
ವಿಜಯವಾಡ: ಆಂಧ್ರ ಪ್ರದೇಶದ ವಿಶಾಖಪಟ್ಟಣಂ ಸಮುದ್ರದಲ್ಲಿ ಗುರುವಾರ ಮೀನುಗಾರರ ಬಲೆಗೆ ಅಪರೂಪದ ಮೀನು ಸಿಕ್ಕಿದೆ. ಮೀನಿನ ವಿಚಿತ್ರ ರೂಪವನ್ನು ಕಂಡು ಒಂದು ಕ್ಷಣ ಮೀನುಗಾರರೇ ದಂಗಾಗಿದ್ದಾರೆ.
ಮೀನಿನ ಬಗ್ಗೆ ವಿಶಾಖಪಟ್ಟಣಂನ ಸಹಾಯಕ ಮೀನುಗಾರಿಕಾ ನಿರ್ದೇಶಕ ಡಾ. ಪಿ.ಶ್ರೀನಿವಾಸ್ ರಾವ್ ಮಾಹಿತಿ ನೀಡಿದ್ದು, ಇದು ಪಫ್ಫರ್ ಫಿಶ್ ಎಂದು ತಿಳಿಸಿದ್ದಾರೆ. ಆದರೆ, ಸ್ಥಳೀಯ ಮೀನುಗಾರರು ಇದನ್ನು ಸಮುದ್ರ ಕಪ್ಪೆ ಎಂದು ಭಾವಿಸಿದ್ದರು. ಈ ಮೀನು ಸಮುದ್ರದ ಆಳದಲ್ಲಿ ಅಲೆದಾಡುತ್ತವೆ. ಬಲೆಗೆ ಬಿದ್ದಾಗ ಅಥವಾ ಯಾರಾದರು ದಾಳಿ ಮಾಡಿದಂತಹ ಸಂದರ್ಭದಲ್ಲಿ ತಮ್ಮ ದೇಹವನ್ನು ಬಲೂನ್ ರೀತಿ ಮಾಡಿಕೊಳ್ಳುತ್ತವೆ. ಈ ಮೀನು ನೋಡಲು ಸ್ವಲ್ಪ ಮನುಷ್ಯನ ರೀತಿ ಕಾಣುತ್ತದೆ.
ಅಂದಹಾಗೆ ಈ ಪಫ್ಪರ್ ಫಿಶ್ ತುಂಬಾ ವಿಷಕಾರಿ ಮೀನು. ಇತರ ಸಮುದ್ರ ಪ್ರಭೇದಗಳಿಂದ ತನ್ನನ್ನು ರಕ್ಷಿಸಿಕೊಳ್ಳಲು, ಈ ಮೀನಿನ ಯಕೃತ್ತಿನಲ್ಲಿ ಶಕ್ತಿಯುತವಾದ ವಿಷ ಉತ್ಪಾದನೆಯಾಗುತ್ತದೆ. ಈ ವಿಷವು ಸೈನೈಡ್‌ಗಿಂತ 1,000 ಪಟ್ಟು ಹೆಚ್ಚು ಮಾರಕವಾಗಿದೆ. ಇದನ್ನು ಹೆಚ್ಚಾಗಿ ಜಪಾನ್ ಸೇವನೆ ಮಾಡುತ್ತಾರೆ.
ಕೆಲವು ತರಬೇತಿ ಪಡೆದ ಜಪಾನಿನ ಬಾಣಸಿಗರಿಗೆ ಮಾತ್ರ ಈ ಮೀನನ್ನು ಸೂಕ್ಷ್ಮವಾಗಿ ಬೇಯಿಸುವುದು ಹೇಗೆ ಎಂದು ತಿಳಿದಿದೆ ಎಂಬುದು ಗಮನಾರ್ಹ ಸಂಗತಿ. ಅಲ್ಲದೆ, ಈ ಮೀನು ಅಡುಗೆ ಮಾಡಲು ಲೈಸೆನ್ಸ್ ಸಹ ಪಡೆಯಬೇಕಿದೆ. ಈ ಮೀನು ಖಾದ್ಯ ತಿಂದು ಪ್ರತಿ ವರ್ಷ ನೂರಾರು ಜಪಾನಿಗರು ಸಾಯುತ್ತಾರೆ. (ಏಜೆನ್ಸೀಸ್)
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1