ಚಿತ್ರದುರ್ಗ ಸೆ. 4
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್‍ಗೌಡ ಹಾಗೂ ಕಾನೂನು ವಿಭಾಗದ ಅಧ್ಯಕ್ಷ ಶ್ರೀಧರ್
ಜಾದವ್‍ರವರ ಆದೇಶದಂತೆ ಜಿಲ್ಲಾ ಯುವ ಕಾಂಗ್ರೆಸ್ ಕಾನೂನು ವಿಭಾಗದ ಜಿಲ್ಲಾಧ್ಯಕ್ಷರನ್ನಾಗಿ ಪ್ರದೀಪ್ ಎಸ್. ಉಪಾಧ್ಯಕ್ಷರಾಗಿ
ಮೈಲಾರ ಎಂ.ಕೋಟಿ ಹಾಗೂ ಹೊಳಲ್ಕೆರೆ ತಾಲ್ಲೂಕು ಬಿ.ದುರ್ಗ ಹೋಬಳಿಯ ಹೆಚ್.ರಮೇಶ್ ಇವರನ್ನು ಜಿಲ್ಲಾ ಕಾಂಗ್ರೆಸ್ ಪ್ರಧಾನ
ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಮೂವರಿಗೂ ನೇಮಕಾತಿ ಪತ್ರಗಳನ್ನು
ವಿತರಿಸಿದರು.
ಈ ಸಂದರ್ಭzಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕಾರೇಹಳ್ಳಿ ಉಲ್ಲಾಸ್, ನ್ಯಾಯವಾದಿ ಎನ್.ಶಶಾಂಕ್, ಜಿಲ್ಲಾ ಕಾಂಗ್ರೆಸ್
ಉಪಾಧ್ಯಕ್ಷ ಎಸ್.ಎನ್.ರವಿಕುಮಾರ್, ಕರ್ನಾಟಕ ರಾಜ್ಯ ಟಿಪ್ಪುಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ರಾಜ್ಯಾಧ್ಯಕ್ಷ ಟಿಪ್ಪುಖಾಸಿಂ
ಆಲಿ, ತಿಪ್ಪೇಸ್ವಾಮಿ ಹಾಜರಿದ್ದರು.
Views: 12