ಬೆಂಗಳೂರು: ಶೀಘ್ರದಲ್ಲಿ 4500ಕ್ಕೂ ಹುದ್ದೆಗಳಿಗೆ ಶೀಘ್ರದಲ್ಲಿ ಅರ್ಜಿ ಆಹ್ವಾನ ಮಾಡಲಾಗುವುದು ಅಂತ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ತಿಳಿಸಿದ್ದಾರೆ.
![](https://samagrasuddi.co.in/wp-content/uploads/2023/07/image-7.png)
ಅವರು ಇಂದು ಮೈಸೂರು ಅರಮನೆಗೆ ಭೇಟಿ ನೀಡಿದ ಸಮಯದಲ್ಲಿ ಮಾಧ್ಯಮದವರ ಜೊತೆಗೆ ಮಾತನಾಡುತ್ತ ಈ ಬಗ್ಗೆ ತಿಳಿಸಿದರು.
ಇದೇ ವೇಳೆ ಅವರು ಪೋಲಿಸರಿಗೆ ವಾರದ ರಜೆ ನೀಡಲು ಅಗತ್ಯ ಕ್ರಮವನ್ನು ಕೈಗೊಳ್ಳಲಾಗುವುದು ಇದರಿಂದ ಅವರಿಗೆ ಮಾನಸಿಕವಾಗಿ ವಿಶ್ರಾಂತಿ ಸಿಗುತ್ತದೆ. ಇದಲ್ಲದೇ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವವರಿಗೆ ಹೆಚ್ಚಿನ ಭತ್ಯೆ ನೀಡುವುದರ ಬಗ್ಗೆ ಶೀಘ್ರದಲ್ಲಿ ತೀರ್ಮಾನವನ್ನು ತೆಗೆದುಕೊಳ್ಳಾಗುವುದು ಅಂತ ತಿಳಿಸಿದರು. ಇದೇ ವೇಳೆ ಔರದರ್ಕರ್ ಅವರ ವರದಿಯನ್ನು ಸಂಪೂರ್ಣವಾಗಿ ಜಾರಿ ಮಾಡುವುದು ಸಾಧ್ಯವಾಗುವುದಿಲ್ಲ, ಈಗಾಗಲೇ ಭಾಗಶಃ ಜಾರಿ ಮಾಡಲಾಗಿದೆ ಅಂತ ಅವರು ತಿಳಿಸಿದರು.