ಚಿತ್ರದುರ್ಗ| ಅನುಪಮಾ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಅರ್ಥಪೂರ್ಣ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ.

ಚಿತ್ರದುರ್ಗ: ನಗರದ ಅನುಪಮಾ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.

ಈ ವಿಶೇಷ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ಶಿವಮ್ಮ ಸೋಮಶೇಖರ್ ಅವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀಮತಿ ಸುನೀತ ಭಾಸ್ಕರ್ ಅವರು ಉಪಸ್ಥಿತರಿದ್ದು ಶುಭಕೋರಿದರು.

ವೇದಿಕೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಾಲೆಯ ಪ್ರಾಚಾರ್ಯರಾದ ಸಂಪತ್ ಕುಮಾರ್ ಅವರು, “ಸಮಾಜದಲ್ಲಿ ಸ್ತ್ರೀಯರ ಸ್ಥಾನಮಾನ ಅತ್ಯಂತ ಉನ್ನತವಾದದ್ದು ಮತ್ತು ಮಹತ್ವದ್ದಾಗಿದೆ. ತಾಯಿಯ ಸ್ಥಾನವನ್ನು ತುಂಬಲು ಜಗತ್ತಿನಲ್ಲಿ ಬೇರೆ ಯಾರಿಂದಲೂ ಸಾಧ್ಯವಿಲ್ಲ. ಹಾಗಾಗಿ, ಸ್ತ್ರೀಯರಿಗೆ ತಕ್ಕ ಗೌರವವನ್ನು ಸಲ್ಲಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ,” ಎಂದು ಮಹಿಳೆಯರ ತ್ಯಾಗ ಮತ್ತು ಮಹತ್ವವನ್ನು ಗುಣಗಾನ ಮಾಡಿದರು.

ಮಹಿಳಾ ಸಿಬ್ಬಂದಿಗೆ ವಿಶೇಷ ಗೌರವ: ಮಹಿಳಾ ದಿನಾಚರಣೆಯ ಈ ಶುಭ ಸಂದರ್ಭದಲ್ಲಿ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್ಲಾ ಶಿಕ್ಷಕಿಯರಿಗೆ ಹಾಗೂ ಆಯಾಗಳಿಗೆ ಆಡಳಿತ ಮಂಡಳಿ ವತಿಯಿಂದ ವಿಶೇಷ ಉಡುಗೊರೆಗಳನ್ನು ನೀಡಿ ಗೌರವಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಎಸ್. ಭಾಸ್ಕರ್, ಕಾರ್ಯದರ್ಶಿ ಎಸ್.ಬಿ. ರಕ್ಷಣ್, ಉಪ ಪ್ರಾಚಾರ್ಯ ಪ್ರಫುಲ್ ಬಾರಿಕ್, ಮುಖ್ಯೋಪಾಧ್ಯಾಯ ವೆಂಕಟೇಶ್ ಹಾಗೂ ಸಂಯೋಜಕರಾದ ಬಸವರಾಜ್ ಮತ್ತು ಏಕಾಂತ್ ರೆಡ್ಡಿ ಅವರು ಭಾಗವಹಿಸಿದ್ದರು.

ಕಾರ್ಯಕ್ರಮದ ಯಶಸ್ಸಿಗೆ ಶಾಲೆಯ ಶಿಕ್ಷಕರಾದ ಮಾಲತೇಶ್, ಚಂದ್ರಶೇಖರ್ ಮುಂತಾದವರು ನೇತೃತ್ವ ವಹಿಸಿದ್ದರು.

Leave a Reply

Your email address will not be published. Required fields are marked *