಾಮಿ, ಕೆಡಿಪಿ ಸದಸ್ಯ ನಾಗರಾಜ್, ಕೆಪಿಸಿಸಿಯ ಪ್ರಧಾನ ಕಾರ್ಯದರ್ಶಿ ಹನುಮಲಿ ಷಣ್ಮುಖಪ್ಪ, ಕೆಪಿಸಿಸಿ
ಪ್ರಧಾನ ಕಾರ್ಯದರ್ಶಿ ರಾಘವೇಂದ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ಮೈಲಾರಪ್ಪ, ವಿಧಾನ ಪರಿಷತ್ ಮಾಜಿ
ಸದಸ್ಯೆ ಶ್ರೀಮತಿ ಜಯಮ್ಮ, ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ಗೀತಾ ನಂದಿನಿಗೌಡ, ಸರ್ಕಾರದ ಗ್ಯಾರೆಂಟಿ ಪ್ರಾಧಿಕಾರದ
ಜಿಲ್ಲಾಧ್ಯಕ್ಷರಾದ ಶಿವಣ್ಣ, ಲಕ್ಷ್ಮೀಕಾಂತ, ಜಯ್ಯಣ್ಣ, ಮಧುಗೌಡ, ನಜ್ಮಾತಾಜ್, ಓಬಿಸಿ ಜಿಲ್ಲಾಧ್ಯಕ್ಷ ಎನ್,ಡಿ.ಕುಮಾರ್, ಯುವ
ಕಾಂಗ್ರೆಸ್ ಅಧ್ಯಕ್ಷ ಕಾರೇಹಳ್ಳಿ ಉಲ್ಲಾಸ್, ಮಹಡಿ ಶಿವಮೂರ್ತಿ, ಖುದ್ದುಸ್, ಪ್ರಕಾಶ್, ರಾಮನಾಯ್ಕ್, ಮುದಸಿರ್ ನವಾಜ್,
ಮಂಜುನಾಥ್, ಮುನೀರ ಮಕಂದರ್, ಮಹಬೂಬ್ ಖಾತೂನ್, ರಾಜಣ್ಣ, ಅಲ್ಲಾಭಕ್ಷಿ ಸೇರಿದಂತೆ ಇತರರು ಭಾಗವಹಿಸಿದ್ದರು.
Views: 0