ಚಿತ್ರದುರ್ಗ: ಗ್ಯಾಸ್ಟ್ರಿಕ್‌ನಿಂದ ಬಳಲುತ್ತಿದ್ದ ಯುವಕನೊಬ್ಬ ಚಿಕಿತ್ಸೆಗೆಂದು ಜಿಲ್ಲಾಸ್ಪತ್ರೆಗೆ ಹೋಗಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ನಯಾಜ್ (18) ಮೃತ ದುರ್ದೈವಿ. ಚಿತ್ರದುರ್ಗದ ಗೋಪಾಲಪುರದ ನಿವಾಸಿಯಾಗಿದ್ದಾನೆ. ಗ್ಯಾಸ್ಟ್ರಿಕ್ ಚಿಕಿತ್ಸೆಗೆಂದು ಜಿಲ್ಲಾಸ್ಪತ್ರೆಗೆ ಬಂದು ಸಾವನ್ನಪ್ಪಿದ್ದಾನೆ. ಮಗನ ಸಾವಿಗೆ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಪೋಷಕರು ಕಿಡಿಕಾರಿದ್ದಾರೆ.
ಗ್ಯಾಸ್ಟ್ರಿಕ್‌ನಿಂದಾಗಿ ಅನಾರೋಗ್ಯಕ್ಕೆ ತುತ್ತಾಗಿದ್ದ ನಯಾಜ್‌ನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದ. ಇತ್ತ ವೈದ್ಯರ ನಿರ್ಲಕ್ಷ್ಯದಿಂದಲೇ ಯುವಕ ಮೃತಪಟ್ಟಿದ್ದಾನೆ. ನಿನ್ನೆ ಶುಕ್ರವಾರ ನಯಾಜ್‌ನನ್ನು ಆಸ್ಪತ್ರೆಗೆ ದಾಖಲು ಮಾಡಿದಾಗ ಯಾವೊಬ್ಬ ವೈದ್ಯಾಧಿಕಾರಿಗಳೂ ಬಂದಿಲ್ಲ. ಹೀಗಾಗಿ ಸರಿಯಾದ ಚಿಕಿತ್ಸೆ ಸಿಗದೆ ಮೃತಪಟ್ಟಿದ್ದಾರೆಮ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ನನ್ನ ಮಗ ಸತ್ತು ಹೋದ, ನಾನೇನು ಮಾಡಲಿ ಎಂದು ನಯಾಜ್ ತಂದೆಯ ಅಸಹಾಯಕದ ಮಾತುಗಳನ್ನಾಡಿದರು. ಮಗನ ಸಾವಿಗೆ ನ್ಯಾಯ ಕೊಡಿಸಿ ಎಂದು ಅಂಗಲಾಚಿದರು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/Telegram: https://t.me/+E1ubNzdguQ5jN2Y1