ಬೆಳಗಾವಿ: ಎರಡು ಕುಟುಂಬಗಳ ನಡುವೆ ಗಲಾಟೆ, ಮೂರು ವರ್ಷದ ಮಗು ಹತ್ಯೆ

ಬೆಳಗಾವಿ ಜಿಲ್ಲೆಯ ಅಥಣಿ(Athani) ತಾಲೂಕಿನ ಬುರ್ಲಟ್ಟಿ ಗ್ರಾಮದಲ್ಲಿ ಎರಡು ಕುಟುಂಬಗಳ ಗಲಾಟೆ ನಡುವೆ ಮೂರು ವರ್ಷದ ಮಗುವನ್ನ ಹತ್ಯೆ ಮಾಡಿದ ಧಾರುಣ ಘಟನೆ ನಡೆದಿದೆ. ಸ್ಥಳಕ್ಕೆ ಐಗಳಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ, ಈ ಕುರಿತು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ಬೆಳಗಾವಿ, ಏ.27: ಎರಡು ಕುಟುಂಬಗಳ ಗಲಾಟೆ ನಡುವೆ ಮೂರು ವರ್ಷದ ಮಗುವನ್ನ ಹತ್ಯೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ(Athani) ತಾಲೂಕಿನ ಬುರ್ಲಟ್ಟಿ ಗ್ರಾಮದಲ್ಲಿ ನಡೆದಿದೆ. ಎದೆ ಮೇಲೆ‌ ಕಾಲಿಟ್ಟು ಬಾಲಕಿ ಶ್ರೀನಿಧಿ ಕಾಳಾಪಾಟೀಲ್(3) ಅವರನ್ನು ಹತ್ಯೆಗೈಯಲಾಗಿದೆ. ಹಣಕಾಸಿನ ವಿಚಾರಕ್ಕೆ ನಡೆದ ಜಗಳದ ವೇಳೆ ಜ್ಯೋತಿಬಾ ಬಾಬರ್‌ ಎಂಬಾತ ಮಗುವಿನ ಮೇಲೆ ಕಾಲಿಟ್ಟು ಕೊಂದಿದ್ದಾನೆ. ಈ ಕುರಿತು ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

Source : https://tv9kannada.com/karnataka/belagavi/karnataka-news-in-kannada-athani-argument-between-two-families-three-year-old-child-killed-krn-822737.html

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group: https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

 

Leave a Reply

Your email address will not be published. Required fields are marked *