“ಬಹು ಸಂಸ್ಕೃತಿ, ಬಹುತ್ವ ಇರುವ ದೇಶದಲ್ಲಿ ಏಕರೂಪದ ಶಿಕ್ಷಣ ವ್ಯವಸ್ಥೆ ಜಾರಿ ಸಾಧ್ಯವಿಲ್ಲ”

ಬಹು ಸಂಸ್ಕೃತಿ, ಬಹುತ್ವ ಇರುವ ದೇಶದಲ್ಲಿ ಏಕರೂಪದ ಶಿಕ್ಷಣ ವ್ಯವಸ್ಥೆ ಜಾರಿ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು: ಬಹು ಸಂಸ್ಕೃತಿ, ಬಹುತ್ವ ಇರುವ ದೇಶದಲ್ಲಿ ಏಕರೂಪದ ಶಿಕ್ಷಣ ವ್ಯವಸ್ಥೆ ಜಾರಿ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಅವರು ಶಿಕ್ಷಣ ನೀತಿ ನಿರೂಪಣೆ ಕುರಿತಂತೆ ನಡೆದ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

ಬಹು ಸಂಸ್ಕೃತಿ, ಬಹುತ್ವ ಇರುವ ದೇಶದಲ್ಲಿ ಏಕರೂಪದ ಶಿಕ್ಷಣ ವ್ಯವಸ್ಥೆ ಜಾರಿ ಮಾಡಲಾಗದು. ಆದ್ದರಿಂದ ಹಳೆ ಶಿಕ್ಷಣ ಪದ್ಧತಿ ಮುಂದುವರೆಸಿ, ಹೊಸ ಶಿಕ್ಷಣ ನೀತಿ ರೂಪಿಸಲು ಪ್ರತ್ಯೇಕ ಸಮಿತಿ ರಚಿಸಲಾಗುವುದು.ಶಿಕ್ಷಣವು ರಾಜ್ಯ ವಿಷಯವಾಗಿರುವುದರಿಂದ ಕೇಂದ್ರ ಸರ್ಕಾರ ನೀತಿ ರೂಪಿಸಲು ಸಾಧ್ಯವಿಲ್ಲ. ರಾಜ್ಯ ಸರ್ಕಾರಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ರಾಷ್ಟ್ರೀಯ ಶಿಕ್ಷಣ ನೀತಿ ರೂಪಿಸಲಾಗಿದೆ. ಶಿಕ್ಷಣ ನೀತಿಯನ್ನು ಕೇಂದ್ರ ರಾಜ್ಯಗಳ ಮೇಲೆ ಒತ್ತಾಯಪೂರ್ವಕವಾಗಿ ಹೇರಲಾಗದು ಎಂದು ಹೇಳಿದರು.

ಬಿಜೆಪಿ ಆಳ್ವಿಕೆಯ ಇತರ ರಾಜ್ಯಗಳೂ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಲು ಹಿಂದೇಟು ಹಾಕುತ್ತಿವೆ. ಕೇರಳ, ತಮಿಳುನಾಡು ರಾಜ್ಯಗಳು  ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸುವುದಿಲ್ಲ ಎಂದು ಕೇಂದ್ರಕ್ಕೆ ಸ್ಪಷ್ಟಪಡಿಸಿವೆ. ಕೇಂದ್ರ ಪುರಸ್ಕೃತ ಯೋಜನೆಗಳು ಎಲ್ಲ ರಾಜ್ಯಗಳಿಗೂ ಅನ್ವಯಿಸುವುದರಿಂದ ಈ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಅನ್ಯಾಯವಾಗಲಾರದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಹೊಸ ಶಿಕ್ಷಣ ನೀತಿಯಿಂದ ಬಡವರು, ಪರಿಶಿಷ್ಟ ಜಾತಿ, ಪಂಗಡದವರು, ಹಿಂದುಳಿದವರು, ಗ್ರಾಮೀಣ ಪ್ರದೇಶದವರಿಗೆ ತೊಂದರೆಯಾಗುತ್ತದೆ. ಉನ್ನತ ಶಿಕ್ಷಣದಲ್ಲಿ ಪ್ರತಿ ವರ್ಷ ಪ್ರಮಾಣ ಪತ್ರ ನೀಡಿದರೂ, ಒಂದು ವರ್ಷ, ಎರಡು ವರ್ಷ ಓದಿದವರಿಗೆ ಎಷ್ಟು ಉದ್ಯೋಗಾವಕಾಶ ದೊರೆಯಲು ಸಾಧ್ಯ? ಉದ್ಯೋಗವಕಾಶ ದೊರೆತು ಹೋದ ಬಡವರ ಮಕ್ಕಳು ಮತ್ತೆ ಓದಲು ಅವಕಾಶ ದೊರೆಯುತ್ತದೆಯೇ? ಈ ಬಗ್ಗೆ ಸಾಕಷ್ಟು ಅನುಮಾನವಿದೆ.ಈ ಶಿಕ್ಷಣ ನೀತಿ ಜಾರಿಗೊಳಿಸಲು ಅಗತ್ಯ ಮೂಲಸೌಲಭ್ಯಗಳು ಶಿಕ್ಷಣ ಸಂಸ್ಥೆಗಳಲ್ಲಿ ಇಲ್ಲ. ಇದರಿಂದ ಅನಗತ್ಯ ಗೊಂದಲಗಳು ಸೃಷ್ಟಿಯಾಗಿದೆ ಎಂದು ಹೇಳಿದರು.

Source : https://zeenews.india.com/kannada/karnataka/uniform-education-system-cannot-be-implemented-in-a-multi-cultural-pluralistic-country-cm-siddaramaiah-153672

Leave a Reply

Your email address will not be published. Required fields are marked *