ಕೆರೆಗೆ ಬಿದ್ದ ಇಬ್ಬರು ಮಕ್ಕಳನ್ನು ರಕ್ಷಿಸಿದ ತಾಯಿ ಈಜು ಬಾರದೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರು: ಕೆರೆಯಲ್ಲಿ ಮುಳುಗುತ್ತಿದ್ದ ತನ್ನ ಇಬ್ಬರು ಮಕ್ಕಳನ್ನು ಬದುಕಿಸಿ ಈಜು ಬಾರದೇ ತಾಯಿಯೊಬ್ಬಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ರಥಸಂದ್ರ ಗ್ರಾಮದ ಕೆರೆಯಲ್ಲಿ ಭಾನುವಾರ ನಡೆದಿದೆ.
ಮನು (30) ಮೃತಪಟ್ಟ ಮಹಿಳೆ.
ಸುದ್ದಿಯ ವಿವರ: ಮನು ತನ್ನ ಇಬ್ಬರು ಮಕ್ಕಳೊಂದಿಗೆ ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದರು. ದಡದಲ್ಲಿ ಆಟವಾಡುತ್ತಿದ್ದ ಮಕ್ಕಳು ಕೆರೆಗೆ ಜಾರಿ ಬಿದ್ದಿದ್ದಾರೆ. ಕಂಡ ತಾಯಿ ಕೆರೆಗೆ ಹಾರಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಿದ್ದಾರೆ. ಆದರೆ ಈಜು ಬರದೇ ಅವರು ಸಾವನ್ನಪ್ಪಿದ್ದಾರೆ. ಮಕ್ಕಳಿಗೆ ಶಿರಾ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶಿರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.