
ಗ್ಯಾಂಗ್ಟಾಕ್: ಭಾರತ-ಚೀನಾ ಗಡಿಯ ಸಮೀಪ ಉತ್ತರ ಸಿಕ್ಕಿಂ ನಲ್ಲಿ ಶುಕ್ರವಾರ ಸೇನಾ ವಾಹನವೊಂದು ರಸ್ತೆಯಿಂದ ಸ್ಕಿಡ್ ಆಗಿ ಕಮರಿಗೆ ಬಿದ್ದ ಪರಿಣಾಮ 16 ಮಂದಿ ಸೇನಾ ಯೋಧರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ.
ಉತ್ತರ ಸಿಕ್ಕಿಂನ ಜಮಾದಲ್ಲಿ ಶುಕ್ರವಾರ ಯೋಧರನ್ನು ಹೊತ್ತೊಯ್ಯುತ್ತಿದ್ದ ಸೇನಾ ಟ್ರಕ್ ಅಪಘಾತಕ್ಕೀಡಾಗಿದೆ. ಈ ಅವಘಡದಲ್ಲಿ 16 ಮಂದಿ ಸಾವನ್ನಪ್ಪಿರುವ ಸಾಧ್ಯತೆ ಇದೆ. ಮೃತರಲ್ಲಿ 13 ಯೋಧರು ಮತ್ತು ಮೂವರು ಅಧಿಕಾರಿಗಳು ಸೇರಿದ್ದಾರೆ. ಗಾಯಾಳುಗಳನ್ನು ಉತ್ತರ ಬಂಗಾಳದ ಸೇನಾ ಆಸ್ಪತ್ರೆಗೆ ವಿಮಾನದ ಮೂಲಕ ರವಾನಿಸಲಾಗಿದೆ ಎಂದು ವರದಿಯಾಗಿದೆ.
ಘಟನೆಯ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಘಾತ ವ್ಯಕ್ತಪಡಿಸಿದ್ದಾರೆ. ಯೋಧರು ದೇಶಕ್ಕೆ ನೀಡಿದ ಸೇವೆ ಅವಿಸ್ಮರಣೀಯವಾಗಿದ್ದು, ಘಟನೆಯಿಂದ ತೀವ್ರ ನೋವಾಗಿದೆ ಎಂದು ಹೇಳಿದ್ದಾರೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
Deeply pained by the loss of lives of the Indian Army personnel due to a road accident in North Sikkim.
The nation is deeply grateful for their service and commitment. My condolences to the bereaved families. Praying for the speedy recovery of those who are injured.
— Rajnath Singh (@rajnathsingh) December 23, 2022
The post ಸಿಕ್ಕಿಂನಲ್ಲಿ ಭೀಕರ ರಸ್ತೆ ಅಪಘಾತ : 16 ಮಂದಿ ಯೋಧರು ಸಾವು…! first appeared on Kannada News | suddione.
from ರಾಷ್ಟ್ರೀಯ ಸುದ್ದಿ – Kannada News | suddione https://ift.tt/WjlnQFe
via IFTTT